ಯೆಹೋಶುವ 22:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವರನ್ನು ಆಶೀರ್ವದಿಸಿ “ನೀವು ಬಹಳ ಸಮೃದ್ಧಿಯುಳ್ಳವರಾಗಿ ದನಕುರಿ, ಬೆಳ್ಳಿಬಂಗಾರ, ತಾಮ್ರ, ಕಬ್ಬಿಣ, ವಸ್ತ್ರ, ಮೊದಲಾದ ವಸ್ತುಗಳನ್ನು ತೆಗೆದುಕೊಂಡು ನಿಮ್ಮನಿಮ್ಮ ನಿವಾಸಗಳಿಗೆ ಹೋಗಿರಿ. ನಿಮ್ಮ ಶತ್ರುಗಳಿಂದ ತೆಗೆದುಕೊಂಡ ಕೊಳ್ಳೆಯಲ್ಲಿ ನಿಮ್ಮ ಸಹೋದರರಿಗೂ ಪಾಲು ಕೊಡಿರಿ” ಎಂದನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ನೀವು ಬಹಳ ಆಸ್ತಿಯುಳ್ಳವರಾಗಿ ದನಕರು, ಬೆಳ್ಳಿಬಂಗಾರ, ಕಂಚು ಕಬ್ಬಿಣ, ವಸ್ತ್ರ ಮೊದಲಾದ ವಸ್ತುಗಳನ್ನು ತೆಗೆದುಕೊಂಡು ನಿಮ್ಮ ನಿಮ್ಮ ನಿವಾಸಗಳಿಗೆ ತೆರಳಿರಿ. ನೀವು ಶತ್ರುಗಳಿಂದ ಪಡೆದ ಕೊಳ್ಳೆಯಲ್ಲಿ ನಿಮ್ಮ ಸಹೋದರರಿಗೂ ಪಾಲುಕೊಡಿ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನೀವು ಬಹಳ ದನ, ಕುರಿ, ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ವಸ್ತ್ರ ಮೊದಲಾದ ವಸ್ತು ಸಮೃದ್ಧಿಯುಳ್ಳವರಾಗಿ ನಿಮ್ಮ ನಿವಾಸಗಳಿಗೆ ಹೋಗಿರಿ; ನೀವು ಶತ್ರುಗಳಿಂದ ತೆಗೆದುಕೊಂಡ ಕೊಳ್ಳೆಯಲ್ಲಿ ನಿಮ್ಮ ಸಹೋದರರಿಗೂ ಪಾಲು ಕೊಡಿರಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅವನು, “ನೀವು ಬಹಳ ಶ್ರೀಮಂತರಾಗಿದ್ದೀರಿ, ನಿಮ್ಮಲ್ಲಿ ಬಹಳ ಪಶುಗಳಿವೆ; ನಿಮ್ಮಲ್ಲಿ ಚಿನ್ನ, ಬೆಳ್ಳಿ ಮತ್ತು ಬೆಲೆಬಾಳುವ ರತ್ನಾಭರಣಗಳಿವೆ. ನಿಮ್ಮಲ್ಲಿ ಸುಂದರವಾದ ಅನೇಕ ಬಟ್ಟೆಗಳಿವೆ. ನೀವು ನಿಮ್ಮ ಶತ್ರುಗಳಿಂದ ಹಲವಾರು ವಸ್ತುಗಳನ್ನು ತೆಗೆದುಕೊಂಡಿದ್ದೀರಿ. ಈ ವಸ್ತುಗಳನ್ನು ನಿಮ್ಮ ಸಹೋದರರೊಂದಿಗೂ ಹಂಚಿಕೊಳ್ಳಿರಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ನೀವು ಬಹು ಆಸ್ತಿಯುಳ್ಳವರಾಗಿ ಪಶುಗಳು, ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಬಹು ಹೆಚ್ಚಾದ ವಸ್ತ್ರಗಳೊಂದಿಗೆ ಹಿಂದಿರುಗಿ, ನಿಮ್ಮ ಗುಡಾರಗಳಿಗೆ ಹೋಗಿರಿ. ನಿಮ್ಮ ಶತ್ರುಗಳ ಕೊಳ್ಳೆಯನ್ನು ನಿಮ್ಮ ಸಹೋದರರ ಸಂಗಡ ಹಂಚಿಕೊಳ್ಳಿರಿ,” ಎಂದನು. ಅಧ್ಯಾಯವನ್ನು ನೋಡಿ |