Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 23:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆತನು ಇಸ್ರಾಯೇಲ್ಯರ ಹಿರಿಯ ಪ್ರಭುಗಳು, ನ್ಯಾಯಾಧಿಪತಿಗಳು, ಅಧಿಕಾರಿಗಳು ಅಲ್ಲದೆ ಎಲ್ಲಾ ಇಸ್ರಾಯೇಲರ ಜನರನ್ನು ತನ್ನ ಬಳಿಗೆ ಕರಿಸಿ ಅವರಿಗೆ, “ನಾನು ದಿನತುಂಬಿದ ಮುದುಕನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆತ ಇಸ್ರಯೇಲರೆಲ್ಲರನ್ನು, ಅವರ ಹಿರಿಯರನ್ನು, ಮುಖ್ಯಸ್ಥರನ್ನು, ನ್ಯಾಯಾಧಿಪತಿಗಳನ್ನು ಹಾಗೂ ಅಧಿಕಾರಿಗಳನ್ನು ತನ್ನ ಬಳಿಗೆ ಕರೆಯಿಸಿದನು. ಅವರಿಗೆ, “ನಾನು ಮುಪ್ಪಿನ ಮುದುಕನಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದಿನತುಂಬಿದ ಮುದುಕನಾದ ಯೆಹೋಶುವನು ಇಸ್ರಾಯೇಲ್ಯರ ಹಿರಿಯರು, ಪ್ರಭುಗಳು, ನ್ಯಾಯಾಧಿಪತಿಗಳು, ಅಧಿಕಾರಿಗಳು ಇವರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ತನ್ನ ಬಳಿಗೆ ಕರಿಸಿ ಅವರಿಗೆ - ನಾನು ದಿನತುಂಬಿದ ಮುದುಕನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ಯೆಹೋಶುವನು ಎಲ್ಲಾ ಹಿರಿಯನಾಯಕರನ್ನು, ಕುಟುಂಬದ ಮುಖ್ಯಸ್ಥರನ್ನು, ನ್ಯಾಯಾಧೀಶರನ್ನು ಮತ್ತು ಇಸ್ರೇಲರ ಅಧಿಕಾರಿಗಳನ್ನು ಸಭೆ ಸೇರಿಸಿದನು. ಯೆಹೋಶುವನು ಅವರಿಗೆ, “ನಾನು ಬಹಳ ಮುದುಕನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಒಂದು ದಿನ ಅವನು ಸಮಸ್ತ ಇಸ್ರಾಯೇಲರನ್ನೂ ಅವರ ಹಿರಿಯರನ್ನೂ ಅವರ ಮುಖ್ಯಸ್ಥರನ್ನೂ ಅವರ ನ್ಯಾಯಾಧಿಪತಿಗಳನ್ನೂ ಅವರ ಅಧಿಕಾರಿಗಳನ್ನೂ ಕರೆಯಿಸಿ ಅವರಿಗೆ, “ನಾನು ದಿನತುಂಬಿದ ವೃದ್ಧನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 23:2
11 ತಿಳಿವುಗಳ ಹೋಲಿಕೆ  

ತರುವಾಯ ಯೆಹೋಶುವನು ಇಸ್ರಾಯೇಲ್ಯರ ಎಲ್ಲಾ ಕುಲದವರನ್ನು ಶೆಕೆಮಿನಲ್ಲಿ ಸಭೆ ಸೇರಿಸಿದನು. ಹಿರಿಯರು, ಪ್ರಧಾನರು, ನ್ಯಾಯಾಧಿಪತಿಗಳು, ಅಧಿಕಾರಿಗಳು ಬಂದು ದೇವರ ಸನ್ನಿಧಿಯಲ್ಲಿ ಕಾಣಿಸಿಕೊಂಡರು.


ದಾವೀದನು ಇಸ್ರಾಯೇಲರ ಎಲ್ಲಾ ಗೋತ್ರಗಳ ಅಧಿಪತಿಗಳನ್ನು, ಅರಸನ ಸೇವೆಮಾಡುತ್ತಿರುವ ವರ್ಗನಾಯಕರು, ಸಹಸ್ರಾಧಿಪತಿಗಳು, ಶತಾಧಿಪತಿಗಳು ಅರಸನ ದನಕುರಿ ಮೊದಲಾದ ಸಂಪತ್ತಿನ ಮೇಲ್ವಿಚಾರಕರು, ರಾಜಪುತ್ರ ಪಾಲಕರು, ಕಂಚುಕಿಗಳು, ಯುದ್ಧವೀರರು ಹಾಗೂ ಎಲ್ಲಾ ಪ್ರಧಾನರನ್ನು ಯೆರೂಸಲೇಮಿಗೆ ಕರೆಯಿಸಿದನು.


ನಿಮ್ಮ ಕುಲಗಳ ಹಿರಿಯರನ್ನೂ, ಅಧಿಪತಿಗಳನ್ನೂ ನನ್ನ ಬಳಿಗೆ ಕೂಡಿಸಿರಿ; ನಾನು ಈ ಮಾತುಗಳನ್ನು ಅವರಿಗೆ ತಿಳಿಸಿ ಅವರಿಗೆ ವಿರುದ್ಧವಾಗಿ ಸಾಕ್ಷಿಗಳಾಗುವುದಕ್ಕೆ ಭೂಮಿ ಮತ್ತು ಆಕಾಶಗಳನ್ನು ಕರೆಯುವೆನು.


ನಿಮ್ಮ ದೇವರಾದ ಯೆಹೋವನು ನಿಮಗೋಸ್ಕರ ಜನಾಂಗಗಳಿಗೆ ಮಾಡಿದೆಲ್ಲವನ್ನೂ ನೀವೆಲ್ಲರೂ ನೋಡಿದ್ದೀರಷ್ಟೇ. ಹೌದು, ನಿಮಗಾಗಿ ಯುದ್ಧ ಮಾಡಿದಾತನು ನಿಮ್ಮ ದೇವರಾದ ಯೆಹೋವನೇ.


ಯೆಹೋಶುವನು ದಿನತುಂಬಿದ ಮುದುಕನಾಗಲು ಯೆಹೋವನು ಅವನಿಗೆ, “ನೀನು ಈಗ ಮುದುಕನಾದಿ, ಸ್ವಾಧೀನಮಾಡಿಕೊಳ್ಳತಕ್ಕ ದೇಶಗಳು ಇನ್ನೂ ಬಹಳ ಇವೆ.


ಇನ್ನು ಮುಂದೆ ಇವನೇ ನಿಮ್ಮ ಅರಸನಾಗಿರುವನು. ಚಿಕ್ಕಂದಿನಿಂದ ನಿಮ್ಮ ನಾಯಕನಾಗಿದ್ದ ನಾನು ಈಗ ತಲೆನರೆತ ಮುದುಕನಾಗಿದ್ದೇನೆ; ನನ್ನ ಮಕ್ಕಳು ನಿಮ್ಮೊಂದಿಗಿದ್ದಾರೆ.


ಅರಸನಾದ ದಾವೀದನು ವಯೋವೃದ್ಧನಾಗಿದ್ದನು. ಸೇವಕರು ಎಷ್ಟು ಕಂಬಳಿ ಹೊದಿಸಿದರೂ ಅವನಿಗೆ ಬೆಚ್ಚಗಾಗುತ್ತಿರಲಿಲ್ಲ.


ಅನಂತರ ಅರಸನಾದ ಸೊಲೊಮೋನನು ದಾವೀದ ನಗರವಾದ ಚೀಯೋನಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರುವುದಕ್ಕಾಗಿ ಇಸ್ರಾಯೇಲರ ಹಿರಿಯರೂ ಕುಲಾಧಿಪತಿಗಳು ಇವರೇ ಮೊದಲಾದ ಇಸ್ರಾಯೇಲ್ ಪ್ರಧಾನಪುರುಷರನ್ನು ಯೆರೂಸಲೇಮಿಗೆ ತನ್ನ ಹತ್ತಿರಕ್ಕೆ ಕರೆಯಿಸಿಕೊಂಡನು.


ಅವನು ಇಸ್ರಾಯೇಲರ ಎಲ್ಲಾ ಅಧಿಪತಿಗಳನ್ನೂ, ಯಾಜಕರನ್ನೂ ಮತ್ತು ಲೇವಿಯರನ್ನೂ ತನ್ನ ಬಳಿಯಲ್ಲಿ ಒಟ್ಟುಗೂಡಿಸಿದನು.


ದ್ರಾಕ್ಷಿ ತೋಟಗಳ ಮೇಲೆ ರಾಮಾ ಊರಿನ ಶಿಮ್ಮೀ, ದ್ರಾಕ್ಷಿ ತೋಟಗಳಲ್ಲಿರುವ ದ್ರಾಕ್ಷಾರಸದ ಉಗ್ರಾಣಗಳ ಮೇಲೆ ಶಿಪ್ಮೀಯನಾದ ಜಬ್ದೀ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು