Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 23:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನು ಮಹಾಪರಾಕ್ರಮಿಗಳಾದ ಜನಾಂಗಗಳನ್ನು ನಿಮ್ಮೆದುರಿನಿಂದ ಓಡಿಸಿಬಿಟ್ಟಿದ್ದಾನೆ. ನಿಮ್ಮ ಮುಂದೆ ಈವರೆಗೂ ಒಬ್ಬನೂ ತಲೆಯೆತ್ತಿ ನಿಲ್ಲಲಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸರ್ವೇಶ್ವರ ಮಹಾಪರಾಕ್ರಮಿಗಳಾದ ಜನಾಂಗಗಳನ್ನು ನಮ್ಮೆದುರಿನಿಂದ ಓಡಿಸಿಬಿಟ್ಟಿದ್ದಾರೆ. ನಮ್ಮನ್ನು ಪ್ರತಿಭಟಿಸಿ ನಿಂತವನು ಒಬ್ಬನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೋವನು ಮಹಾಪರಾಕ್ರವಿುಗಳಾದ ಜನಾಂಗಗಳನ್ನು ನಿಮ್ಮೆದುರಿನಿಂದ ಓಡಿಸಿಬಿಟ್ಟಿದ್ದಾನೆ; ನಿಮ್ಮ ಮುಂದೆ ಈವರೆಗೆ ಒಬ್ಬನೂ ನಿಲ್ಲಲಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ದೊಡ್ಡದಾದ ಮತ್ತು ಪ್ರಬಲವಾದ ಜನಾಂಗಗಳನ್ನು ಸೋಲಿಸಲು ಯೆಹೋವನು ನಿಮಗೆ ನೆರವಾದನು. ಆತನು ಅವರನ್ನು ತನ್ನ ಬಲವುಳ್ಳ ಹಸ್ತದಿಂದ ಹೊರಗಟ್ಟಿದನು. ನಿಮ್ಮನ್ನು ಸೋಲಿಸಲು ಯಾವ ಜನಾಂಗಕ್ಕೂ ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಯೆಹೋವ ದೇವರು ನಿಮ್ಮ ಮುಂದೆ ಬಲವಾದ ದೊಡ್ಡ ರಾಷ್ಟ್ರಗಳನ್ನು ಸಹ ಹೊರಡಿಸಿಬಿಟ್ಟರು. ನಿಮ್ಮ ಮುಂದೆ ಈವರೆಗೂ ಒಬ್ಬರಾದರೂ ನಿಲ್ಲಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 23:9
14 ತಿಳಿವುಗಳ ಹೋಲಿಕೆ  

ನಿನ್ನ ಜೀವಮಾನದಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು.


ಆಗ ಆತನು ಆ ಜನಾಂಗಗಳನ್ನೆಲ್ಲಾ ನಿಮ್ಮ ಎದುರಿನಿಂದ ಹೊರಡಿಸುವನು. ನಿಮಗಿಂತಲೂ ಮಹಾಬಲಿಷ್ಠ ಜನಾಂಗಗಳ ದೇಶವನ್ನು ನೀವು ಸ್ವಾಧೀನ ಮಾಡಿಕೊಳ್ಳುವಿರಿ.


ನಿಮ್ಮ ದೇವರಾದ ಯೆಹೋವನು ತಾನೇ ಅವರನ್ನು ನಿಮ್ಮ ಕಣ್ಣೆದುರಿನಲ್ಲಿ ಹೊರಡಿಸಿಬಿಡುವನು. ಆತನ ವಾಗ್ದಾನದಂತೆ ಅವರ ದೇಶವನ್ನು ನೀವು ಸ್ವಂತ ಮಾಡಿಕೊಳ್ಳುವಿರಿ.


ನೀವು ಅಭಿವೃದ್ಧಿಯಾಗಿ ದೇಶದಲ್ಲೆಲ್ಲಾ ತುಂಬಿಕೊಳ್ಳುವ ತನಕ ಅವರನ್ನು ಸ್ವಲ್ಪ ಸ್ವಲ್ಪವಾಗಿ ಹೊರಡಿಸುವೆನು.


ಕಾಲೇಬನು ಶೇಷೈ, ಅಹೀಮನ್, ತಲ್ಮೈ ಎಂಬ ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಓಡಿಸಿಬಿಟ್ಟನು.


ಆತನು ಅವರ ಅರಸರನ್ನು ನಿಮ್ಮ ಕೈಗೆ ಸಿಗುವಂತೆ ಮಾಡಿ, ನೀವು ಅವರ ಹೆಸರುಗಳೇ ಭೂಮಿಯ ಮೇಲೆ ಉಳಿಯದಂತೆ ಮಾಡಬೇಕು. ಯಾರೂ ನಿಮ್ಮ ಮುಂದೆ ನಿಲ್ಲುವುದಿಲ್ಲ; ನೀವು ಎಲ್ಲರನ್ನೂ ನಾಶಮಾಡುವಿರಿ.


ನಮ್ಮ ಹಿರಿಯರು ಅದನ್ನು ತಮ್ಮ ಪೂರ್ವಿಕರಿಂದ ಹೊಂದಿದ್ದರು. ಅವರು ಯೆಹೋಶುವನನ್ನು ಅನುಸರಿಸಿ ಬಂದು ದೇವರು ತಳ್ಳಿಬಿಟ್ಟ ಅನ್ಯಜನಗಳ ದೇಶವನ್ನು ಸ್ವಾಧೀನಮಾಡಿಕೊಂಡಾಗ ಆ ಗುಡಾರವನ್ನು ಕೂಡ ತಂದರು. ಅದು ದಾವೀದನ ಕಾಲದವರೆಗೂ ಅಲ್ಲೇ ಇತ್ತು.


ನನ್ನ ದೂತನು ನಿಮ್ಮ ಮುಂದಾಗಿ ಹೊರಟು ಅಮೋರಿಯರು, ಹಿತ್ತಿಯರು, ಪೆರಿಜೀಯರು, ಕಾನಾನ್ಯರು, ಹಿವ್ವಿಯರು, ಯೆಬೂಸಿಯರೂ ಇರುವ ದೇಶಕ್ಕೆ ನಿಮ್ಮನ್ನು ಸೇರಿಸುವನು. ಅವರನ್ನಾದರೋ ನಾನು ನಿರ್ಮೂಲಮಾಡುವೆನು.


ಈವರೆಗೆ ಹೇಗೊ ಹಾಗೆಯೇ ಇನ್ನು ಮುಂದೆಯೂ ನಿಮ್ಮ ದೇವರಾದ ಯೆಹೋವನನ್ನೇ ಆತುಕೊಂಡಿರಿ.


ಈ ದೇಶದ ನಿವಾಸಿಗಳಾಗಿದ್ದ ಅಮೋರಿಯರು ಮೊದಲಾದ ಸರ್ವ ಜನಾಂಗಗಳನ್ನು ನಮ್ಮ ಎದುರಿನಿಂದ ಹೊರಡಿಸಿ ಬಿಟ್ಟವನು ಆತನೇ. ಆದುದರಿಂದ ನಾವು ಯೆಹೋವನನ್ನೇ ಸೇವಿಸುವೆವು. ಆತನೇ ನಮ್ಮ ದೇವರು” ಎಂದು ಉತ್ತರ ಕೊಟ್ಟರು.


ಯೆಹೋವನು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಅಮೋರಿಯರಂತೆ ವಿಗ್ರಹಗಳನ್ನು ಪೂಜಿಸಿದ ಅಹಾಬನ ನಡತೆಯು ಕೇವಲ ಅಸಹ್ಯವಾಗಿತ್ತು.


ನಮ್ಮ ದೇವರಾದ ನೀನು ನಿನ್ನ ಪ್ರಜೆಗಳಾದ ಇಸ್ರಾಯೇಲರ ಎದುರಿನಿಂದ ಈ ದೇಶದ ನಿವಾಸಿಗಳನ್ನು ಓಡಿಸಿ, ದೇಶವನ್ನು ನಿನ್ನ ಸ್ನೇಹಿತನಾದ ಅಬ್ರಹಾಮನ ಸಂತಾನದವರಿಗೆ ಶಾಶ್ವತ ಸ್ವತ್ತಾಗಿ ಕೊಟ್ಟಿರುವೆಯಲ್ಲಾ?.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು