Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 22:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನಮ್ಮ ದೇವರಾದ ಯೆಹೋವನ ಗುಡಾರದ ಮುಂದಿರುವ ಯಜ್ಞವೇದಿಯ ಹೊರತು ಸರ್ವಾಂಗಹೋಮ, ಧಾನ್ಯನೈವೇದ್ಯ, ಸಮಾಧಾನಯಜ್ಞ, ಮೊದಲಾದವುಗಳನ್ನು ಸಮರ್ಪಿಸುವುದಕ್ಕೋಸ್ಕರ ಬೇರೊಂದು ಯಜ್ಞವೇದಿಯನ್ನು ಕಟ್ಟಿ ಯೆಹೋವನಿಗೆ ವಿರುದ್ಧವಾಗಿ ದ್ರೋಹಿಗಳಾಗಿರದಂತಾಗಲಿ. ಹಾಗೆ ನಮಗೆ ಎಂದಿಗೂ ಆಗದಿರಲಿ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನಮ್ಮ ದೇವರಾದ ಸರ್ವೇಶ್ವರನ ಗುಡಾರದ ಮುಂದಿರುವ ಬಲಿಪೀಠದ ಹೊರತು ದಹನಬಲಿ, ಧಾನ್ಯನೈವೇದ್ಯ, ಸಮಾಧಾನಬಲಿ ಮೊದಲಾದವುಗಳನ್ನು ಸಮರ್ಪಿಸಲು ಬೇರೊಂದು ಬಲಿಪೀಠವನ್ನು ಕಟ್ಟಿ ಸರ್ವೇಶ್ವರನಿಗೆ ವಿಮುಖರಾಗಿ ದ್ರೋಹಿಗಳಾಗುವುದು ನಮಗೆ ದೂರ ಆಗಿರಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನಮ್ಮ ದೇವರಾದ ಯೆಹೋವನ ಗುಡಾರದ ಮುಂದಿರುವ ಯಜ್ಞವೇದಿಯ ಹೊರತು ಸರ್ವಾಂಗಹೋಮ, ಧಾನ್ಯನೈವೇದ್ಯ, ಸಮಾಧಾನಯಜ್ಞ ಮೊದಲಾದವುಗಳನ್ನು ಸಮರ್ಪಿಸುವದಕ್ಕೋಸ್ಕರ ಬೇರೊಂದು ವೇದಿಯನ್ನು ಕಟ್ಟಿ ಯೆಹೋವನಿಗೆ ವಿಮುಖರಾಗಿ ದ್ರೋಹಿಗಳಾಗುವದು ನಮಗೆ ದೂರವಾಗಿರಲಿ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ಯೆಹೋವನಿಗೆ ವಿರೋಧಿಗಳಾಗಲು ನಮಗೆ ನಿಜವಾಗಿಯೂ ಇಷ್ಟವಿಲ್ಲ. ಆತನಿಗೆ ಅವಿಧೇಯರಾಗುವುದಕ್ಕೂ ಇಷ್ಟವಿಲ್ಲ. ನಿಜವಾದ ಯಜ್ಞವೇದಿಕೆಯು ಪವಿತ್ರಗುಡಾರದ ಎದುರಿಗೆ ಮಾತ್ರ ಇದೆ. ಆ ಯಜ್ಞವೇದಿಕೆಯು ನಮ್ಮ ದೇವರಾದ ಯೆಹೋವನದು ಎಂಬುದನ್ನು ನಾವು ಬಲ್ಲೆವು” ಎಂಬುದಾಗಿ ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ಆದರೆ ನಮ್ಮ ದೇವರಾದ ಯೆಹೋವ ದೇವರ ಗುಡಾರದ ಮುಂದೆ ಇರುವ ಅವರ ಯಜ್ಞವೇದಿಯನ್ನು ಅಲ್ಲದೆ ನಾವು ದಹನಬಲಿ, ಧಾನ್ಯ ನೈವೇದ್ಯ ಮತ್ತು ಇತರ ಬಲಿಗೋಸ್ಕರವಾಗಿಯೂ ಮತ್ತೊಂದು ಬಲಿಪೀಠವನ್ನು ಕಟ್ಟಿ, ಯೆಹೋವ ದೇವರಿಗೆ ವಿರೋಧವಾಗಿ ವಿಮುಖರಾಗಿ ತಿರುಗಿಬೀಳುವುದು ನಮಗೆ ದೂರವಾಗಿರಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 22:29
16 ತಿಳಿವುಗಳ ಹೋಲಿಕೆ  

ಅದಕ್ಕೆ ಜನರು, “ಯೆಹೋವನ ಸೇವೆಯನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸುವುದು ನಮಗೆ ದೂರವಾಗಿರಲಿ.


ಹಾಗಾದರೆ ಏನು ಹೇಳೋಣ? ದೇವರಲ್ಲಿ ಅನ್ಯಾಯ ಉಂಟೋ? ಎಂದಿಗೂ ಇಲ್ಲ.


ಪಾಪದ ಪಾಲಿಗೆ ಸತ್ತವರಾದ ನಾವು ಇನ್ನು ಅದರಲ್ಲೇ ಬದುಕುವುದು ಹೇಗೆ?


ದೇವರು ಅನ್ಯಾಯಗಾರನಾಗಿದ್ದರೆ ಲೋಕಕ್ಕೆ ನ್ಯಾಯ ತೀರ್ಪಾಗುವುದಾದರೂ ಹೇಗೆ?


ಹಿಜ್ಕೀಯನು ಒಂದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಿ ಅದರ ಮೇಲೆಯೇ ಧೂಪಹಾಕಬೇಕೆಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ, ದೇವರ ಬೇರೆ ಎಲ್ಲಾ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಕೆಡವಿಸಿ ಬಿಟ್ಟನಲ್ಲವೆ?


ಒಂದು ವೇಳೆ ನೀವು, ‘ನಮ್ಮ ದೇವರಾದ ಯೆಹೋವನ ಮೇಲೆ ಭರವಸವಿಟ್ಟಿದ್ದೇವೆ’ ಎಂದು ಹೇಳುವುದಾದರೆ ಹಿಜ್ಕೀಯನು, ‘ಯೆರೂಸಲೇಮಿನ ಯಜ್ಞವೇದಿಯ ಮುಂದೆಯೇ ಆರಾಧನೆಮಾಡಬೇಕು’ ಎಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ ಆ ಯೆಹೋವನ ಪೂಜಾಸ್ಥಳಗಳನ್ನೂ, ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದ್ದಾನಲ್ಲಾ,


ಅದಕ್ಕೆ ನಾಬೋತನು ಅಹಾಬನಿಗೆ, “ನಾನು ಪಿತ್ರಾರ್ಜಿತ ಸ್ವತ್ತನ್ನು ಮಾರದಂತೆ ಯೆಹೋವನು ನನ್ನನ್ನು ತಡೆಯಲಿ” ಎಂದು ಉತ್ತರಕೊಟ್ಟನು.


ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ, ಆತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದೇ ಇಲ್ಲ; ಬಿಟ್ಟರೆ ಆತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು.


ಈ ಕಾರಣದಿಂದಲೇ, ‘ಬನ್ನಿ, ಒಂದು ಯಜ್ಞವೇದಿಯನ್ನು ಕಟ್ಟೋಣ. ಅದು ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸುವುದಕ್ಕಲ್ಲ,’


ನಾವು ಯೆಹೋವನಿಂದ ವಿಮುಖರಾಗಿ ಸರ್ವಾಂಗಹೋಮ, ಸಮಾಧಾನಯಜ್ಞ, ಧಾನ್ಯ ನೈವೇದ್ಯ ಇವುಗಳನ್ನು ಸಮರ್ಪಿಸುವುದಕ್ಕೋಸ್ಕರ ಈ ಯಜ್ಞವೇದಿಯನ್ನು ಕಟ್ಟಿದ್ದರೆ ಯೆಹೋವನು ತಾನೇ ನಮ್ಮನ್ನು ಶಿಕ್ಷಿಸಲಿ.


ಯೋಸೇಫನು, “ಹಾಗೆ ಎಂದಿಗೂ ಆಗಬಾರದು. ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವೇ ನನಗೆ ಗುಲಾಮನಾಗಿರಲಿ. ನೀವಾದರೋ ಸಮಾಧಾನವಾಗಿ ನಿಮ್ಮ ತಂದೆಯ ಬಳಿಗೆ ಹೋಗಿರಿ” ಎಂದನು.


ಅವರು ಅವನಿಗೆ, “ನಮ್ಮ ಒಡೆಯನೇ, ಇಂಥಾ ಮಾತುಗಳನ್ನು ಹೇಳುವುದೇನು? ನಿನ್ನ ಸೇವಕರು ಇಂಥಾ ಕೃತ್ಯವನ್ನು ಎಂದಿಗೂ ಮಾಡುವವರಲ್ಲ.


ಅವರು ಮುಂದೆ ನಮಗಾಗಲಿ, ನಮ್ಮ ಸಂತಾನದವರಿಗಾಗಲಿ ಈ ರೀತಿಯಾಗಿ ಹೇಳಿದರೆ ನಾವು ಅವರಿಗೆ ‘ಯೆಹೋವನ ಯಜ್ಞವೇದಿಯ ಮಾದರಿಯನ್ನು ನೋಡಿರಿ: ನಮ್ಮ ಪೂರ್ವಿಕರು ಇದನ್ನು ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸುವುದಕ್ಕೋಸ್ಕರ ಕಟ್ಟಲಿಲ್ಲ; ಇದು ನಮ್ಮ ನಿಮ್ಮ ಮಧ್ಯದಲ್ಲಿ ಒಂದು ಸಾಕ್ಷಿಯಾಗಿದೆಯಷ್ಟೆ’ ಎಂದು ಹೇಳುವೆವು.


ಯಾಜಕನಾದ ಫೀನೆಹಾಸನೂ ಅವನ ಜೊತೆಯಲ್ಲಿ ಬಂದ ಕುಲಾಧಿಪತಿಗಳಾಗಿರುವ ಇಸ್ರಾಯೇಲ್ ಪ್ರಭುಗಳು, ರೂಬೇನ್, ಗಾದ್, ಮನಸ್ಸೆಯ ಕುಲಗಳವರ ಮಾತುಗಳನ್ನು ಕೇಳಿ ಸಂತೋಷಪಟ್ಟರು.


ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ ಸರ್ವಾಂಗಹೋಮಗಳೇ ಮುಂತಾದ ಯಜ್ಞಪಶುಗಳನ್ನೂ, ಬೆಳೆಯ ದಶಮಾಂಶಗಳನ್ನೂ, ಯೆಹೋವನಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆಮಾಡಿದ ವಿಶೇಷವಾದ ಕಾಣಿಕೆಗಳನ್ನೂ ಇವುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು