ಯೆಹೋಶುವ 24:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಇದಲ್ಲದೆ, ಅವನು ಈ ಎಲ್ಲಾ ಮಾತುಗಳನ್ನು ದೇವರ ಧರ್ಮಶಾಸ್ತ್ರದ ಗ್ರಂಥದಲ್ಲಿ ಬರೆದು, ಒಂದು ದೊಡ್ಡ ಕಲ್ಲನ್ನು ತಂದು ಯೆಹೋವನ ಆಲಯದ ಬಳಿಯಲ್ಲಿ ಇದ್ದ ಅಲ್ಲಾವೃಕ್ಷದ ಅಡಿಯಲ್ಲಿ ನಿಲ್ಲಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಇದು ಮಾತ್ರವಲ್ಲ, ಈ ಎಲ್ಲಾ ಮಾತುಕತೆಗಳನ್ನು ದೇವರ ಧರ್ಮಶಾಸ್ತ್ರಗ್ರಂಥದಲ್ಲಿ ಬರೆದಿಟ್ಟನು. ಒಂದು ದೊಡ್ಡ ಕಲ್ಲನ್ನು ಸರ್ವೇಶ್ವರನ ಆಲಯದ ಹತ್ತಿರದಲ್ಲೇ ಇದ್ದ ಓಕ್ ವೃಕ್ಷದ ಅಡಿಯಲ್ಲಿ ನಿಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಇದಲ್ಲದೆ ಅವನು ಈ ಎಲ್ಲಾ ಮಾತುಗಳನ್ನು ದೇವರ ಧರ್ಮಶಾಸ್ತ್ರಗ್ರಂಥದಲ್ಲಿ ಬರೆದು ಒಂದು ದೊಡ್ಡ ಕಲ್ಲನ್ನು ತಂದು ಯೆಹೋವನ ಆಲಯದ ಬಳಿಯಲ್ಲೇ ಇದ್ದ ಅಲ್ಲಾವೃಕ್ಷದ ಅಡಿಯಲ್ಲಿ ನಿಲ್ಲಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಯೆಹೋಶುವನು ಇವುಗಳನ್ನು ದೇವರ ಧರ್ಮಶಾಸ್ತ್ರ ಗ್ರಂಥದಲ್ಲಿ ಬರೆದನು. ಯೆಹೋಶುವನು ಅಲ್ಲಿದ್ದ ಒಂದು ದೊಡ್ಡ ಕಲ್ಲನ್ನು ತೆಗೆದುಕೊಂಡು ಈ ಒಡಂಬಡಿಕೆಗೆ ಸಾಕ್ಷಿಯಾಗಿ ಅದನ್ನು ಯೆಹೋವನ ಪವಿತ್ರಗುಡಾರದ ಹತ್ತಿರವಿದ್ದ ಓಕ್ ಮರದ ಕೆಳಗೆ ನಿಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಈ ಮಾತುಗಳನ್ನು ಯೆಹೋಶುವನು ದೇವರ ನಿಯಮದ ಗ್ರಂಥದಲ್ಲಿ ಬರೆದು, ಒಂದು ದೊಡ್ಡ ಕಲ್ಲನ್ನು ಎತ್ತಿ, ಅದನ್ನು ಯೆಹೋವ ದೇವರ ಪರಿಶುದ್ಧಸ್ಥಳದ ಬಳಿಯಲ್ಲಿ ಇದ್ದ ಏಲಾ ಮರದ ಕೆಳಗೆ ನೆಟ್ಟನು. ಅಧ್ಯಾಯವನ್ನು ನೋಡಿ |