Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 22:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 “ದೇವಾಧಿದೇವನಾದ ಯೆಹೋವನು ಇದಕ್ಕೆ ಸಾಕ್ಷಿ; ಆ ದೇವಾಧಿದೇವನಾದ ಯೆಹೋವನಿಗೆ ಇದು ಗೊತ್ತಿದೆ. ಇಸ್ರಾಯೇಲರಿಗೂ ಗೊತ್ತಾಗುವುದು. ನಾವು ದ್ರೋಹಿಗಳು, ಯೆಹೋವನ ವಿರುದ್ಧವಾಗಿ ಪಾಪಮಾಡಿದವರು ಆಗಿದ್ದರೆ ಯೆಹೋವನು ನಮ್ಮನ್ನು ಈ ಹೊತ್ತೇ ನಮ್ಮ ಜೀವವನ್ನು ತೆಗೆದುಬಿಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ದೇವಾಧಿದೇವರಾದ ಸರ್ವೇಶ್ವರ ಇದಕ್ಕೆ ಸಾಕ್ಷಿ; ಆ ದೇವಾಧಿದೇವ ಸರ್ವೇಶ್ವರಸ್ವಾಮಿಗೆ ಇದು ಗೊತ್ತಿದೆ. ಇಸ್ರಯೇಲರಿಗೂ ಗೊತ್ತಾಗುವುದು. ನಾವು ದ್ರೋಹಿಗಳು, ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದವರು ಆಗಿದ್ದರೆ ಆ ಸ್ವಾಮಿ ನಮ್ಮನ್ನು ಇಂದೇ ಜೀವದಿಂದುಳಿಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇದಕ್ಕೆ ಸಾಕ್ಷಿ; ದೇವದೇವನಾದ ಯೆಹೋವನಿಗೆ ಇದು ಗೊತ್ತುಂಟು. ಇಸ್ರಾಯೇಲ್ಯರಿಗೂ ಗೊತ್ತಾಗುವದು. ನಾವು ದ್ರೋಹಿಗಳೂ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವರೂ ಆಗಿದ್ದರೆ ಆತನು ನಮ್ಮನ್ನು ಈ ಹೊತ್ತೇ ಕೈಬಿಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ನಮ್ಮ ದೇವರು ಯೆಹೋವನೇ! ನಮ್ಮ ದೇವರು ಯೆಹೋವನೇ ಎಂದು ಇನ್ನೊಮ್ಮೆ ನಾವು ಹೇಳುತ್ತೇವೆ. ನಾವು ಇದನ್ನು ಏಕೆ ಮಾಡಿದೆವೆಂಬುದು ದೇವರಿಗೆ ತಿಳಿದಿದೆ. ನೀವೂ ಅದನ್ನು ತಿಳಿದುಕೊಂಡಿರಬೇಕೆಂಬುದು ನಮ್ಮ ಆಶೆ. ನಾವು ಮಾಡಿದ್ದನ್ನು ನೀವು ವಿವೇಚಿಸಿ ನೋಡಬಹುದು. ನಾವೇನಾದರೂ ತಪ್ಪುಮಾಡಿದ್ದೇವೆಂದು ಅನಿಸಿದ್ದಲ್ಲಿ ಆಗ ನೀವು ನಮ್ಮನ್ನು ಕೊಲ್ಲಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ದೇವಾದಿದೇವರಾದ ಯೆಹೋವ ದೇವರು ಇದಕ್ಕೆ ಸಾಕ್ಷಿ, ನಾವು ದೇವಾದಿದೇವರಾದ ಯೆಹೋವ ದೇವರಿಗೆ ವಿರುದ್ಧ ಪಾಪಮಾಡಿದವರಾಗಿದ್ದರೆ ಅಥವಾ ಅವಿಧೇಯರಾಗಿದ್ದರೆ, ಆ ದೇವರು ನಮ್ಮನ್ನು ಇಂದೇ ಜೀವದಿಂದುಳಿಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 22:22
40 ತಿಳಿವುಗಳ ಹೋಲಿಕೆ  

ಮನುಷ್ಯರ ಹೃದಯಗಳನ್ನು ಬಲ್ಲಂಥ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಲಾಲಿಸಿ, ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸು. ನೀನೊಬ್ಬನೇ ಎಲ್ಲಾ ಮನುಷ್ಯರ ಹೃದಯಗಳನ್ನು ಬಲ್ಲವನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕ ಹಾಗೆ ಫಲವನ್ನು ಕೊಡು.


ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ, ಕರ್ತರ ಕರ್ತನಾಗಿಯೂ ಇದ್ದಾನೆ. ಆತನು ಪರಮದೇವರೂ, ಪರಾಕ್ರಮಿಯೂ ಮತ್ತು ಭಯಂಕರನೂ ಆಗಿದ್ದಾನೆ. ಆತನು ಪಕ್ಷಪಾತ ಮಾಡುವವನಲ್ಲ ಹಾಗೂ ಲಂಚತೆಗೆದುಕೊಳ್ಳುವವನಲ್ಲ.


ಹೃದಯದ ರಹಸ್ಯಗಳನ್ನು ಬಲ್ಲವನಾದ ದೇವರು, ವಿಚಾರಿಸುತ್ತಿರಲಿಲ್ಲವೋ?


ನಾನು ಅಪರಾಧಿಯಲ್ಲವೆಂದು ನಿನಗೆ ತಿಳಿಯಿತಲ್ಲಾ; ನಿನ್ನ ಕೈಯೊಳಗಿಂದ ಬಿಡಿಸತಕ್ಕವರು ಯಾರೂ ಇಲ್ಲವೋ?


ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು, ಹೃದಯವನ್ನು ಪರೀಕ್ಷಿಸುವವನೂ, ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ.


ಆತನ ವಸ್ತ್ರದ ಮೇಲೂ, ತೊಡೆಯ ಮೇಲೂ “ರಾಜಾಧಿರಾಜನೂ ಕರ್ತಾಧಿ ಕರ್ತನೂ” ಎಂಬ ಹೆಸರು ಬರೆದಿದೆ.


ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.


ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.


ತಾನೊಬ್ಬನೇ ಅಮರತ್ವವುಳ್ಳವನೂ ಅಗಮ್ಯವಾದ ಬೆಳಕಿನಲ್ಲಿ ವಾಸಮಾಡುವವನೂ ಆಗಿದ್ದಾನೆ. ಮನುಷ್ಯರಲ್ಲಿ ಯಾರೂ ಆತನನ್ನು ಕಾಣಲಿಲ್ಲ, ಯಾರೂ ಕಾಣಲಾರರು. ಆತನಿಗೆ ಮಾನವೂ ನಿತ್ಯಾಧಿಪತ್ಯವೂ ಎಂದೆಂದಿಗೂ ಇರಲಿ. ಆಮೆನ್.


ನನ್ನ ಮಾತುಗಳು ಸುಳ್ಳಲ್ಲವೆಂಬುದನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ, ತಂದೆಯೂ ಆಗಿರುವಾತನು ನಿರಂತರ ಸ್ತುತಿ ಹೊಂದತಕ್ಕ ದೇವರೇ ಬಲ್ಲನು.


ನಿಮ್ಮಿಂದ ನಾನು ಏನನ್ನೂ ತೆಗೆದುಕೊಳ್ಳುತ್ತಿಲ್ಲವೇಕೆ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ಇಲ್ಲ, ನಿಮ್ಮ ಮೇಲೆ ನಮಗಿರುವ ಪ್ರೀತಿ ಎಷ್ಟೆಂದು ದೇವರೇ ಬಲ್ಲನು.


ಆದ್ದರಿಂದ, ಕರ್ತನಲ್ಲಿ ಭಯವುಳ್ಳವರಾಗಿರಬೇಕೆಂದು ನಾವು, ಮನುಷ್ಯರನ್ನು ಒಡಂಬಡಿಸುತ್ತೇವೆ. ನಾವು ಎಂಥವರೆಂದು ದೇವರಿಗೆ ಪ್ರಕಟವಾಗಿದ್ದೇವೆ. ಅದು ನಿಮ್ಮ ಮನಸ್ಸಾಕ್ಷಿಗೆ ಕೂಡಾ ಗೊತ್ತಾಗಿದೆ ಎಂದು ನಂಬಿಕೊಂಡಿದ್ದೇನೆ.


ನಾನು ಅನ್ಯಾಯ ಮಾಡಿದವನಾಗಿ ಮರಣದಂಡನೆಗೆ ಕಾರಣವಾದ ಏನನ್ನಾದರೂ ಮಾಡಿದ್ದೇಯಾದರೆ ಮರಣ ದಂಡನೆಯನ್ನು ನಿರಾಕರಿಸುವುದಿಲ್ಲ. ಆದರೆ ಇವರು ನನ್ನ ಮೇಲೆ ಹೊರಿಸುವ ಅಪವಾದಗಳು ಪೊಳ್ಳಾಗಿದ್ದ ಪಕ್ಷದಲ್ಲಿ, ಯಾರೂ ನನ್ನನ್ನು ಇವರ ಕೈಗೊಪ್ಪಿಸಲಾಗದು. ನಾನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ” ಎಂದನು.


“ಕರ್ತನೇ, ಎಲ್ಲರ ಹೃದಯವನ್ನು ಬಲ್ಲಾತನೇ, ಯೂದನು ಅಪೊಸ್ತಲತನವೆಂಬ ಈ ಸೇವಾಸ್ಥಾನದಿಂದ ಭ್ರಷ್ಟನಾಗಿ ತಾನು ಹೋಗ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ ಆ ಸ್ಥಾನವನ್ನು ಹೊಂದುವುದಕ್ಕೆ ಈ ಇಬ್ಬರಲ್ಲಿ ನೀನು ಆರಿಸಿ ಕೊಂಡವನನ್ನು ತೋರಿಸಿಕೊಡು” ಎಂದು ಪ್ರಾರ್ಥಿಸಿದರು.


ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?” ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು “ನನ್ನ ಕುರಿಗಳನ್ನು ಮೇಯಿಸು” ಎಂದನು.


ಆಗ ಶಿಷ್ಟರಿಗೂ, ದುಷ್ಟರಿಗೂ, ದೇವರನ್ನು ಸೇವಿಸುವವರಿಗೂ, ಸೇವಿಸದೇ ಇರುವವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ಕಾಣುವಿರಿ.


ನಾನು ಯೆಹೋವನಿಗೆ ಪಾಪ ಮಾಡಿದ್ದರಿಂದ ಆತನ ಕೋಪವನ್ನು ತಾಳಿಕೊಂಡಿರುವೆನು. ಕಾಲಾನುಕಾಲಕ್ಕೆ ಆತನು ತನ್ನ ವ್ಯಾಜ್ಯವನ್ನು ನಿರ್ವಹಿಸಿ, ನನಗೆ ನ್ಯಾಯವನ್ನು ತೀರಿಸುವನು. ನನ್ನನ್ನು ಬೆಳಕಿಗೆ ತರುವನು. ಆತನ ರಕ್ಷಣಾಧರ್ಮವನ್ನು ನೋಡುವೆನು.


“ರಾಜನು ತನ್ನ ಇಚ್ಛಾನುಸಾರ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಗರ್ವದಿಂದ ಉಬ್ಬಿ, ದೇವಾಧಿ ದೇವನನ್ನು ಮಿತಿಮೀರಿ ದೂಷಿಸಿ ನಿಮ್ಮ ಮೇಲಿನ ದೈವ ಕೋಪವು ತೀರುವ ತನಕ ವೃದ್ಧಿಯಾಗಿರುವನು. ದೈವಸಂಕಲ್ಪವು ನೆರವೇರಲೇ ಬೇಕು.


ಅರಸನು ದಾನಿಯೇಲನಿಗೆ ಪ್ರತ್ಯುತ್ತರವಾಗಿ, “ನೀನು ಈ ರಹಸ್ಯವನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ, ರಾಜರ ಒಡೆಯನೂ, ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆ ಎಂಬುದು ನಿಶ್ಚಯ” ಎಂದು ಹೇಳಿದನು.


ಯೆಹೋವನೇ, ನೀನು ನನ್ನನ್ನು ತಿಳಿದಿದ್ದಿ, ನನ್ನನ್ನು ನೋಡುತ್ತಾ ನಿನ್ನೊಂದಿಗೆ ಅನ್ಯೋನ್ಯವಾಗಿರುವ ನನ್ನ ಹೃದಯವನ್ನು ಪರೀಕ್ಷಿಸುತ್ತಿ. ಅವರನ್ನು ಕುರಿಗಳನ್ನೋ ಎಂಬಂತೆ ಕೊಲೆಗೆ ಎಳೆದು ವಧೆಯ ದಿನಕ್ಕೆ ಗೊತ್ತುಮಾಡು.


ದೇವಾಧಿದೇವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ಪ್ರೀತಿಯು ಶಾಶ್ವತವಾದದ್ದು.


ವಿಗ್ರಹಗಳಲ್ಲಿ ಹಿಗ್ಗುವವರೂ, ಮೂರ್ತಿಪೂಜಕರೆಲ್ಲರೂ ನಾಚಿಕೆಗೆ ಒಳಪಡುವರು; ದೇವರುಗಳೆಂದು ಕರೆಯಲ್ಪಡುವವರೇ, ನೀವೆಲ್ಲರೂ ಆತನಿಗೆ ಅಡ್ಡಬೀಳಿರಿ.


ಯೆಹೋವನು ಮಹಾದೇವರೂ, ಎಲ್ಲಾ ದೇವರುಗಳಲ್ಲಿ ಮಹಾರಾಜನೂ ಆಗಿದ್ದಾನೆ.


ದೇವರು ತನ್ನ ಸಭೆಯಲ್ಲಿ ನಿಂತುಕೊಂಡವನಾಗಿ, ದೇವರುಗಳೆಂದು ಕರೆಯಲ್ಪಡುವವರೊಳಗೆ ನ್ಯಾಯವಿಧಿಸುತ್ತಾನೆ.


ಆತನು ನಿನ್ನ ನೀತಿಯನ್ನು ಉದಯದ ಬೆಳಕಿನಂತೆಯೂ, ನಿನ್ನ ನ್ಯಾಯವನ್ನು ಮಧ್ಯಾಹ್ನದ ತೇಜಸ್ಸಿನಂತೆಯೂ ಪ್ರಕಾಶಗೊಳಿಸುವನು.


ಆತನಾದರೋ ನನ್ನ ದಾರಿಯನ್ನು ಬಲ್ಲನು, ಆತನೇ ನನ್ನನ್ನು ಶೋಧಿಸಿ ನೋಡಿದರೆ ಚೊಕ್ಕ ಬಂಗಾರವಾಗಿ ಕಾಣಿಸುವೆನು.


ಅವಿಧೇಯತ್ವವು ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವುದು. ಹಟವು ಮಿಥ್ಯಾಭಕ್ತಿಗೂ, ವಿಗ್ರಹಾರಾಧನೆಗೂ ಸಮಾನವಾಗಿರುವುದು. ನೀನು ಯೆಹೋವನ ಮಾತಿನಂತೆ ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಅರಸುತನದಿಂದ ನಿವಾರಿಸಿಬಿಟ್ಟಿದ್ದಾನೆ” ಎಂದು ಹೇಳಿದನು.


ಯೆಹೋವನು ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ, ಆ ಐಗುಪ್ತ್ಯರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ, ಆ ವಿಷಯದಲ್ಲಿ ಅವರನ್ನು ತಗ್ಗಿಸಿದ್ದರಿಂದ ಯೆಹೋವನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನೆಂದು ಈಗ ತಿಳಿದುಕೊಂಡಿದ್ದೇನೆ” ಅಂದನು.


ಆಗ ರೂಬೇನ್ಯರು, ಗಾದ್ಯರು ಮತ್ತು ಮನಸ್ಸೆ ಕುಲದ ಅರ್ಧ ಜನರು ಇಸ್ರಾಯೇಲ್ ಕುಲಾಧಿಪತಿಗಳಿಗೆ ಹೀಗೆಂದು ಉತ್ತರಿಸಿದರು:


ನೀನು ನೀತಿಯನ್ನು ಸಾಧಿಸಿದ ಶುಭಸಮಾಚಾರವನ್ನು, ಧಾರಳವಾಗಿ ಮಹಾಸಭೆಯಲ್ಲಿ ಪ್ರಕಟಿಸಿದೆನು; ಯೆಹೋವನೇ, ನೀನೇ ಬಲ್ಲೆ.


ಬಲಿಷ್ಠ ದೇವರಾದ ಯೆಹೋವನು ಪೂರ್ವದಿಂದ ಪಶ್ಚಿಮ ದಿಕ್ಕಿನವರೆಗೂ ಇರುವ ಭೂನಿವಾಸಿಗಳೆಲ್ಲರನ್ನೂ, ತನ್ನ ಸನ್ನಿಧಿಯಲ್ಲಿ ಬರಬೇಕೆಂದು ಕರೆಯುತ್ತಾನೆ.


“ಇನ್ನು ಮುಂದೆ ಗರ್ವದಿಂದ ಮಾತನಾಡಬೇಡಿರಿ; ಸೊಕ್ಕಿನ ಮಾತು ನಿಮ್ಮ ಬಾಯಿಂದ ಹೊರಡದಿರಲಿ. ದೇವರಾದ ಯೆಹೋವನು ಸರ್ವಜ್ಞನು; ಆತನು ಮನುಷ್ಯರ ಕ್ರಿಯೆಗಳನ್ನು ತೂಗಿನೋಡುವನು.


ಹೀಗಿದ್ದರೆ ನನ್ನ ಹೆಗಲಿನ ಕೀಲು ತಪ್ಪಲಿ, ತೋಳು ಸಂದಿನಿಂದ ಮುರಿದು ಬೀಳಲಿ.


ದೇವರೇ, ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ಜನರು ನಮ್ಮನ್ನು ಕೊಯ್ಗುರಿಗಳಂತೆ ಎಣಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು