Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 24:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಈ ದೇಶದ ನಿವಾಸಿಗಳಾಗಿದ್ದ ಅಮೋರಿಯರು ಮೊದಲಾದ ಸರ್ವ ಜನಾಂಗಗಳನ್ನು ನಮ್ಮ ಎದುರಿನಿಂದ ಹೊರಡಿಸಿ ಬಿಟ್ಟವನು ಆತನೇ. ಆದುದರಿಂದ ನಾವು ಯೆಹೋವನನ್ನೇ ಸೇವಿಸುವೆವು. ಆತನೇ ನಮ್ಮ ದೇವರು” ಎಂದು ಉತ್ತರ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಈ ನಾಡಿನ ನಿವಾಸಿಗಳಾಗಿದ್ದ ಅಮೋರಿಯರು ಮೊದಲಾದ ಎಲ್ಲಾ ಜನಾಂಗಗಳನ್ನು ಇಲ್ಲಿಂದ ಹೊರಡಿಸಿಬಿಟ್ಟವರು ಅವರೇ. ಆದುದರಿಂದ ನಾವು ಕೂಡ ಸರ್ವೇಶ್ವರನಿಗೆ ಸೇವೆಸಲ್ಲಿಸುತ್ತೇವೆ. ಅವರೇ ನಮ್ಮ ದೇವರು,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಈ ದೇಶವಾಸಿಗಳಾಗಿದ್ದ ಅಮೋರಿಯರು ಮೊದಲಾದ ಸರ್ವಜನಾಂಗಗಳನ್ನು ನಮ್ಮ ಮುಂದೆ ಹೊರಡಿಸಿ ಬಿಟ್ಟವನು ಆತನೇ. ಆದದರಿಂದ ನಾವೂ ಯೆಹೋವನನ್ನೇ ಸೇವಿಸುವೆವು; ಆತನೇ ನಮ್ಮ ದೇವರು ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆ ದೇಶಗಳ ಜನರನ್ನು ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡಿದನು. ಈಗ ನಾವಿರುವ ಸ್ಥಳದಲ್ಲಿ ಮುಂಚೆ ವಾಸಮಾಡಿಕೊಂಡಿದ್ದ ಅಮೋರಿಯರನ್ನು ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡಿದ್ದಾನೆ. ಅದಕ್ಕಾಗಿ ನಾವು ಯೆಹೋವನ ಸೇವೆಯನ್ನು ಮುಂದುವರಿಸುತ್ತೇವೆ; ಏಕೆಂದರೆ ಆತನು ನಮ್ಮ ದೇವರು” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇದಲ್ಲದೆ ದೇಶದಲ್ಲಿ ವಾಸವಾಗಿದ್ದ ಅಮೋರಿಯರ ಸಕಲ ಜನರನ್ನು ಯೆಹೋವ ದೇವರು ನಮ್ಮ ಮುಂದೆ ಹೊರಡಿಸಿಬಿಟ್ಟರು. ಆದ್ದರಿಂದ ನಾವು ಯೆಹೋವ ದೇವರನ್ನೇ ಸೇವಿಸುವೆವು. ಏಕೆಂದರೆ ಅವರು ನಮ್ಮ ದೇವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 24:18
13 ತಿಳಿವುಗಳ ಹೋಲಿಕೆ  

ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ಕಾಲದಲ್ಲಿ ಜನಾಂಗಗಳ ವಿವಿಧ ಭಾಷೆಗಳವರಾದ ಹತ್ತು ಜನರು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು, ‘ನಾವು ನಿಮ್ಮೊಂದಿಗೆ ಬರುವೆವು, ಏಕೆಂದರೆ ದೇವರು ನಿಮ್ಮ ಸಂಗಡ ಇದ್ದಾನೆಂಬ ಸುದ್ದಿಯು ನಮ್ಮ ಕಿವಿಗೆ ಬಿದ್ದಿದೆ’” ಎಂದು ಹೇಳುವರು.


ಹೊರಟುಬಂದ ಬಹು ದೇಶಗಳವರು, “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ, ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು, ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವವು.


ಯೆಹೋವನೇ, ಕರುಣಿಸು, ನಾನು ನಿನ್ನ ಸೇವಕನು; ನಿನ್ನ ದಾಸಿಯ ಮಗನೂ, ನಿನ್ನ ದಾಸನೂ ಆಗಿದ್ದೇನೆ. ನನ್ನ ಬಂಧನಗಳನ್ನು ಬಿಚ್ಚಿಬಿಟ್ಟಿದ್ದಿ.


ನನ್ನ ಬಲವೂ, ಕೀರ್ತನೆಯೂ ಯಾಹುವೇ. ಆತನಿಂದ ನನಗೆ ರಕ್ಷಣೆ ಉಂಟಾಯಿತು. ನಮ್ಮ ದೇವರು ಆತನೇ, ಆತನನ್ನು ಸ್ತುತಿಸುವೆನು, ನಮ್ಮ ಪೂರ್ವಿಕರ ದೇವರು ಆತನೇ, ಆತನ ಮಹಿಮೆಯನ್ನು ಪ್ರಖ್ಯಾತಿಪಡಿಸುವೆವು.


ಇಸ್ರಾಯೇಲರು ತಮ್ಮ ಮಕ್ಕಳಿಗೂ, ಮೊಮ್ಮಕ್ಕಳಿಗೂ ನಾನು ಐಗುಪ್ತ್ಯರ ನಡುವೆ ನಡೆಸಿರುವ ಈ ಮಹತ್ಕಾರ್ಯಗಳನ್ನು ವಿವರಿಸಿ ಯೆಹೋವನು ಐಗುಪ್ತ್ಯರನ್ನು ತನಗೆ ಇಷ್ಟಬಂದ ಹಾಗೆ ಶಿಕ್ಷಿಸಿದನು ಎಂಬುದಾಗಿ ತಿಳಿಸಬೇಕು. ಹೀಗೆ ನಾನು ಫರೋಹನ ಹೃದಯವನ್ನು, ಅವನ ಪರಿವಾರದವರ ಹೃದಯಗಳನ್ನೂ ಕಠಿಣಮಾಡಿದ್ದೇನೆ. ಇದಲ್ಲದೆ ಈ ಮಹತ್ಕಾರ್ಯಗಳಿಂದ ನೀವು ನನ್ನನ್ನೇ ಯೆಹೋವನೆಂದು ತಿಳಿದುಕೊಳ್ಳುವಿರಿ” ಎಂದನು.


ನಮ್ಮ ಹಿರಿಯರು ಅದನ್ನು ತಮ್ಮ ಪೂರ್ವಿಕರಿಂದ ಹೊಂದಿದ್ದರು. ಅವರು ಯೆಹೋಶುವನನ್ನು ಅನುಸರಿಸಿ ಬಂದು ದೇವರು ತಳ್ಳಿಬಿಟ್ಟ ಅನ್ಯಜನಗಳ ದೇಶವನ್ನು ಸ್ವಾಧೀನಮಾಡಿಕೊಂಡಾಗ ಆ ಗುಡಾರವನ್ನು ಕೂಡ ತಂದರು. ಅದು ದಾವೀದನ ಕಾಲದವರೆಗೂ ಅಲ್ಲೇ ಇತ್ತು.


ಕೆಂಪುಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಲ್ಲಿರುವ ಸಮುದ್ರದವರೆಗೂ ಮತ್ತು ಈ ಅರಣ್ಯದಿಂದ ಯೂಫ್ರೆಟಿಸ್ ಮಹಾನದಿಯವರೆಗೂ ಇರುವ ದೇಶವನ್ನೆಲ್ಲಾ ನಿಮಗಾಗಿ ನೇಮಿಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು. ನೀವು ಅವರನ್ನು ಹೊರಡಿಸುವಿರಿ.


ಆದಿಯಿಂದಲೂ ದೇವರೇ ನಿಮಗೆ ನಿವಾಸಸ್ಥಾನವಾಗಿದ್ದಾನಲ್ಲಾ; ಸದಾ ದೇವರ ಹಸ್ತವೇ ನಿಮಗೆ ಆಧಾರ. ಆತನು “ನಿಮ್ಮೆದುರಿನಿಂದ ಶತ್ರುಗಳನ್ನು ಹೊರಡಿಸಿ ಅವರನ್ನು ಸಂಹರಿಸಿರಿ” ಎಂದು ಆಜ್ಞಾಪಿಸಿದನು;


ನಾವು ದಾಸತ್ವದಲ್ಲಿದ್ದ ಐಗುಪ್ತದಿಂದ ನಮ್ಮನ್ನು ನಮ್ಮ ಪೂರ್ವಿಕರನ್ನೂ ಹೊರತಂದು ನಮ್ಮೆದುರಿನಲ್ಲಿಯೇ ಮಹತ್ಕಾರ್ಯಗಳನ್ನು ನಡಿಸಿ ನಮ್ಮ ಎಲ್ಲಾ ಪ್ರಯಾಣಗಳಲ್ಲಿಯೂ, ನಾವೂ ದಾಟಿ ಬಂದ ಅನ್ಯಜನಾಂಗಗಳ ಮಧ್ಯದಲ್ಲಿಯೂ ನಮ್ಮನ್ನು ಕಾಪಾಡಿದವನು ನಮ್ಮ ದೇವರಾದ ಯೆಹೋವನಲ್ಲವೇ.


ಆಗ ಯೆಹೋಶುವನು ಅವರಿಗೆ, “ನೀವು ಯೆಹೋವನನ್ನು ಸೇವಿಸಲು ಶಕ್ತರಲ್ಲ. ಯೆಹೋವನು ಪರಿಶುದ್ಧನು; ತನಗೆ ಸಲ್ಲಿಸಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ದೇವರು; ಆತನು ನಿಮ್ಮ ಪಾಪ, ಅಪರಾಧಗಳನ್ನೂ, ಕ್ಷಮಿಸುವುದಿಲ್ಲ.


ಆತನೊಬ್ಬನೇ ನಿಮ್ಮ ಸ್ತುತಿ ಸ್ತೋತ್ರಕ್ಕೆ ಪಾತ್ರನು; ಆತನು ನಿಮ್ಮ ದೇವರು; ನೀವು ನೋಡಿದ ಆ ಅದ್ಭುತವಾದ ಮಹತ್ಕಾರ್ಯಗಳನ್ನು ನಿಮಗೋಸ್ಕರ ನಡಿಸಿದವನು ಆತನೇ.


ಯೆಹೋವನು ಮಹಾಪರಾಕ್ರಮಿಗಳಾದ ಜನಾಂಗಗಳನ್ನು ನಿಮ್ಮೆದುರಿನಿಂದ ಓಡಿಸಿಬಿಟ್ಟಿದ್ದಾನೆ. ನಿಮ್ಮ ಮುಂದೆ ಈವರೆಗೂ ಒಬ್ಬನೂ ತಲೆಯೆತ್ತಿ ನಿಲ್ಲಲಿಲ್ಲವಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು