Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 22:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅವರು ಬಹು ಸಂತೋಷಪಟ್ಟು ದೇವರನ್ನು ಕೊಂಡಾಡಿ ರೂಬೇನ್ ಗಾದ್ ಕುಲಗಳೊಡನೆ ಯುದ್ಧ ಮಾಡಿ ಅವರ ದೇಶವನ್ನು ಹಾಳುಮಾಡಬೇಕೆಂಬ ಆಲೋಚನೆಯನ್ನು ಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅವರು ಕೂಡ ಬಹಳ ಸಂತೋಷಪಟ್ಟು ದೇವರಿಗೆ ಧನ್ಯವಾದ ಸಲ್ಲಿಸಿದರು. ರೂಬೇನ್ ಹಾಗೂ ಗಾದ್ ಕುಲಗಳೊಡನೆ ಯುದ್ಧಮಾಡಿ ಅವರ ನಾಡನ್ನು ಹಾಳುಮಾಡಬೇಕೆಂಬ ಆಲೋಚನೆಯನ್ನು ತೊರೆದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅವರೂ ಬಹುಸಂತೋಷ ಪಟ್ಟು ದೇವರನ್ನು ಕೊಂಡಾಡಿ ರೂಬೇನ್ ಗಾದ್ ಕುಲಗಳೊಡನೆ ಯುದ್ಧಮಾಡಿ ಅವರ ದೇಶವನ್ನು ಹಾಳುಮಾಡಬೇಕೆಂಬ ಆಲೋಚನೆಯನ್ನು ಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆಗ ಇಸ್ರೇಲರಿಗೆ ಸಮಾಧಾನವಾಯಿತು. ಅವರು ಸಂತೋಷಪಟ್ಟು ದೇವರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು. ಅವರು ರೂಬೇನ್ಯರ, ಗಾದ್ಯರ ಮತ್ತು ಮನಸ್ಸೆ ಕುಲದವರೊಡನೆ ಯುದ್ಧ ಮಾಡಬಾರದೆಂದೂ ಅವರು ವಾಸಮಾಡುತ್ತಿರುವ ಪ್ರದೇಶವನ್ನು ನಾಶಮಾಡಬಾರದೆಂದೂ ನಿರ್ಧರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆ ಮಾತನ್ನು ಇಸ್ರಾಯೇಲರು ಕೇಳಿ ಸಂತೋಷಪಟ್ಟು ದೇವರನ್ನು ಕೊಂಡಾಡಿದರು. ಆದ್ದರಿಂದ ಅವರು ರೂಬೇನ್ಯರೂ ಗಾದ್ಯರೂ ನಿವಾಸವಾಗಿದ್ದ ನಾಡಿನ ಮೇಲೆ ಯುದ್ಧಮಾಡಿ ಅವರನ್ನು ನಾಶಮಾಡಬೇಕೆಂಬ ಆಲೋಚನೆಯನ್ನು ಬಿಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 22:33
13 ತಿಳಿವುಗಳ ಹೋಲಿಕೆ  

ಸಿಮೆಯೋನನು ಆ ಮಗುವನ್ನು ತನ್ನ ಕೈಯಲ್ಲಿ ಎತ್ತಿಕೊಂಡು ದೇವರನ್ನು ಕೊಂಡಾಡುತ್ತಾ,


ಆಗ ಆ ರಹಸ್ಯವು ರಾತ್ರಿಯ ಸ್ವಪ್ನದಲ್ಲಿ ದಾನಿಯೇಲನಿಗೆ ಪ್ರಕಟವಾಯಿತು. ಕೂಡಲೆ ದಾನಿಯೇಲನು ಪರಲೋಕ ದೇವರನ್ನು ಹೀಗೆ ಸ್ತುತಿಸಿದನು,


ತರುವಾಯ ದಾವೀದನು ನೆರೆದ ಸಭೆಯವರಿಗೆಲ್ಲಾ, “ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ” ಎಂದು ಹೇಳಲು ಸಮೂಹದವರೆಲ್ಲರೂ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಸ್ತುತಿಸುತ್ತಾ ತಲೆಬಾಗಿ ದೇವರಿಗೂ ಮತ್ತು ಅರಸನಿಗೂ ನಮಸ್ಕರಿಸಿದರು.


ಯಾಜಕನಾದ ಫೀನೆಹಾಸನೂ ಅವನ ಜೊತೆಯಲ್ಲಿ ಬಂದ ಕುಲಾಧಿಪತಿಗಳಾಗಿರುವ ಇಸ್ರಾಯೇಲ್ ಪ್ರಭುಗಳು, ರೂಬೇನ್, ಗಾದ್, ಮನಸ್ಸೆಯ ಕುಲಗಳವರ ಮಾತುಗಳನ್ನು ಕೇಳಿ ಸಂತೋಷಪಟ್ಟರು.


ನಮ್ಮ ಕರ್ತನಾದ ಯೇಸುಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ, ಆತನು ಪರಲೋಕದಲ್ಲಿನ ಸಕಲ ಆತ್ಮೀಕ ಆಶೀರ್ವಾದಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.


ಅವನ ಬರುವಿಕೆಯಿಂದ ಮಾತ್ರವಲ್ಲದೆ ನಿಮ್ಮಿಂದ ಅವನು ಬಹಳ ಸಮಾಧಾನವನ್ನು ಹೊಂದಿದೆನೆಂದೂ, ನಿಮ್ಮ ಹಂಬಲ, ನಿಮ್ಮ ದುಃಖ, ನನ್ನ ಮೇಲಿರುವ ನಿಮ್ಮ ಕಾಳಜಿ; ಇವುಗಳನ್ನು ನಮಗೆ ತಿಳಿಸಿದಾಗ ನಾನು ಇನ್ನೂ ಹೆಚ್ಚಾಗಿ ಸಂತೋಷಪಟ್ಟೆನು.


ಅವರು ಓದಿ ಅದರಿಂದ ಧೈರ್ಯ ತಂದುಕೊಂಡು ಸಂತೋಷಪಟ್ಟರು.


ಗುಂಪುಸೇರಿದ್ದವರೆಲ್ಲರೂ ಈ ಮಾತುಗಳನ್ನು ಕೇಳಿ ಮೌನವಾಗಿದ್ದು ಬಾರ್ನಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕ ಕಾರ್ಯಗಳನ್ನೂ, ಅದ್ಭುತಕಾರ್ಯಗಳನ್ನೂ ವಿವರಿಸಿದ್ದನ್ನು ಕಿವಿಗೊಟ್ಟು ಕೇಳಿದರು.


ಮಹಾಯಾಜಕನಾದ ಎಲ್ಲಾಜಾರನ ಮಗನಾದ ಫೀನೆಹಾಸನು, ಪ್ರಭುಗಳು, ಗಿಲ್ಯಾದ್ ಸೀಮೆಯಲ್ಲಿದ್ದ ರೂಬೇನ್ಯರು, ಗಾದ್ಯರು ಇವರ ಬಳಿಯಿಂದ ಕಾನಾನ್ ದೇಶದಲ್ಲಿದ್ದ ಇಸ್ರಾಯೇಲರ ಬಳಿಗೆ ಬಂದು, ಅವರಿಗೆ ಈ ವರ್ತಮಾನವನ್ನು ತಿಳಿಸಲು


ಬಳಲಿ ಬಾಯಾರಿದವನಿಗೆ ತಣ್ಣೀರು ಹೇಗೋ, ದೇಶಾಂತರದಿಂದ ಬಂದ ಒಳ್ಳೆಯ ಸಮಾಚಾರವು ಹಾಗೆಯೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು