Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 24:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಎಲ್ಲಾ ಜನರಿಗೆ, “ಇಗೋ, ಈ ಕಲ್ಲು ನಿಮ್ಮ ವಿಷಯದಲ್ಲಿ ಸಾಕ್ಷಿ ಹೇಳುವುದು. ಯೆಹೋವನು ಹೇಳಿದ ಎಲ್ಲಾ ಮಾತುಗಳನ್ನು ಇದು ಕೇಳಿದೆ. ಆದುದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆದರೆ ಇದೇ ನಿಮಗೆ ವಿರೋಧವಾಗಿ ಸಾಕ್ಷಿಯಾಗಿರುವುದು” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಬಳಿಕ ಎಲ್ಲಾ ಜನರಿಗೆ, “ಇಗೋ, ನೋಡಿ ಈ ಕಲ್ಲು! ಇದು ನಿಮ್ಮ ವಿಷಯದಲ್ಲಿ ಸಾಕ್ಷಿ ಹೇಳುವುದು. ಸರ್ವೇಶ್ವರ ನಮಗೆ ಹೇಳಿದ ಎಲ್ಲ ಮಾತುಗಳನ್ನು ಇದು ಕೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಎಲ್ಲಾ ಜನರಿಗೆ - ಇಗೋ, ಈ ಕಲ್ಲು ನಮ್ಮ ವಿಷಯದಲ್ಲಿ ಸಾಕ್ಷಿ ಹೇಳುವದು. ಯೆಹೋವನು ನಮಗೆ ಹೇಳಿದ ಎಲ್ಲಾ ಮಾತುಗಳನ್ನು ಇದು ಕೇಳಿರುವದರಿಂದ ನೀವು ನಿಮ್ಮ ದೇವರಾದ ಆತನನ್ನು ಅಲ್ಲಗಳೆದರೆ ಇದೇ ನಿಮಗೆ ವಿರೋಧಸಾಕ್ಷಿಯಾಗಿರುವದು ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆಗ ಯೆಹೋಶುವನು ಜನರೆಲ್ಲರಿಗೆ, “ನಾವು ಇಂದು ಹೇಳಿದ ಎಲ್ಲವನ್ನು ಜ್ಞಾಪಕದಲ್ಲಿಟ್ಟುಕೊಳ್ಳಲು ಈ ಕಲ್ಲು ನಿಮಗೆ ಸಾಕ್ಷಿಯಾಗಿರುವುದು. ಇಂದು ಯೆಹೋವನು ನಮ್ಮೊಡನೆ ಮಾತನಾಡುತ್ತಿದ್ದಾಗ ಈ ಕಲ್ಲು ಇಲ್ಲಿಯೇ ಇತ್ತು. ಅದಕ್ಕಾಗಿ ಈ ಕಲ್ಲು ಇಂದು ನಡೆದ ಸಂಗತಿಯನ್ನು ನೆನಪಿನಲ್ಲಿಡಲು ನಮಗೆ ಸಹಾಯಕವಾಗುವುದು. ನೀವು ನಿಮ್ಮ ದೇವರಾದ ಯೆಹೋವನಿಗೆ ವಿಮುಖರಾದರೆ ಈ ಕಲ್ಲೇ ನಿಮಗೆ ವಿರೋಧವಾಗಿ ಸಾಕ್ಷಿ ಹೇಳುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯೆಹೋಶುವನು ಜನರಿಗೆ, “ಇಗೋ, ಈ ಕಲ್ಲು ನಿಮ್ಮ ಮಧ್ಯದಲ್ಲಿ ಸಾಕ್ಷಿಯಾಗಿರಲಿ. ಏಕೆಂದರೆ ಇದು ಯೆಹೋವ ದೇವರು ನಮ್ಮ ಸಂಗಡ ಹೇಳಿದ ಎಲ್ಲಾ ವಚನಗಳನ್ನು ಕೇಳಿದೆ. ಆದ್ದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆಯದ ಹಾಗೆ ಇದೇ ನಿಮಗೆ ಸಾಕ್ಷಿಯಾಗಿರಲಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 24:27
23 ತಿಳಿವುಗಳ ಹೋಲಿಕೆ  

ಆತನು, “ಇವರು ಸುಮ್ಮನಾದರೆ ಈ ಕಲ್ಲುಗಳೇ ಕೂಗುವವು” ಎಂದು ನಿಮಗೆ ಹೇಳುತ್ತೇನೆ ಅಂದನು.


ರೂಬೇನ್ಯರೂ ಗಾದ್ಯರೂ ಯೆಹೋವನೇ ದೇವರು ಎಂಬುದಕ್ಕೆ ಈ ಯಜ್ಞವೇದಿಯೇ ಸಾಕ್ಷಿ ಎಂದು ಹೇಳಿ ಅದಕ್ಕೆ ಏದ್ ಎಂಬ ಹೆಸರಿಟ್ಟರು.


ಆದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನಲ್ಲವೆಂದು ಹೇಳುವನೋ ಅವನನ್ನು ನಾನು ಸಹ ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ನನ್ನವನಲ್ಲವೆಂದು ಹೇಳುವೆನು.


“ನೀವು ಈ ಧರ್ಮಶಾಸ್ತ್ರ ಪುಸ್ತಕವನ್ನು ನಿಮ್ಮ ವಶಕ್ಕೆ ತೆಗೆದುಕೊಂಡು ನಿಮ್ಮ ದೇವರಾದ ಯೆಹೋವನ ಆಜ್ಞಾಶಾಸನಗಳ ಮಂಜೂಷದ ಬಳಿಯಲ್ಲಿ ಇಡಿರಿ. ಇಸ್ರಾಯೇಲರೇ, ಅಲ್ಲಿ ಇದು ನಿಮಗೆ ವಿರುದ್ಧವಾಗಿ ಸಾಕ್ಷಿಕೊಡುವುದಾಗಿರಲಿ.


ಆಕಾಶಮಂಡಲವೇ, ಆಲಿಸು! ಭೂಮಂಡಲವೇ ಕೇಳು! ಯೆಹೋವನು ಮಾತನಾಡುತ್ತಿದ್ದಾನೆ. ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹ ಮಾಡಿದ್ದಾರೆ.


ಹಾಗಾಗದೆ ಹೊಟ್ಟೆತುಂಬಿದವನಾದರೆ, “ಯೆಹೋವನು ಯಾರೋ?” ಎಂದು ನಿನ್ನನ್ನು ತಿರಸ್ಕರಿಸೇನು, ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರನ್ನು ಅಯೋಗ್ಯವಾಗಿ ಎತ್ತೆನು.


ದೇವರಿಂದ ಬರುವ ವಿಪತ್ತಿಗೆ ಹೆದರಿಕೊಂಡಿದ್ದೆನಷ್ಟೆ, ಆತನ ಪ್ರಭಾವದ ದೆಸೆಯಿಂದ ನಾನು ಇಂಥ ಕೃತ್ಯವನ್ನು ಮಾಡುವುದಕ್ಕಾಗಲಿಲ್ಲ.


ಅನಂತರ ಸಮುವೇಲನು ಮಿಚ್ಪೆಗೂ ಶೇನಿಗೂ ಮಧ್ಯದಲ್ಲಿ ಒಂದು ಕಲ್ಲನ್ನು ನಿಲ್ಲಿಸಿ, “ಯೆಹೋವನು ಇಲ್ಲಿಯವರೆಗೆ ನಮಗೆ ಸಹಾಯಮಾಡಿದ್ದಾನೆ” ಎಂದು ಹೇಳಿ ಅದಕ್ಕೆ ಎಬೆನೆಜೆರ್ ಎಂದು ಹೆಸರಿಟ್ಟನು.


ಆಕಾಶಮಂಡಲವೇ, ನನ್ನ ಮಾತುಗಳಿಗೆ ಕಿವಿಗೊಡು. ಭೂಮಂಡಲವೇ, ನಾನು ಹೇಳುವುದನ್ನು ಕೇಳು.


ಅನಂತರ ಅನೇಕ ಕಷ್ಟಗಳೂ ಮತ್ತು ವಿಪತ್ತುಗಳೂ ಸಂಭವಿಸಿದಾಗ ಈ ಪದ್ಯವು ಇವರ ಸಂತತಿಯವರ ಬಾಯಲ್ಲಿ ಇದ್ದುಕೊಂಡು ಅವರ ಮುಂದೆ ಸಾಕ್ಷಿಕೊಡುವುದು” ಎಂದು ಹೇಳಿದನು.


ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಅವರು ಅಸಹ್ಯ ಕೃತ್ಯಗಳಲ್ಲಿ ಭಾಗವಹಿಸುವವರೂ, ದೇವರಿಗೆ ಅವಿಧೇಯರೂ ಆಗಿರುವುದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುತ್ತಾರೆ ಹಾಗು ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆಂದು ಸಾಬಿತುಪಡಿಸುತ್ತಾರೆ.


“ಆದಕಾರಣ ನೀನು ಈ ಪದ್ಯವನ್ನು ಬರೆದುಕೊಂಡು ಇಸ್ರಾಯೇಲರಿಗೆ ಕಲಿಸಿಕೊಡಬೇಕು. ಈ ಪದ್ಯವು ಇಸ್ರಾಯೇಲರಿಗೆ ವಿರುದ್ಧವಾಗಿ ನನ್ನ ಪಕ್ಷದಲ್ಲಿ ಸಾಕ್ಷಿಯಾಗಿರುವಂತೆ ಇದನ್ನು ಅವರಿಗೆ ಬಾಯಿಪಾಠಮಾಡಿಸು.


ನಾನು ಜೀವ ಮತ್ತು ಮರಣಗಳನ್ನೂ ಹಾಗು ಆಶೀರ್ವಾದ ಮತ್ತು ಶಾಪಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಮತ್ತು ಆಕಾಶಗಳು ಸಾಕ್ಷಿಗಳಾಗಿರಲಿ. ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಕೊಳ್ಳುವಂತೆ ಜೀವವನ್ನೇ ಆರಿಸಿಕೊಳ್ಳಿರಿ.


ಆತನನ್ನು ಕೋಪಗೊಳಿಸಿದರೆ, ನೀವು ಯೊರ್ದನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ದೇಶದಲ್ಲಿ ಉಳಿಯದೆ, ಬೇಗನೆ ನಾಶವಾಗಿ ಹೋಗುವಿರಿ ಎಂದು ಭೂಮ್ಯಾಕಾಶಗಳನ್ನು ಸಾಕ್ಷಿಯಾಗಿಟ್ಟು ಎಚ್ಚರಿಸುತ್ತೇನೆ. ನೀವು ಆ ದೇಶದಲ್ಲಿ ಬಹುದಿನ ಇರದೆ ನಾಶವಾಗಿಯೇ ಹೋಗುವಿರಿ.


ನಿನ್ನ ಕೃತ್ಯಗಳನ್ನು ಬಲ್ಲೆನು. ನಿನಗಿರುವ ಶಕ್ತಿ ಕೊಂಚವಾಗಿದ್ದರೂ ನೀನು ನನ್ನ ಹೆಸರನ್ನು ನಿರಾಕರಿಸದೆ, ನನ್ನ ವಾಕ್ಯವನ್ನು ಕಾಪಾಡಿದ್ದರಿಂದ ಇಗೋ ನಿನ್ನೆದುರಿನಲ್ಲಿ ಒಂದು ಬಾಗಿಲನ್ನು ತೆರೆದಿಟ್ಟಿದ್ದೇನೆ. ಯಾರೂ ಅದನ್ನು ಮುಚ್ಚಲಾರರು.


ಗೋಡೆಯೊಳಗಿಂದ ಕಲ್ಲುಗಳು ನಿನ್ನ ಮೇಲೆ ತಪ್ಪುಹೊರಿಸಿ ಕೂಗುವವು; ಚಾವಣಿಯ ತೊಲೆಗಳು ಸಹ ಅದಕ್ಕೆ ಮಾರ್ದನಿ ಕೊಡುತ್ತವೆ.’


ಆದರೆ ನೀವು ಪೂರ್ತಿಯಾಗಿ ಒಂದು ತಿಂಗಳು ಮಾಂಸವನ್ನು ಊಟಮಾಡುವಿರಿ. ಅದು ವಾಕರಿಕೆಯಾಗಿ ನಿಮ್ಮ ಮೂಗಿನಲ್ಲಿ ಹೊರಟು ನಿಮಗೆ ಅಸಹ್ಯವಾಗುವ ತನಕ ಅದನ್ನು ಊಟಮಾಡುವಿರಿ. ನಿಮ್ಮ ಮಧ್ಯದಲ್ಲಿರುವ ಯೆಹೋವನನ್ನು ನೀವು ಅಲಕ್ಷ್ಯಮಾಡಿ ಆತನ ಎದುರಿನಲ್ಲಿ ಅತ್ತು, ‘ನಾವು ಏಕೆ ಐಗುಪ್ತ ದೇಶವನ್ನು ಬಿಟ್ಟುಬಂದೆವು ಎಂದು ಹೇಳುತ್ತೀರಲ್ಲಾ’ ಎಂದು ಹೇಳು” ಎಂದನು.


ಅವರನ್ನು ಅವರವರ ಸ್ವತ್ತಿನ ಸ್ಥಳಗಳಿಗೆ ಕಳುಹಿಸಿದನು.


ಇದು ಸಹ ನ್ಯಾಯಾಧಿಪತಿಗಳ ದಂಡನೆಗೆ ಯೋಗ್ಯವಾದದ್ದು, ಮೇಲಣ ಲೋಕದ ದೇವರಿಗೆ ದ್ರೋಹಿಯಾದಂತಾಯಿತು.


ಹೌದು, ಯೆಹೋವನಿಗೆ ತಪ್ಪಿ ನಡೆದು ಆತನನ್ನು ಅಲ್ಲಗಳೆದಿದ್ದೇವೆ, ನಮ್ಮ ದೇವರನ್ನು ಹಿಂಬಾಲಿಸುವುದನ್ನು ಬಿಟ್ಟು ಅವನಿಂದ ದೂರವಾಗಿದ್ದೇವೆ. ಅನ್ಯಾಯವನ್ನೂ ದ್ರೋಹವನ್ನೂ ನುಡಿದಿದ್ದೇವೆ, ಹೃದಯಪೂರ್ವಕವಾಗಿ ಸುಳ್ಳುಮಾತುಗಳನ್ನು ಕಲ್ಪಿಸಿ ಆಡಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು