ಯೆಹೋಶುವ 22:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಈಗ ನೀವು ಪುನಃ ಯೆಹೋವನನ್ನು ತಳ್ಳಿ ಬಿಡುತ್ತಿದ್ದೀರೋ? ನೀವು ಈ ಹೊತ್ತು ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದರೆ, ನಾಳೆಯೇ ಯೆಹೋವನ ಕೋಪಾಗ್ನಿಯು ಇಸ್ರಾಯೇಲ್ ಸರ್ವಸಭೆಯ ಮೇಲೆ ಉರಿಯ ತೊಡಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಇಂತಿರುವಲ್ಲಿ ನೀವು ಮತ್ತೆ ಸರ್ವೇಶ್ವರನನ್ನು ಬಿಟ್ಟುಬಿಡುತ್ತೀರೋ? ನೀವು ಇಂದು ಸರ್ವೇಶ್ವರನಿಗೆ ವಿರುದ್ಧ ತಿರುಗಿಬಿದ್ದರೆ ನಾಳೆಯೇ ಅವರ ಕೋಪಾಗ್ನಿ ಇಸ್ರಯೇಲ್ ಸರ್ವಸಭೆಯ ಮೇಲೆ ಉರಿಯತೊಡಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಈಗ ನೀವು ತಿರಿಗಿ ಯೆಹೋವನನ್ನು ಬಿಡುತ್ತೀರೋ? ನೀವು ಈ ಹೊತ್ತು ಯೆಹೋವನಿಗೆ ವಿರುದ್ಧವಾಗಿ ತಿರುಗಿಬಿದ್ದರೆ ನಾಳೆಯೇ ಆತನ ಕೋಪಾಗ್ನಿಯು ಇಸ್ರಾಯೇಲ್ ಸರ್ವಸಭೆಯ ಮೇಲೆ ಉರಿಯಹತ್ತುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಈಗ ನೀವು ಅದನ್ನೇ ಮಾಡುತ್ತಿದ್ದೀರಿ. ನೀವು ಯೆಹೋವನಿಗೆ ವಿಮುಖರಾಗುತ್ತಿದ್ದೀರಿ. ನೀವು ಮಾಡುತ್ತಿರುವುದನ್ನು ನಿಲ್ಲಿಸದಿದ್ದರೆ, ಪ್ರತಿಯೊಬ್ಬ ಇಸ್ರೇಲಿನವನ ಮೇಲೆಯೂ ಯೆಹೋವನು ಕೋಪಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನೀವು ಈಗ ಯೆಹೋವ ದೇವರ ಕಡೆಯಿಂದ ತಿರುಗಿ ಹೋಗುತ್ತೀರಲ್ಲಾ? “ ‘ಈ ಹೊತ್ತು ಯೆಹೋವ ದೇವರಿಗೆ ವಿರೋಧವಾಗಿ ತಿರುಗಿಬಿದ್ದರೆ, ನಾಳೆ ಅವರು ಇಸ್ರಾಯೇಲ್ ಜನಾಂಗದ ಮೇಲೆ ರೌದ್ರವುಳ್ಳವರಾಗುವರು. ಅಧ್ಯಾಯವನ್ನು ನೋಡಿ |