Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 22:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಿಮ್ಮ ದೇಶವು ಅಶುದ್ಧವಾಗಿದೆ ಎಂದು ತೋರಿದರೆ ಯೆಹೋವನ ಗುಡಾರವಿರುವ ಆತನ ಸ್ವಂತ ಸೀಮೆಗೆ ಬಂದು ನಮ್ಮ ಮಧ್ಯದಲ್ಲಿರುವ ಸ್ವತ್ತನ್ನು ತೆಗೆದುಕೊಳ್ಳಿ. ನಮ್ಮ ದೇವರಾದ ಯೆಹೋವನ ಯಜ್ಞವೇದಿಯ ಹೊರತು ನಿಮಗೋಸ್ಕರ ಇನ್ನೊಂದನ್ನು ಕಟ್ಟಿಕೊಂಡು ಯೆಹೋವನಿಗೂ ನಮಗೂ ವಿರೋಧವಾಗಿ ತಿರುಗಿ ಬೀಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಿಮ್ಮ ನಾಡು ಅಶುದ್ಧವಾಗಿದೆಯೆಂದು ತೋರಿದರೆ ಸರ್ವೇಶ್ವರನ ಗುಡಾರವಿರುವ ಅವರ ಸ್ವಂತ ನಾಡಿಗೆ ಬಂದು ನಮ್ಮ ಮಧ್ಯೆಯಿರುವ ಸೊತ್ತನ್ನು ತೆಗೆದುಕೊಳ್ಳಿ. ನಮ್ಮ ದೇವರಾದ ಸರ್ವೇಶ್ವರನ ಬಲಿಪೀಠ ಒಂದನ್ನು ಬಿಟ್ಟು ನಿಮಗಾಗಿ ಇನ್ನೊಂದನ್ನು ಕಟ್ಟಿಕೊಂಡು ಸರ್ವೇಶ್ವರನಿಗೂ ನಮಗೂ ವಿರುದ್ಧ ತಿರುಗಿಬೀಳಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಿಮ್ಮ ದೇಶವು ಅಶುದ್ಧವಾಗಿದೆಯೆಂದು ತೋರಿದರೆ ಯೆಹೋವನ ಗುಡಾರವಿರುವ ಆತನ ಸ್ವಂತ ಸೀಮೆಗೆ ಬಂದು ನಮ್ಮ ಮಧ್ಯದಲ್ಲಿ ಸ್ವಾಸ್ತ್ಯವನ್ನು ತೆಗೆದುಕೊಳ್ಳಿರಿ. ನಮ್ಮ ದೇವರಾದ ಯೆಹೋವನ ವೇದಿಯ ಹೊರತು ನಿಮಗೋಸ್ಕರ ಇನ್ನೊಂದನ್ನು ಕಟ್ಟಿಕೊಂಡು ಯೆಹೋವನಿಗೂ ನಮಗೂ ವಿರೋಧವಾಗಿ ತಿರುಗಿ ಬೀಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “‘ನಿಮ್ಮ ಪ್ರದೇಶವು ದೇವಾರಾಧನೆ ಮಾಡಲು ಅಶುದ್ಧವಾಗಿದ್ದರೆ ನಮ್ಮ ಪ್ರದೇಶಕ್ಕೆ ಬಂದುಬಿಡಿ. ಯೆಹೋವನ ಗುಡಾರವು ನಮ್ಮ ಪ್ರದೇಶದಲ್ಲಿದೆ. ನೀವು ನಮ್ಮ ಸ್ವಲ್ಪ ಭೂಮಿಯನ್ನು ತೆಗೆದುಕೊಂಡು ಅಲ್ಲಿ ವಾಸವಾಗಿರಬಹುದು. ಆದರೆ ಯೆಹೋವನಿಗೆ ವಿರುದ್ಧವಾಗಿ ಹೋಗಬೇಡಿ. ಬೇರೊಂದು ಯಜ್ಞವೇದಿಕೆಯನ್ನು ಕಟ್ಟಬೇಡಿ. ದೇವದರ್ಶನಗುಡಾರದಲ್ಲಿ ನಾವು ಈಗಾಗಲೇ ಯೆಹೋವನಾದ ನಮ್ಮ ದೇವರ ಯಜ್ಞವೇದಿಕೆಯನ್ನು ಹೊಂದಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನೀವು ಸ್ವಾಧೀನಪಡಿಸುವ ನಾಡು ಅಶುದ್ಧವಾಗಿದ್ದರೆ, ಯೆಹೋವ ದೇವರ ಗುಡಾರವಿರುವ ಯೆಹೋವ ದೇವರ ನಾಡಿಗೆ ನೀವು ಬಂದು, ನಮ್ಮ ಮಧ್ಯದಲ್ಲಿ ಸೊತ್ತನ್ನು ತೆಗೆದುಕೊಳ್ಳಿರಿ. ಯೆಹೋವ ದೇವರ ಬಲಿಪೀಠದ ಹೊರತಾಗಿ ನಿಮಗೋಸ್ಕರ ಒಂದು ಬಲಿಪೀಠವನ್ನು ಕಟ್ಟಿಕೊಳ್ಳುವುದರಿಂದ ನೀವು ಯೆಹೋವ ದೇವರಿಗೆ ವಿರೋಧವಾಗಿ ತಿರುಗಿ ಬೀಳಬೇಡಿರಿ. ನಮಗೆ ವಿರೋಧವಾಗಿಯೂ ತಿರುಗಿ ಬೀಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 22:19
12 ತಿಳಿವುಗಳ ಹೋಲಿಕೆ  

ದೇಶವೆಲ್ಲಾ ತಮ್ಮ ವಶವಾದ ಮೇಲೆ ಇಸ್ರಾಯೇಲ್ಯ ಸಮೂಹದ ಎಲ್ಲಾ ಜನರೂ ಶೀಲೋವಿನಲ್ಲಿ ಕೂಡಿ ಬಂದು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.


‘ನಿನ್ನ ಹೆಂಡತಿಯು ಈ ಪಟ್ಟಣದಲ್ಲಿ ಸೂಳೆಯಾಗುವಳು; ನಿನ್ನ ಗಂಡು ಮತ್ತು ಹೆಣ್ಣು ಮಕ್ಕಳು ಖಡ್ಗದಿಂದ ಹತರಾಗುವರು; ನಿನ್ನ ದೇಶವನ್ನು ಶತ್ರುಗಳು ನೂಲಿನಿಂದ ವಿಭಾಗಿಸಿಕೊಳ್ಳುವರು; ನೀನಂತೂ ಅಜ್ಞಾತವಾದ ದೇಶದಲ್ಲಿ ಸಾಯುವಿ, ಇಸ್ರಾಯೇಲರು ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವುದು ಖಂಡಿತ’” ಎಂಬುದಾಗಿ ಯೆಹೋವನು ಹೇಳಿದನು.


ಎಲ್ಲಾ ಇಸ್ರಾಯೇಲ್ ಪ್ರಾಂತ್ಯಗಳಲ್ಲಿದ್ದ ಯಾಜಕರೂ ಮತ್ತು ಲೇವಿಯರೂ ಅವನೊಡನೆ ಬಂದು ಸೇರಿಕೊಂಡರು.


ನೀನು ಅವರನ್ನು ನಿನ್ನ ಸ್ವಕೀಯ ದೇಶವಾಗಿರುವ ಬೆಟ್ಟದ ಸೀಮೆಗೆ ತಂದು ಬಲಪಡಿಸುವಿ, ಯೆಹೋವನೇ, ನೀನು ಸ್ವಂತ ನಿವಾಸಕ್ಕಾಗಿ ಕಟ್ಟಿಕೊಂಡಿರುವ ಸ್ಥಳದವರೆಗೂ ಕರ್ತನೇ, ನೀನು ನಿನಗಾಗಿ ಸಿದ್ಧಪಡಿಸಿಕೊಂಡಿರುವ ಪವಿತ್ರ ಪರ್ವತದವರೆಗೂ ಅವರನ್ನು ಬರಮಾಡುವಿ.


ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆಯ ಅರ್ಧ ಜನರು ಇಸ್ರಾಯೇಲ ದೇಶವಾದ ಕಾನಾನಿನ ಪೂರ್ವಕ್ಕಿರುವ ಯೊರ್ದನ್ ನದಿಯ ತೀರಪ್ರದೇಶದಲ್ಲಿ ಯಜ್ಞವೇದಿಯನ್ನು ಕಟ್ಟಿದ್ದಾರೆಂಬ ವರ್ತಮಾನವು ಮಿಕ್ಕ ಇಸ್ರಾಯೇಲರಿಗೂ ತಿಳಿದಾಗ,


ಪಾರಸಿಯ ರಾಜ್ಯದ ದಿವ್ಯಪಾಲಕನು ಇಪ್ಪತ್ತೊಂದು ದಿನ ನನ್ನನ್ನು ತಡೆಯಲು ಇಗೋ, ಪ್ರಧಾನ ದಿವ್ಯಪಾಲಕರಲ್ಲೊಬ್ಬನಾದ ಮೀಕಾಯೇಲನು ನನ್ನ ಸಹಾಯಕ್ಕೆ ಬಂದನು; ಅಲ್ಲಿ ಪಾರಸಿಯ ರಾಜರ ಸಂಗಡ ಹೋರಾಡಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು