Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 24:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀವು ವ್ಯವಸಾಯ ಮಾಡದೆ ಬೆಳೆದಿರುವ ಭೂಮಿಯನ್ನು ನಿಮಗೆ ಕೊಟ್ಟೆನು. ನೀವು ಕಟ್ಟದೆ ಇರುವ ಪಟ್ಟಣಗಳಲ್ಲಿ ವಾಸಿಸುತ್ತಿದ್ದೀರಿ. ನೀವು ನೆಟ್ಟು ಬೆಳೆಸದೆ ಇರುವ ದ್ರಾಕ್ಷಿ, ಎಣ್ಣೆಮರ ಇವುಗಳ ಫಲಗಳನ್ನು ಅನುಭವಿಸುತ್ತೀದ್ದೀರಿ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನೀವು ಕೃಷಿಮಾಡದ, ಬೆಳೆ ತುಂಬಿದ ಭೂಮಿಯನ್ನು ನಿಮಗೆ ಕೊಟ್ಟೆ, ನೀವು ಕಟ್ಟದ ನಗರಗಳಲ್ಲಿ ವಾಸಮಾಡುತ್ತಿದ್ದೀರಿ. ನೀವು ನೆಟ್ಟು ಬೆಳೆಸದ ದ್ರಾಕ್ಷಿ ಹಾಗೂ ಎಣ್ಣೆಮರಗಳ ತೋಟಗಳನ್ನು ಅನುಭವಿಸುತ್ತಿದ್ದೀರಿ’.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀವು ವ್ಯವಸಾಯಮಾಡದೆ ಬೆಳೆದಿರುವ ಭೂವಿುಯನ್ನು ನಿಮಗೆ ಕೊಟ್ಟೆನು. ನೀವು ಕಟ್ಟದೆ ಇರುವ ಪಟ್ಟಣಗಳಲ್ಲಿ ನೀವು ವಾಸಿಸುತ್ತೀರಿ. ನೀವು ನೆಟ್ಟು ಬೆಳಸದೆ ಇರುವ ದ್ರಾಕ್ಷೆ, ಎಣ್ಣೇಮರ ಇವುಗಳ ತೋಟಗಳನ್ನು ಅನುಭವಿಸುತ್ತಿದ್ದೀರಿ ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “‘ಯೆಹೋವನಾದ ನಾನು ನಿಮಗೆ ಆ ದೇಶವನ್ನು ಕೊಟ್ಟಿದ್ದೇನೆ. ನೀವು ಆ ದೇಶಕ್ಕಾಗಿ ಏನನ್ನೂ ಮಾಡಿಲ್ಲ. ನಿಮಗೆ ಅದನ್ನು ಕೊಟ್ಟವನು ನಾನೇ. ನೀವು ಆ ನಗರಗಳನ್ನು ಕಟ್ಟಲೇ ಇಲ್ಲ. ಅವುಗಳನ್ನು ನಿಮಗೆ ಕೊಟ್ಟವನು ನಾನೇ. ಈಗ ನೀವು ಆ ಪ್ರದೇಶದಲ್ಲಿ ಮತ್ತು ಆ ನಗರಗಳಲ್ಲಿ ವಾಸಮಾಡುತ್ತಿದ್ದೀರಿ. ನೀವು ದ್ರಾಕ್ಷಿ ಮತ್ತು ಆಲಿವ್ ಮರದ ತೋಟಗಳನ್ನು ಹೊಂದಿರುವಿರಿ. ಆದರೆ ಆ ತೋಟಗಳನ್ನು ನೀವು ಬೆಳೆಸಲಿಲ್ಲ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನೀವು ವ್ಯವಸಾಯಮಾಡದ ಭೂಮಿಯನ್ನೂ ನೀವು ಕಟ್ಟದ ಪಟ್ಟಣಗಳನ್ನೂ ನಾನು ನಿಮಗೆ ಕೊಟ್ಟೆನು. ನೀವು ಅವುಗಳಲ್ಲಿ ವಾಸವಾಗಿದ್ದೀರಿ. ನೀವು ನೆಟ್ಟು ಬೆಳೆಸದ ದ್ರಾಕ್ಷಿತೋಟಗಳ ಫಲವನ್ನೂ ಹಿಪ್ಪೆತೋಪುಗಳ ಫಲವನ್ನೂ ಅನುಭವಿಸುತ್ತಿದ್ದೀರಿ,’ ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 24:13
7 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ಉತ್ತಮವಾದ ದೇಶಕ್ಕೆ ನಿಮ್ಮನ್ನು ಸೇರಿಸುತ್ತಾನೆ. ಆ ದೇಶದ ಹಳ್ಳಗಳಲ್ಲಿ ನೀರು ಯಾವಾಗಲೂ ಹರಿಯುತ್ತದೆ; ಮತ್ತು ತಗ್ಗುಗಳಲ್ಲಾಗಲಿ, ಗುಡ್ಡಗಳಲ್ಲಾಗಲಿ ಎಲ್ಲಾ ಕಡೆಯೂ ಬುಗ್ಗೆಗಳಿಂದ ನೀರು ಉಕ್ಕುತ್ತದೆ.


ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯ, ಪಾಪಿಯ ಸೊತ್ತು ಸಜ್ಜನರಿಗೆ ಗಂಟು.


ಯೆಹೋವನು ಇಸ್ರಾಯೇಲ್ಯರಿಗೆ ಮಾಡಿದ ಅತಿ ಶ್ರೇಷ್ಠ ವಾಗ್ದಾನಗಳಲ್ಲಿ ಒಂದೂ ತಪ್ಪಿ ಹೋಗಲಿಲ್ಲ. ಎಲ್ಲವೂ ನೆರವೇರಿದವು.


ಯೆಹೋಶುವನು ಸುಟ್ಟ ಹಾಚೋರ್ ಒಂದನ್ನು ಬಿಟ್ಟರೆ ಇಸ್ರಾಯೇಲರು ದಿನ್ನೆಯ ಮೇಲಿನ ಬೇರೆ ಯಾವ ಪಟ್ಟಣವನ್ನೂ ಸುಟ್ಟುಹಾಕಲಿಲ್ಲ.


ಇದಲ್ಲದೆ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ನಾನು ಕೈ ಎತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರಮಾಡಿ, ಅದನ್ನು ನಿಮಗೆ ಸ್ವತ್ತಾಗಿ ಕೊಡುವೆನೆಂದು ಹೇಳಿದವನು ಯೆಹೋವನೆಂಬ ನಾನೇ’ ಎಂದು ಅವರಿಗೆ ಹೇಳು” ಅಂದನು.


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಜನಾಂಗಗಳನ್ನು ಆತನು ನಾಶಮಾಡಿ ಬಿಟ್ಟ ತರುವಾಯ, ನೀವು ಆ ದೇಶವನ್ನು ಸ್ವಾಧೀನಮಾಡಿಕೊಂಡು ಅವರ ಗ್ರಾಮಗಳಲ್ಲಿಯೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು