ಯೆಹೋಶುವ 24:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಹೀಗಿರುವುದರಿಂದ, “ನೀವು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರಿ ಆತನನ್ನು ಪೂರ್ಣಮನಸ್ಸಿನಿಂದಲೂ, ಯಥಾರ್ಥಚಿತ್ತದಿಂದಲೂ ಸೇವಿಸಿರಿ. ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಪೂಜಿಸುತ್ತಿದ್ದ ದೇವತೆಗಳನ್ನು ನಿಮ್ಮಲ್ಲಿಂದ ತೆಗೆದುಹಾಕಿರಿ. ಯೆಹೋವನನ್ನೇ ಸೇವಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 “ಈ ಕಾರಣ ನೀವು ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿರಿ. ಪೂರ್ಣ ಮನಸ್ಸಿನಿಂದ ಯಥಾರ್ಥಚಿತ್ತದಿಂದ ಅವರಿಗೆ ಸೇವೆಸಲ್ಲಿಸಿರಿ. ನಿಮ್ಮ ಪೂರ್ವಜರು ಯೂಫ್ರಟಿಸ್ ನದಿಯಾಚೆಯಲ್ಲೂ ಈಜಿಪ್ಟಿನಲ್ಲೂ ಪೂಜಿಸುತ್ತಿದ್ದ ದೇವತೆಗಳನ್ನು ತೊರೆದುಬಿಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಹೀಗಿರುವದರಿಂದ ನೀವು ಯೆಹೋವನಲ್ಲಿ ಭಯ ಭಕ್ತಿಯುಳ್ಳವರಾಗಿರ್ರಿ; ಆತನನ್ನು ಪೂರ್ಣಮನಸ್ಸಿನಿಂದಲೂ ಯಥಾರ್ಥಚಿತ್ತದಿಂದಲೂ ಸೇವಿಸಿರಿ. ನಿಮ್ಮ ಪೂರ್ವಿಕರು [ಯೂಫ್ರೇಟೀಸ್] ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಪೂಜಿಸುತ್ತಿದ್ದ ದೇವತೆಗಳನ್ನು ನಿಮ್ಮಲ್ಲಿಂದ ತೆಗೆದುಹಾಕಿರಿ; ಯೆಹೋವನನ್ನೇ ಸೇವಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ತರುವಾಯ ಯೆಹೋಶುವನು ಜನರಿಗೆ, “ಈಗ ನೀವು ಯೆಹೋವನ ಮಾತುಗಳನ್ನು ಕೇಳಿದ್ದೀರಿ. ನೀವು ಆತನಲ್ಲಿ ಭಯಭಕ್ತಿಯಿಂದಿರಬೇಕು. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆಯಲ್ಲಿಯೂ ಈಜಿಪ್ಟಿನಲ್ಲಿಯೂ ಪೂಜಿಸುತ್ತಿದ್ದ ಸುಳ್ಳುದೇವರುಗಳನ್ನು ಎಸೆದುಬಿಡಿ. ಈಗ ನೀವು ಯೆಹೋವನ ಸೇವೆಯನ್ನು ಮಾತ್ರ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ಆದ್ದರಿಂದ ನೀವು ಈಗ ಯೆಹೋವ ದೇವರಿಗೆ ಭಯಪಟ್ಟು ಯಥಾರ್ಥದಲ್ಲಿಯೂ ಸತ್ಯದಲ್ಲಿಯೂ ಅವರನ್ನು ಸೇವಿಸಿರಿ. ನಿಮ್ಮ ಪೂರ್ವಜರು ಯೂಫ್ರೇಟೀಸ್ ನದಿಯ ಆಚೆಯಲ್ಲಿಯೂ ಈಜಿಪ್ಟಿನಲ್ಲಿಯೂ ಸೇವಿಸಿದ ದೇವರುಗಳನ್ನು ತೊರೆದುಬಿಟ್ಟು ಯೆಹೋವ ದೇವರನ್ನೇ ನೀವು ಸೇವಿಸಿರಿ. ಅಧ್ಯಾಯವನ್ನು ನೋಡಿ |