Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 22:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ರೂಬೇನ್ಯರೂ ಗಾದ್ಯರೂ ಹಾಗೂ ಮನಸ್ಸೆ ಕುಲದ ಅರ್ಧ ಜನರೂ ಕಾನಾನ್ ದೇಶದಲ್ಲಿರುವ ಯೊರ್ದನಿನ ತೀರಪ್ರದೇಶಕ್ಕೆ ಬಂದಾಗ ಅಲ್ಲಿ ಒಂದು ದೊಡ್ಡ ಯಜ್ಞವೇದಿಯನ್ನು ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆಕುಲದ ಅರ್ಧಜನರು ಕಾನಾನ್ ನಾಡಿನಲ್ಲಿರುವ ಜೋರ್ಡನ್ ತೀರಪ್ರದೇಶಕ್ಕೆ ಬಂದಾಗ ಅಲ್ಲಿ ಒಂದು ಮಹಾಬಲಿಪೀಠವನ್ನು ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ರೂಬೇನ್ಯರೂ ಗಾದ್ಯರೂ ಮನಸ್ಸೆಕುಲದ ಅರ್ಧಜನರೂ ಕಾನಾನ್ ದೇಶದಲ್ಲಿರುವ ಯೊರ್ದನ್ ತೀರ ಪ್ರದೇಶಕ್ಕೆ ಬಂದಾಗ ಅಲ್ಲಿ ಒಂದು ಮಹಾವೇದಿಯನ್ನು ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಗ ರೂಬೇನ್ಯರು, ಗಾದ್ಯರು ಮತ್ತು ಮನಸ್ಸೆಕುಲದ ಅರ್ಧಜನರು ಗೆಲಿಲೋತ್ ಎಂಬ ಸ್ಥಳಕ್ಕೆ ಹೋದರು. ಇದು ಕಾನಾನ್ ಪ್ರದೇಶದಲ್ಲಿ ಜೋರ್ಡನ್ ನದಿಯ ಹತ್ತಿರ ಇತ್ತು. ಆ ಸ್ಥಳದಲ್ಲಿ ಅವರು ಸುಂದರವಾದ ಒಂದು ಯಜ್ಞವೇದಿಕೆಯನ್ನು ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ರೂಬೇನ್ಯರೂ ಗಾದ್ಯರೂ ಮನಸ್ಸೆಯ ಅರ್ಧ ಗೋತ್ರದವರು ಕಾನಾನ್ ದೇಶದಲ್ಲಿರುವ ಯೊರ್ದನ್ ನದಿ ಪ್ರಾಂತಕ್ಕೆ ಬಂದಾಗ, ಅಲ್ಲಿ ದೊಡ್ಡ ಬಲಿಪೀಠವನ್ನು ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 22:10
10 ತಿಳಿವುಗಳ ಹೋಲಿಕೆ  

ಯಾಕೋಬನು ಬೆಳಗ್ಗೆ ಎದ್ದು ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಸ್ತಂಭವಾಗಿ ನಿಲ್ಲಿಸಿ ಅದರ ಮೇಲೆ ಎಣ್ಣೆಯನ್ನು ಹೊಯ್ದನು.


ಆಗ ರೂಬೇನ್ಯರೂ ಗಾದ್ಯರೂ ಮನಸ್ಸೆ ಕುಲದ ಅರ್ಧ ಜನರೂ ಕಾನಾನ್ ದೇಶದ ಶೀಲೋವಿನಲ್ಲಿದ್ದ ಇಸ್ರಾಯೇಲರನ್ನು ಬಿಟ್ಟು ಯೆಹೋವನ ಆಜ್ಞೆಗನುಸಾರವಾಗಿ ಮೋಶೆಯಿಂದ ತಮಗೆ ಸಿಕ್ಕಿದ ಸ್ವತ್ತಾದ ಗಿಲ್ಯಾದ್ ದೇಶಕ್ಕೆ ಹೊರಟು ಹೋದರು.


ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆಯ ಅರ್ಧ ಜನರು ಇಸ್ರಾಯೇಲ ದೇಶವಾದ ಕಾನಾನಿನ ಪೂರ್ವಕ್ಕಿರುವ ಯೊರ್ದನ್ ನದಿಯ ತೀರಪ್ರದೇಶದಲ್ಲಿ ಯಜ್ಞವೇದಿಯನ್ನು ಕಟ್ಟಿದ್ದಾರೆಂಬ ವರ್ತಮಾನವು ಮಿಕ್ಕ ಇಸ್ರಾಯೇಲರಿಗೂ ತಿಳಿದಾಗ,


ಅ ದಿನದಲ್ಲಿ ಐಗುಪ್ತ ದೇಶದ ಮಧ್ಯದಲ್ಲಿ ಯೆಹೋವನಿಗೆ ಒಂದು ಯಜ್ಞಪೀಠವು, ದೇಶದ ಮೇರೆಯಲ್ಲಿ ಯೆಹೋವನಿಗೆ ಒಂದು ಸ್ತಂಭವೂ ಇರುವುದು.


ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.


ಅವನು ಅಲ್ಲಿಂದ ಹೊರಟು ಬೇತೇಲಿನ ಪೂರ್ವದಲ್ಲಿರುವ ಗುಡ್ಡಕ್ಕೆ ಬಂದು ತನ್ನ ಗುಡಾರವನ್ನು ಹಾಕಿ ಇಳಿದುಕೊಂಡನು. ಪಶ್ಚಿಮಕ್ಕೆ ಬೇತೇಲ್, ಪೂರ್ವಕ್ಕೆ ಆಯಿ ಎಂಬ ಊರುಗಳಿದ್ದವು. ಅಲ್ಲಿಯೂ ಅಬ್ರಾಮನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಆತನ ಹೆಸರಿನಲ್ಲಿ ಆರಾಧಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು