Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 24:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾವು ದಾಸತ್ವದಲ್ಲಿದ್ದ ಐಗುಪ್ತದಿಂದ ನಮ್ಮನ್ನು ನಮ್ಮ ಪೂರ್ವಿಕರನ್ನೂ ಹೊರತಂದು ನಮ್ಮೆದುರಿನಲ್ಲಿಯೇ ಮಹತ್ಕಾರ್ಯಗಳನ್ನು ನಡಿಸಿ ನಮ್ಮ ಎಲ್ಲಾ ಪ್ರಯಾಣಗಳಲ್ಲಿಯೂ, ನಾವೂ ದಾಟಿ ಬಂದ ಅನ್ಯಜನಾಂಗಗಳ ಮಧ್ಯದಲ್ಲಿಯೂ ನಮ್ಮನ್ನು ಕಾಪಾಡಿದವನು ನಮ್ಮ ದೇವರಾದ ಯೆಹೋವನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಾವು ದಾಸತ್ವದಲ್ಲಿದ್ದ ಈಜಿಪ್ಟಿನಿಂದ ನಮ್ಮನ್ನೂ ನಮ್ಮ ಪೂರ್ವಜರನ್ನೂ ಹೊರತಂದವರು ನಮ್ಮ ದೇವರಾದ ಸರ್ವೇಶ್ವರಸ್ವಾಮಿಯೇ. ನಮ್ಮೆದುರಿನಲ್ಲೇ ಅವರು ಮಾಡಿದ ಅದ್ಭುತಕಾರ್ಯಗಳನ್ನು ನೋಡಿದ್ದೇವೆ. ನಮ್ಮ ಎಲ್ಲಾ ಪ್ರಯಾಣಗಳಲ್ಲೂ ನಾವು ದಾಟಿಬಂದ ಜನಾಂಗಗಳಿಂದ ನಮ್ಮನ್ನು ಕಾಪಾಡಿದವರು ಅವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಾವು ದಾಸತ್ವದಲ್ಲಿದ್ದ ಐಗುಪ್ತದಿಂದ ನಮ್ಮನ್ನೂ ನಮ್ಮ ಪಿತೃಗಳನ್ನೂ ಹೊರತಂದು ನಮ್ಮೆದುರಿನಲ್ಲಿಯೇ ಮಹತ್ಕಾರ್ಯಗಳನ್ನು ನಡಿಸಿ ನಮ್ಮ ಎಲ್ಲಾ ಪ್ರಯಾಣಗಳಲ್ಲಿಯೂ ದಾಟಿ ಬಂದ ಅನ್ಯಜನಾಂಗಗಳ ಮಧ್ಯದಲ್ಲಿಯೂ ನಮ್ಮನ್ನು ಕಾಪಾಡಿದವನು ನಮ್ಮ ದೇವರಾದ ಯೆಹೋವನೇ ಅಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಮ್ಮ ಜನರನ್ನು ಈಜಿಪ್ಟಿನಿಂದ ಹೊರತಂದವನು ನಮ್ಮ ದೇವರಾದ ಯೆಹೋವನೆಂದು ನಮಗೆ ಗೊತ್ತು. ನಾವು ಈಜಿಪ್ಟಿನಲ್ಲಿ ಗುಲಾಮರಾಗಿದ್ದೆವು; ಆದರೆ ಯೆಹೋವನು ಅಲ್ಲಿ ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿ ನಮ್ಮನ್ನು ಅಲ್ಲಿಂದ ಬಿಡಿಸಿಕೊಂಡು ಬಂದನು. ನಾವು ಬೇರೆ ದೇಶಗಳಲ್ಲಿ ಪ್ರವಾಸ ಮಾಡಿಕೊಂಡು ಬರುವಾಗ ನಮ್ಮನ್ನು ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಏಕೆಂದರೆ ನಮ್ಮ ದೇವರಾದ ಯೆಹೋವ ದೇವರು ತಾವೇ ನಮ್ಮನ್ನೂ ನಮ್ಮ ಪಿತೃಗಳನ್ನೂ ದಾಸತ್ವದ ಮನೆಯಾದ ಈಜಿಪ್ಟ್ ದೇಶದಿಂದ ಬರಮಾಡಿ, ನಮ್ಮ ಕಣ್ಣುಗಳ ಮುಂದೆ ಆ ಅದ್ಭುತ ಸೂಚಕಕಾರ್ಯಗಳನ್ನು ಮಾಡಿ, ನಾವು ನಡೆದ ಎಲ್ಲಾ ಮಾರ್ಗಗಳಲ್ಲಿಯೂ ನಾವು ಅವರ ಮಧ್ಯದಲ್ಲಿ ಹಾದು ಬಂದ ಎಲ್ಲಾ ಜನಗಳಲ್ಲಿಯೂ ನಮ್ಮನ್ನು ಕಾಪಾಡಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 24:17
14 ತಿಳಿವುಗಳ ಹೋಲಿಕೆ  

‘ನಾನು ಐಗುಪ್ತ್ಯರಿಗೆ ಮಾಡಿದ್ದನ್ನೂ, ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತುಕೊಂಡು ಈ ಸ್ಥಳಕ್ಕೆ ಬರಮಾಡಿದ್ದನ್ನೆಲ್ಲಾ ನೀವು ನೋಡಿದ್ದೀರಿ.


ನಿಮ್ಮ ಮುಪ್ಪಿನ ತನಕ ನಾನೇ ಆಧಾರ, ನರೆ ಬಂದಾಗಲೂ ನಿಮ್ಮನ್ನು ಹೊತ್ತು ಸಹಿಸುವೆನು. ನಾನೇ ಉಂಟುಮಾಡಿದೆನು, ನಾನೇ ಹೊರುವೆನು. ಹೌದು, ನಿಮ್ಮನ್ನು ಹೊತ್ತು ಸಹಿಸಿ ನಿರ್ವಹಿಸುವೆನು.


ಅದಕ್ಕೆ ಜನರು, “ಯೆಹೋವನ ಸೇವೆಯನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸುವುದು ನಮಗೆ ದೂರವಾಗಿರಲಿ.


ಈ ದೇಶದ ನಿವಾಸಿಗಳಾಗಿದ್ದ ಅಮೋರಿಯರು ಮೊದಲಾದ ಸರ್ವ ಜನಾಂಗಗಳನ್ನು ನಮ್ಮ ಎದುರಿನಿಂದ ಹೊರಡಿಸಿ ಬಿಟ್ಟವನು ಆತನೇ. ಆದುದರಿಂದ ನಾವು ಯೆಹೋವನನ್ನೇ ಸೇವಿಸುವೆವು. ಆತನೇ ನಮ್ಮ ದೇವರು” ಎಂದು ಉತ್ತರ ಕೊಟ್ಟರು.


ಮೋಶೆಯು ಇಸ್ರಾಯೇಲರಿಗೆ, “ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದ್ದಾನೆ. ಈ ದಿನದಲ್ಲಿ ನೀವು ಹುಳಿಬೆರೆಸಿದ್ದನ್ನು ತಿನ್ನಬಾರದು.


ಮುಂದೆ ನಿಮ್ಮ ಮಕ್ಕಳು, ‘ಇದರ ಅರ್ಥ ಏನು?’ ಎಂದು ನಿಮ್ಮನ್ನು ವಿಚಾರಿಸುವಾಗ ನೀವು ಅವರಿಗೆ, ‘ನಾವು ದಾಸತ್ವದಲ್ಲಿದ್ದ ಐಗುಪ್ತ ದೇಶದಿಂದ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡಿಸಿದನು.


ಆಗ ನೀವು ಕಣ್ಣಾರೆ ನೋಡಿದ ಪ್ರಕಾರ ಆತನು ವಿಶೇಷ ಪರಿಶೋಧನೆ, ಮಹತ್ಕಾರ್ಯ, ಉತ್ಪಾತ, ಭುಜಪರಾಕ್ರಮ, ಶಿಕ್ಷೆ ಇವುಗಳನ್ನು ಪ್ರಯೋಗಿಸಿ ನಿಮ್ಮನ್ನು ಬಿಡುಗಡೆಮಾಡಿದನಲ್ಲಾ. ನೀವು ಹೆದರಿಕೊಳ್ಳುವ ಆ ಎಲ್ಲಾ ಜನಾಂಗಗಳಿಗೂ ಆತನು ಹಾಗೆಯೇ ಮಾಡುವನು.


ಮೋಶೆ ಇಸ್ರಾಯೇಲರನ್ನು ಕರೆದು, “ಯೆಹೋವನು ಐಗುಪ್ತದೇಶದಲ್ಲಿ ನಿಮ್ಮ ಕಣ್ಣುಮುಂದೆ ಫರೋಹನಿಗೂ, ಅವನ ಪರಿವಾರದವರಿಗೂ ಮತ್ತು


ಇಸ್ರಾಯೇಲರು ಮಾತ್ರ ಯೆಹೋವನ ಸ್ವಂತ ಜನರಾದರು. ಯಾಕೋಬನ ವಂಶಸ್ಥರು ಆತನಿಗೆ ಸ್ವಕೀಯ ಪ್ರಜೆಯಾದರು.


ನಮಗಾದರೋ ಯೆಹೋವನು ದೇವರಾಗಿರುತ್ತಾನೆ; ನಾವು ಆತನನ್ನು ಬಿಡಲಿಲ್ಲ. ಯೆಹೋವನ ಆರಾಧನೆ ನಡೆಸಲು ಆರೋನನ ಸಂತಾನದವರಾದ ಯಾಜಕರೂ, ತಮಗೆ ನೇಮಕವಾದ ಕೆಲಸದಲ್ಲಿ ನಿರತರಾದ ಲೇವಿಯರೂ ನಮಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು