Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 22:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಾವು ಯೆಹೋವನಿಂದ ವಿಮುಖರಾಗಿ ಸರ್ವಾಂಗಹೋಮ, ಸಮಾಧಾನಯಜ್ಞ, ಧಾನ್ಯ ನೈವೇದ್ಯ ಇವುಗಳನ್ನು ಸಮರ್ಪಿಸುವುದಕ್ಕೋಸ್ಕರ ಈ ಯಜ್ಞವೇದಿಯನ್ನು ಕಟ್ಟಿದ್ದರೆ ಯೆಹೋವನು ತಾನೇ ನಮ್ಮನ್ನು ಶಿಕ್ಷಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನಾವು ಸರ್ವೇಶ್ವರನಿಂದ ವಿಮುಖರಾಗಿ ದಹನಬಲಿಯನ್ನಾಗಲಿ, ಸಮಾಧಾನ ಬಲಿಯನ್ನಾಗಲಿ, ಧಾನ್ಯನೈವೇದ್ಯವನ್ನಾಗಲಿ ಸಮರ್ಪಿಸುವುದಕ್ಕಾಗಿ ಈ ಬಲಿಪೀಠವನ್ನು ಕಟ್ಟಿದ್ದರೆ ಸರ್ವೇಶ್ವರನೇ ನಮ್ಮನ್ನು ಶಿಕ್ಷಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಾವು ಯೆಹೋವನಿಂದ ವಿಮುಖರಾಗಿ ಸರ್ವಾಂಗಹೋಮ, ಸಮಾಧಾನಯಜ್ಞ, ಧಾನ್ಯ ನೈವೇದ್ಯ ಇವುಗಳನ್ನು ಸಮರ್ಪಿಸುವದಕ್ಕೋಸ್ಕರ ಈ ವೇದಿಯನ್ನು ಕಟ್ಟಿದ್ದರೆ ಯೆಹೋವನು ತಾನೇ ನಮ್ಮನ್ನು ಶಿಕ್ಷಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಾವು ದೇವರ ಕಟ್ಟಳೆಗಳನ್ನು ಉಲ್ಲಂಘಿಸಿದ್ದರೆ ಯೆಹೋವನೇ ನಮ್ಮನ್ನು ಶಿಕ್ಷಿಸಲಿ ಎಂದು ಆತನಲ್ಲಿ ಕೇಳಿಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಾವು ಯೆಹೋವ ದೇವರ ಕಡೆಗೆ ತಿರುಗಿಕೊಂಡು ದಹನಬಲಿಗಳನ್ನಾದರೂ, ಧಾನ್ಯ ಸಮರ್ಪಣೆಯನ್ನಾದರೂ, ಸಮಾಧಾನದ ಸಮರ್ಪಣೆಗಳನ್ನಾದರೂ, ಅದರ ಮೇಲೆ ಅರ್ಪಿಸುವುದಕ್ಕೋಸ್ಕರ ಬಲಿಪೀಠವನ್ನು ನಮಗಾಗಿ ಕಟ್ಟಿದ್ದರೆ, ಯೆಹೋವ ದೇವರು ಅದನ್ನು ವಿಚಾರಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 22:23
10 ತಿಳಿವುಗಳ ಹೋಲಿಕೆ  

ಅಗಲಿದರೆ ಯೆಹೋವನೇ ಶತ್ರುಗಳ ಕೈಯಿಂದ ದಾವೀದನಿಗೆ ಮುಯ್ಯಿ ತೀರಿಸಲಿ” ಎಂದು ಹೇಳಿ ಅವರ ಮನೆಯವರೊಡನೆ ಒಡಂಬಡಿಕೆ ಮಾಡಿಕೊಂಡು,


ಅವನು ನನ್ನ ಹೆಸರಿನಲ್ಲಿ ಹೇಳಿದ ಮಾತುಗಳಿಗೆ ಯಾರು ಕಿವಿಗೊಡುವದಿಲ್ಲವೋ ಅಂಥವರನ್ನು ನಾನು ಶಿಕ್ಷಿಸುವೆನು.


ನಾನು ದುಷ್ಟನಿಗೆ ದುಷ್ಟನೇ, ‘ನೀನು ಖಂಡಿತವಾಗಿ ಸಾಯುವೆ’ ಎಂದು ಹೇಳುವಾಗ, ನೀನು ಆ ದುಷ್ಟನನ್ನು ತನ್ನ ದುರ್ಮಾರ್ಗದಿಂದ ತಪ್ಪಿಸಿ, ಅವನನ್ನು ಎಚ್ಚರಗೊಳಿಸದೆ ಹೋದರೆ, ಅವನು ತನ್ನ ಅಪರಾಧದಿಂದಲೇ ಸಾಯಬೇಕಾಗುವುದು; ಅವನ ಮರಣಕ್ಕೆ ಹೊಣೆಯಾದ ನಿನಗೆ ನಾನು ಮುಯ್ಯಿತೀರಿಸುವೆನು.


ಆದರೆ ಕಾವಲುಗಾರನು ಬೀಳುವ ಖಡ್ಗವನ್ನು ನೋಡಿಯೂ, ಕೊಂಬನ್ನೂದದೆ, ಸ್ವಜನರನ್ನು ಎಚ್ಚರಿಸದೆ ಇದ್ದರೆ, ಖಡ್ಗವು ಬಿದ್ದು ಆ ಜನರೊಳಗೆ ಯಾರನ್ನೇ ಆಗಲಿ ನಾಶಮಾಡಿದರೆ, ತನ್ನ ಅಧರ್ಮದಲ್ಲೇ ನಾಶಗೊಂಡ ಆ ಮನುಷ್ಯನ ಮರಣಕ್ಕೆ ಕಾವಲುಗಾರನನ್ನೇ ಹೊಣೆಮಾಡುವೆನು.’


ನಾನು ದುಷ್ಟನಿಗೆ, ‘ನೀನು ಖಂಡಿತವಾಗಿ ಸಾಯುವೆ’ ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆಯೂ, ಅವನು ತನ್ನ ಕೆಟ್ಟಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆಯೂ ಇದ್ದರೆ ಆ ದುಷ್ಟನು ತನ್ನ ಅಪರಾಧದಿಂದ ಸಾಯಬೇಕಾಗುವುದು; ಅವನ ಮರಣಕ್ಕೆ ನೀನು ಹೊಣೆಯಾಗುವೆ.


ಯೆಹೋವಾಷನು ಜೆಕರೀಯನ ತಂದೆಯಾದ ಯೆಹೋಯಾದನಿಂದ ತನಗಾದ ಕೃಪೆಯನ್ನು ಮರೆತು ಅವನ ಮಗನನ್ನು ಕೊಲ್ಲಿಸಿದನು. ಜೆಕರೀಯನು ಸಾಯುವಾಗ, “ಯೆಹೋವನೇ ಇದನ್ನು ನೋಡಿ, ತಕ್ಕ ಶಿಕ್ಷೆಯನ್ನು ವಿಧಿಸಲಿ” ಎಂದನು.


ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ ಸರ್ವಾಂಗಹೋಮಗಳೇ ಮುಂತಾದ ಯಜ್ಞಪಶುಗಳನ್ನೂ, ಬೆಳೆಯ ದಶಮಾಂಶಗಳನ್ನೂ, ಯೆಹೋವನಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆಮಾಡಿದ ವಿಶೇಷವಾದ ಕಾಣಿಕೆಗಳನ್ನೂ ಇವುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.


ಆದರೆ ಮಾಂಸವನ್ನು ಅದರ ಜೀವಸತ್ವವಾದ ರಕ್ತದೊಂದಿಗೆ ನೀವು ತಿನ್ನಬಾರದು. ಏಕೆಂದರೆ ರಕ್ತದಲ್ಲಿ ಜೀವ ಇದೆ.


ಒಂದು ವಿಶೇಷವಾದ ಉದ್ದೇಶದಿಂದ ಈ ಕೆಲಸವನ್ನು ಮಾಡಿದ್ದೇವಷ್ಟೇ, ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಇಸ್ರಾಯೇಲ್ ದೇವರಾದ ಯೆಹೋವನಲ್ಲಿ ನಿಮಗೇನು ಪಾಲಿದೆ?’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು