ಯೆಹೋಶುವ 23:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸುವುದೇ ಇಲ್ಲವೆಂದು ತಿಳಿದುಕೊಳ್ಳಿರಿ. ಅವರೇ ನಿಮಗೆ ಉರುಲೂ ಬೋನೂ ಆಗಿರುವರು. ಅವರು ಪಕ್ಕೆಗೆ ಹೊಡೆಯುವ ಕೊರಡೆಯಂತೆಯೂ ಕಣ್ಣಿಗೆ ಚುಚ್ಚುವ ಮುಳ್ಳಿನಂತೆಯೂ ಇರುವರು. ಕಡೆಯಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟ ಈ ಉತ್ತಮ ದೇಶದಲ್ಲಿ ನೀವು ಇಲ್ಲದಂತಾಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಮಿಶ್ರವಾದರೆ ನಿಮ್ಮ ದೇವರಾದ ಸರ್ವೇಶ್ವರ ಅವರನ್ನು ನಿಮ್ಮ ಮಧ್ಯೆಯಿಂದ ಹೊರಡಿಸುವುದೇ ಇಲ್ಲವೆಂಬುದು ನಿಮಗೆ ತಿಳಿದಿರಲಿ. ಆ ಜನರೇ ನಿಮಗೆ ಉರುಳೂ ಬೋನೂ ಆಗುವರು; ಪಕ್ಕೆಗೆ ಬಡಿಯುವ ಕೊರಡಾಗಿಯೂ ಇರಿಯುವ ಶೂಲವಾಗಿಯೂ ಕಣ್ಣಿಗೆ ಚುಚ್ಚುವ ಮುಳ್ಳಾಗಿಯೂ ಮಾರ್ಪಡುವರು. ಕಡೆಗೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಟ್ಟ ಈ ಚೆಲುವ ನಾಡಲ್ಲಿ ನೀವೇ ಇಲ್ಲದಂತಾಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸುವದೇ ಇಲ್ಲವೆಂದು ತಿಳಿದುಕೊಳ್ಳಿರಿ. ಅವರೇ ನಿಮಗೆ ಉರುಲೂ ಬೋನೂ ಆಗುವರು. ಅವರು ಪಕ್ಕೆಗೆ ಹೊಡೆಯುವ ಕೊರಡೆಯಂತೆಯೂ ಕಣ್ಣುಚುಚ್ಚುವ ಮುಳ್ಳಿನಂತೆಯೂ ಇರುವರು. ಕಡೆಯಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟ ಈ ಉತ್ತಮ ದೇಶದಲ್ಲಿ ಇಲ್ಲದಂತಾಗುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನಿಮ್ಮ ದೇವರಾದ ಯೆಹೋವನು ಶತ್ರುಗಳನ್ನು ಸೋಲಿಸಲು ನಿಮಗೆ ಸಹಾಯ ಮಾಡುವುದಿಲ್ಲ, ಅವರು ನಿಮಗೆ ಉರುಲಿನಂತಾಗುತ್ತಾರೆ. ಹೊಗೆ ಮತ್ತು ಧೂಳು ನಿಮ್ಮ ಕಣ್ಣಿಗೆ ನೋವನ್ನುಂಟು ಮಾಡುವಂತೆ ಅವರು ನಿಮಗೆ ನೋವನ್ನುಂಟು ಮಾಡುತ್ತಾರೆ; ಈ ಒಳ್ಳೆಯ ದೇಶದಿಂದ ನಿಮ್ಮನ್ನು ಬಲಾತ್ಕಾರದಿಂದ ಹೊರಗಟ್ಟಲಾಗುವುದು. ನಿಮ್ಮ ದೇವರಾದ ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿದ್ದಾನೆ. ಆದರೆ ಯೆಹೋವನ ಆಜ್ಞೆಯನ್ನು ಪಾಲಿಸದಿದ್ದಲ್ಲಿ ನೀವು ಇದನ್ನು ಕಳೆದುಕೊಳ್ಳಬೇಕಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಿಮ್ಮ ದೇವರಾದ ಯೆಹೋವ ದೇವರು ಇನ್ನು ಮೇಲೆ ಈ ಜನಾಂಗಗಳನ್ನು ನಿಮ್ಮ ಮುಂದೆ ಹೊರಡಿಸಿಬಿಡುವುದಿಲ್ಲ. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಈ ಒಳ್ಳೆಯ ನಾಡಿನೊಳಗಿಂದ ನೀವು ನಾಶವಾಗುವವರೆಗೂ ಅವರು ನಿಮಗೆ ಉರುಲೂ ಬೋನೂ ಆಗಿರುವರು. ಇದಲ್ಲದೆ ದೇವರು ನಿಮ್ಮ ಪಕ್ಕೆಯಲ್ಲಿ ಶೂಲವಾಗಿಯೂ ನಿಮ್ಮ ಕಣ್ಣುಗಳಿಗೆ ಮುಳ್ಳುಗಳಾಗಿಯೂ ಇರುವರೆಂದು ನಿಶ್ಚಯವಾಗಿ ತಿಳಿದುಕೊಳ್ಳುವಿರಿ. ಅಧ್ಯಾಯವನ್ನು ನೋಡಿ |