Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 23:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಿಮ್ಮ ದೇವರಾದ ಯೆಹೋವನು ನಿಮಗೋಸ್ಕರ ಜನಾಂಗಗಳಿಗೆ ಮಾಡಿದೆಲ್ಲವನ್ನೂ ನೀವೆಲ್ಲರೂ ನೋಡಿದ್ದೀರಷ್ಟೇ. ಹೌದು, ನಿಮಗಾಗಿ ಯುದ್ಧ ಮಾಡಿದಾತನು ನಿಮ್ಮ ದೇವರಾದ ಯೆಹೋವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪರವಾಗಿದ್ದು, ಈ ಜನಾಂಗಗಳಿಗೆ ಮಾಡಿದ್ದೆಲ್ಲವನ್ನು ನೀವು ಕಣ್ಣಾರೆ ನೋಡಿದ್ದೀರಿ. ಹೌದು, ನಿಮ್ಮ ಪರವಾಗಿ ಯುದ್ಧಮಾಡಿದಾತ ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಿಮ್ಮ ದೇವರಾದ ಯೆಹೋವನು ನಿಮಗೋಸ್ಕರ ಈ ಜನಾಂಗಗಳಿಗೆಲ್ಲಾ ಮಾಡಿದ್ದೆಲ್ಲವನ್ನೂ ನೋಡಿದ್ದೀರಷ್ಟೆ; ಹೌದು, ನಿಮಗಾಗಿ ಯುದ್ಧ ಮಾಡಿದಾತನು ನಿಮ್ಮ ದೇವರಾದ ಯೆಹೋವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನು ನಮ್ಮ ಶತ್ರುಗಳಿಗೆ ಏನು ಮಾಡಿದನೆಂಬುದು ನೀವು ನೋಡಿದ್ದೀರಿ. ನಮಗೆ ಸಹಾಯ ಮಾಡುವುದಕ್ಕಾಗಿ ನಮ್ಮ ದೇವರಾದ ಯೆಹೋವನು ನಮಗಾಗಿ ಯುದ್ಧಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೋಸ್ಕರ ಈ ಸಕಲ ಜನಾಂಗಗಳಿಗೆ ಮಾಡಿದ ಎಲ್ಲವನ್ನೂ ನೋಡಿದ್ದೀರಿ. ನಿಮಗೋಸ್ಕರವಾಗಿ ಯುದ್ಧ ಮಾಡಿದವರು ನಿಮ್ಮ ದೇವರಾದ ಯೆಹೋವ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 23:3
13 ತಿಳಿವುಗಳ ಹೋಲಿಕೆ  

ಯೆಹೋವನೇ ನಿಮಗಾಗಿ ಯುದ್ಧಮಾಡುವನು. ನೀವಂತು ಸುಮ್ಮನೇ ನಿಂತುಕೊಂಡಿರಿ” ಎಂದು ಹೇಳಿದನು.


ಇಸ್ರಾಯೇಲರ ದೇವರಾದ ಯೆಹೋವನು ಅವರ ಪರವಾಗಿ ಯುದ್ಧ ಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿ ವಶಮಾಡಿಕೊಂಡನು.


ಯೆಹೋವನು ಈ ಪ್ರಕಾರ ಒಬ್ಬ ಮನುಷ್ಯನ ಮಾತಿಗೆ ಕಿವಿಗೊಟ್ಟ ದಿನವು ಅದಕ್ಕಿಂತ ಹಿಂದೆಯೂ ಮುಂದೆಯೂ ಇಲ್ಲವೇ ಇಲ್ಲ. ಯೆಹೋವನು ತಾನೇ ಇಸ್ರಾಯೇಲ್ಯರಿಗೋಸ್ಕರ ಯುದ್ಧಮಾಡುತ್ತಾ ಇದ್ದನು.


ನೀವೇ ಇದನ್ನು ಕಣ್ಣಾರೆ ಕಂಡು ಯೆಹೋವನು ಇಸ್ರಾಯೇಲಿನ ಮೇರೆಯ ಆಚೆಯೂ, ‘ಮಹಾ ಮಹಿಮೆಯುಳ್ಳವನು’” ಅಂದುಕೊಳ್ಳುವಿರಿ.


ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಸಂಗಡ ಇದ್ದು ಶತ್ರುಗಳೊಡನೆ ನಿಮಗೋಸ್ಕರ ಯುದ್ಧಮಾಡಿ ನಿಮಗೆ ಜಯವನ್ನು ಉಂಟುಮಾಡುವನು” ಎಂದು ಹೇಳಬೇಕು.


ಹೀಗಿರುವುದರಿಂದ ನೀವು ಬಹು ಜಾಗರೂಕತೆಯಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಕಾಪಾಡಿಕೊಳ್ಳುವವರಾಗಿ, ನೀವು ನೋಡಿದ ಸಂಗತಿಗಳನ್ನು ಎಷ್ಟು ಮಾತ್ರವೂ ಮರೆಯದೆ ಜೀವದಿಂದಿರುವ ವರೆಗೂ ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ನಿಮ್ಮ ಮಕ್ಕಳಿಗೂ ಮತ್ತು ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಬೇಕು.


ನಿಮ್ಮ ಮುಂದೆ ಮಾರ್ಗದರ್ಶಕನಾಗಿ ಹೋಗುವ ನಿಮ್ಮ ದೇವರಾದ ಯೆಹೋವನು ಐಗುಪ್ತ ದೇಶದಲ್ಲಿಯೂ, ನೀವು ನೋಡಿದ ಅರಣ್ಯದಲ್ಲಿಯೂ ಪ್ರತ್ಯಕ್ಷನಾಗಿ ನಿಮಗೋಸ್ಕರ ಯುದ್ಧಮಾಡಿದಂತೆಯೇ ಈಗಲೂ ನಿಮ್ಮವನಾಗಿ ಯುದ್ಧಮಾಡುವನು.


ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನದಂತೆ ನಿಮಗೋಸ್ಕರ ಯುದ್ಧ ಮಾಡಿದ್ದರಿಂದ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವುದಕ್ಕೆ ಶಕ್ತನಾದನು.


ನಾನು ಪ್ರಮಾಣ ಪೂರ್ವಕವಾಗಿ ಅವರಿಗೆ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಸೇರಿಸಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳನ್ನೂ ನೋಡಿ ಅಲ್ಲಿ ಯಜ್ಞಪಶುಗಳನ್ನು ವಧಿಸಿ, ನನ್ನನ್ನು ರೇಗಿಸುವ ನೈವೇದ್ಯವನ್ನರ್ಪಿಸಿ, ಸುಗಂಧ ಹೋಮಮಾಡಿ, ಪಾನದ್ರವ್ಯವನ್ನು ಸುರಿದು, ಬಲಿ ಅರ್ಪಿಸುತ್ತಿದ್ದರು.’


‘ನಾನು ಐಗುಪ್ತ್ಯರಿಗೆ ಮಾಡಿದ್ದನ್ನೂ, ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತುಕೊಂಡು ಈ ಸ್ಥಳಕ್ಕೆ ಬರಮಾಡಿದ್ದನ್ನೆಲ್ಲಾ ನೀವು ನೋಡಿದ್ದೀರಿ.


ಆ ಜನಗಳು ನಮಗಿಂತ ಹೆಚ್ಚಾಗಿದ್ದಾರೆ; ಅವರನ್ನು ಹೊರಡಿಸುವುದು ನಮ್ಮಿಂದ ಹೇಗಾದೀತು ಅಂದುಕೊಳ್ಳುತ್ತೀರೋ? ಅವರಿಗೆ ಹೆದರಬೇಡಿರಿ.


ಆತನು ಅವರ ಅರಸರನ್ನು ನಿಮ್ಮ ಕೈಗೆ ಸಿಗುವಂತೆ ಮಾಡಿ, ನೀವು ಅವರ ಹೆಸರುಗಳೇ ಭೂಮಿಯ ಮೇಲೆ ಉಳಿಯದಂತೆ ಮಾಡಬೇಕು. ಯಾರೂ ನಿಮ್ಮ ಮುಂದೆ ನಿಲ್ಲುವುದಿಲ್ಲ; ನೀವು ಎಲ್ಲರನ್ನೂ ನಾಶಮಾಡುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು