ಯೆಹೋಶುವ 22:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅವರು ಮುಂದೆ ನಮಗಾಗಲಿ, ನಮ್ಮ ಸಂತಾನದವರಿಗಾಗಲಿ ಈ ರೀತಿಯಾಗಿ ಹೇಳಿದರೆ ನಾವು ಅವರಿಗೆ ‘ಯೆಹೋವನ ಯಜ್ಞವೇದಿಯ ಮಾದರಿಯನ್ನು ನೋಡಿರಿ: ನಮ್ಮ ಪೂರ್ವಿಕರು ಇದನ್ನು ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸುವುದಕ್ಕೋಸ್ಕರ ಕಟ್ಟಲಿಲ್ಲ; ಇದು ನಮ್ಮ ನಿಮ್ಮ ಮಧ್ಯದಲ್ಲಿ ಒಂದು ಸಾಕ್ಷಿಯಾಗಿದೆಯಷ್ಟೆ’ ಎಂದು ಹೇಳುವೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಒಂದು ವೇಳೆ ಅವರು ಮುಂದೆ ನಮಗಾಗಲಿ, ನಮ್ಮ ಸಂತಾನದವರಿಗಾಗಲಿ ಈ ಪ್ರಕಾರ ಹೇಳಿದ್ದೇ ಆದರೆ ನಾವು ಅವರಿಗೆ ‘ಸರ್ವೇಶ್ವರನ ಬಲಿಪೀಠವನ್ನು ಹೋಲುವ ಈ ವೇದಿಕೆಯನ್ನು ನೋಡಿ: ನಮ್ಮ ಪೂರ್ವಜರು ಇದನ್ನು ದಹನಬಲಿ, ಸಮರ್ಪಣ ಬಲಿಗಳನ್ನು ಅರ್ಪಿಸುವುದಕ್ಕಾಗಿ ಕಟ್ಟಲಿಲ್ಲ; ಇದು ನಮಗೂ ನಿಮಗೂ ಮಧ್ಯೆ ಸಾಕ್ಷಿಯಾಗಿದೆಯಷ್ಟೆ,’ ಎಂದು ಹೇಳುವೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅವರು ಮುಂದೆ ನಮಗಾಗಲಿ ನಮ್ಮ ಸಂತಾನದವರಿಗಾಗಲಿ ಈ ಪ್ರಕಾರ ಹೇಳಿದರೆ ನಾವು ಅವರಿಗೆ - ಈ ಯೆಹೋವವೇದಿಯ ಮಾದರಿಯನ್ನು ನೋಡಿರಿ; ನಮ್ಮ ಪಿತೃಗಳು ಇದನ್ನು ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸುವದಕ್ಕೋಸ್ಕರ ಕಟ್ಟಲಿಲ್ಲ; ಇದು ನಮಗೂ ನಿಮಗೂ ಮಧ್ಯದಲ್ಲಿ ಸಾಕ್ಷಿಯಾಗಿರುತ್ತದೆಯಷ್ಟೆ ಎಂದು ಹೇಳುವೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳಿಗೆ ‘ನೀವು ಇಸ್ರೇಲಿಗೆ ಸಂಬಂಧಪಟ್ಟವರಲ್ಲ’ ಎಂದು ಹೇಳಿದರೆ, ನಮ್ಮ ಮಕ್ಕಳು ‘ಇಲ್ಲಿ ನೋಡಿ! ಗತಿಸಿಹೋದ ನಮ್ಮ ಪೂರ್ವಿಕರು ಒಂದು ಯಜ್ಞವೇದಿಕೆಯನ್ನು ಕಟ್ಟಿದ್ದಾರೆ. ಆ ಯಜ್ಞವೇದಿಕೆಯು ಪವಿತ್ರ ಗುಡಾರದಲ್ಲಿರುವ ಯಜ್ಞವೇದಿಕೆಯಂತಿದೆ. ನಾವು ಈ ಯಜ್ಞವೇದಿಕೆಯನ್ನು ಸರ್ವಾಂಗಹೋಮಗಳಿಗಾಗಲಿ ಯಜ್ಞಗಳಿಗಾಗಲಿ ಬಳಸುವುದಿಲ್ಲ. ನಾವು ಇಸ್ರೇಲಿಗೆ ಸೇರಿದವರೆಂಬುದಕ್ಕೆ ಈ ಯಜ್ಞವೇದಿಕೆ ಸಾಕ್ಷಿಯಾಗಿದೆ’ ಎಂದು ಹೇಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 “ಇದಲ್ಲದೆ ನಾವು, ‘ಒಂದು ವೇಳೆ ಅವರು ಮುಂದೆ ನಮಗಾಗಲಿ, ನಮ್ಮ ಸಂತತಿಯವರಿಗಾಗಲಿ ಈ ಪ್ರಕಾರ ಹೇಳಿದ್ದೇ ಆದರೆ ನಾವು ಅವರಿಗೆ: ಯೆಹೋವ ದೇವರ ಬಲಿಪೀಠವನ್ನು ಹೋಲುವ ಈ ವೇದಿಕೆಯನ್ನು ನೋಡಿರಿ, ನಮ್ಮ ಪೂರ್ವಜರು ಇದನ್ನು ದಹನಬಲಿ, ಸಮರ್ಪಣ ಬಲಿಗಳನ್ನು ಅರ್ಪಿಸುವುದಕ್ಕಾಗಿ ಕಟ್ಟಲಿಲ್ಲ. ಇದು ನಮಗೂ ನಿಮಗೂ ಮಧ್ಯೆ ಸಾಕ್ಷಿಯಾಗಿದೆಯಷ್ಟೆ,’ ಎಂದು ಹೇಳುವೆವು. ಅಧ್ಯಾಯವನ್ನು ನೋಡಿ |