Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 24:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಇಸ್ರಾಯೇಲ್ಯರು ಐಗುಪ್ತದಿಂದ ತಂದ ಯೋಸೇಫನ ಎಲುಬುಗಳನ್ನು, ಯಾಕೋಬನು ಶೆಕೆಮಿನ ತಂದೆಯಾದ ಹಮೋರನ ಮಕ್ಕಳಿಂದ ನೂರು ವರಹಾ ಕೊಟ್ಟು ಕೊಂಡು ಕೊಂಡ ಶೆಕೆಮ್ ಊರಿನ ಹೊಲದಲ್ಲಿ ಹೂಣಿಟ್ಟರು. ಆ ಹೊಲವು ಯೋಸೇಫ್ಯರ ಸ್ವತ್ತಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಇಸ್ರಯೇಲರು ಈಜಿಪ್ಟಿನಿಂದ ತಂದ ಜೋಸೆಫನ ಎಲುಬುಗಳನ್ನು ಶೆಕೆಮ್ ಊರಿನ ಹೊಲದಲ್ಲಿ ಹೂಳಿಟ್ಟರು. ಈ ಹೊಲವನ್ನು ಯಕೋಬನು ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ನೂರು ಬೆಳ್ಳಿನಾಣ್ಯ ಕೊಟ್ಟು ಕೊಂಡುಕೊಂಡಿದ್ದನು. ಅದು ಜೋಸೆಫ್ಯರ ಸೊತ್ತಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಇಸ್ರಾಯೇಲ್ಯರು ಐಗುಪ್ತದಿಂದ ತಂದ ಯೋಸೇಫನ ಎಲುಬುಗಳನ್ನು, ಯಾಕೋಬನು ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ನೂರು ವರಹಾ ಕೊಟ್ಟು ಕೊಂಡುಕೊಂಡ ಶೆಕೆಮ್ ಊರಿನ ಹೊಲದಲ್ಲಿ ಹೂಣಿಟ್ಟರು. ಆ ಹೊಲವು ಯೋಸೇಫ್ಯರ ಸ್ವಾಸ್ತ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಇಸ್ರೇಲರು ಈಜಿಪ್ಟಿನಿಂದ ಹೊರಟಾಗ ತಮ್ಮೊಂದಿಗೆ ಯೋಸೇಫನ ಎಲುಬುಗಳನ್ನೂ ತೆಗೆದುಕೊಂಡು ಬಂದಿದ್ದರು. ಅವರು ಯೋಸೇಫನ ಎಲುಬುಗಳನ್ನು ಶೆಕೆಮಿನಲ್ಲಿ ಹೂಳಿಟ್ಟರು. ಯಾಕೋಬನು ಶೆಕೆಮನ ತಂದೆಯಾದ ಹಮೋರನ ಗಂಡುಮಕ್ಕಳಿಂದ ನೂರು ಬೆಳ್ಳಿನಾಣ್ಯಗಳನ್ನು ಕೊಟ್ಟು ಕೊಂಡುಕೊಂಡ ಶೆಕೆಮ್ ಊರಿನ ಹೊಲದಲ್ಲಿ ಆ ಎಲುಬುಗಳನ್ನು ಹೂಳಿಟ್ಟರು. ಈ ಭೂಮಿಯ ಯೋಸೇಫನ ಮಕ್ಕಳದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಇಸ್ರಾಯೇಲರು ಈಜಿಪ್ಟಿನಿಂದ ತಂದ ಯೋಸೇಫನ ಎಲುಬುಗಳನ್ನು ಶೆಕೆಮ್ ಊರಿನ ಹೊಲದಲ್ಲಿ ಹೂಳಿಟ್ಟರು. ಈ ಹೊಲವನ್ನು ಯಾಕೋಬನು ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ನೂರು ಬೆಳ್ಳಿ ನಾಣ್ಯಗಳನ್ನು ಕೊಟ್ಟು ಕೊಂಡುಕೊಂಡಿದ್ದನು. ಅದು ಯೋಸೇಫ್ಯರ ಸೊತ್ತಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 24:32
9 ತಿಳಿವುಗಳ ಹೋಲಿಕೆ  

ಇದಲ್ಲದೆ ಯೋಸೇಫನು ಇಸ್ರಾಯೇಲನ ಮಕ್ಕಳಿಗೆ, “ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸುವನು. ಆಗ ನೀವು ನನ್ನ ಶವವನ್ನು ನಿಮ್ಮ ಸಂಗಡ ಹೊತ್ತುಕೊಂಡು ಹೋಗಬೇಕು” ಎಂದು ಅವರಿಂದ ಪ್ರಮಾಣಮಾಡಿಸಿದನು.


ಅವನು ತನ್ನ ಗುಡಾರಗಳನ್ನು ಹಾಕಿಸಿದ ಭೂಮಿಯನ್ನು ಹಮೋರನ ಮಕ್ಕಳಿಗೆ ನೂರು ನಾಣ್ಯ ಕೊಟ್ಟು ಅವರಿಂದ ಕೊಂಡುಕೊಂಡನು. ಹಮೋರನು ಶೆಕೆಮನ ತಂದೆ.


ಇದಲ್ಲದೆ ಯೋಸೇಫನು ಇಸ್ರಾಯೇಲರಿಗೆ, “ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸಿ ತನ್ನ ವಾಗ್ದಾನವನ್ನು ನೆರವೇರಿಸುವವನಾಗಿರುವುದರಿಂದ ನೀವು ಹೋಗುವಾಗ ನನ್ನ ದೇಹದ ಅಸ್ತಿಮೂಳೆಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಹೋಗಬೇಕು” ಎಂದು ಖಂಡಿತವಾದ ಪ್ರಮಾಣವನ್ನು ಮಾಡಿಸಿದ್ದರಿಂದ ಮೋಶೆಯು ಅವನ ಮೂಳೆಗಳನ್ನು ತನ್ನ ಸಂಗಡ ತೆಗೆದುಕೊಂಡು ಹೋದನು.


ಅವರನ್ನು ಶೇಕೆಮಿಗೆ ತೆಗೆದುಕೊಂಡು ಹೋಗಿ ಅಲ್ಲಿ ಹಮೋರನ ಮಕ್ಕಳಿಂದ ಅಬ್ರಹಾಮನು ಬೆಳ್ಳಿಯನ್ನು ಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು.


ಯೋಸೇಫನು ತನ್ನ ಮರಣ ಸಮಯದಲ್ಲಿ ಇಸ್ರಾಯೇಲ್ಯರು ಐಗುಪ್ತದೇಶದಿಂದ ಹೊರಡುವುದನ್ನು ಕುರಿತು ನಂಬಿಕೆಯಿಂದಲೇ ಮಾತನಾಡಿ ತನ್ನ ಎಲುಬುಗಳನ್ನು ತೆಗೆದುಕೊಂಡು ಹೋಗುವ ವಿಷಯದಲ್ಲಿ ಅಪ್ಪಣೆ ಕೊಟ್ಟನು.


ಹೋಗುವಾಗ ಸಮಾರ್ಯ ಸೀಮೆಗೆ ಸೇರಿದ ಸುಖರೆಂಬ ಊರಿಗೆ ಬಂದನು. ಅದು ಯಾಕೋಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂಮಿಯ ಹತ್ತಿರದಲ್ಲಿತ್ತು.


ಇದಲ್ಲದೆ, ನಾನು ನಿನ್ನ ಅಣ್ಣಂದಿರಿಗೆ ಕೊಟ್ಟ ಪಾಲಿಗಿಂತ ಹೆಚ್ಚಾಗಿ ನಾನು ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಪ್ಪಿಸಿ ಪಡೆದ ಬೆಟ್ಟದ ತಪ್ಪಲನ್ನು ನಿನಗೆ ಕೊಟ್ಟಿದ್ದೇನೆ” ಎಂದು ಹೇಳಿದನು.


ಯಾಕೋಬನು ಐಗುಪ್ತದೇಶಕ್ಕೆ ಬಂದು. ಅಲ್ಲಿ ಅವನೂ ಮತ್ತು ನಮ್ಮ ಪೂರ್ವಿಕರೂ ತೀರಿಹೋದರು.


ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ, “ನನಗೆ ಅವಸಾನಕಾಲ ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ತಾನು ಅಬ್ರಹಾಮ, ಇಸಾಕ್, ಯಾಕೋಬರಿಗೆ ಕೊಡುತ್ತೇನೆಂದು ಪ್ರಮಾಣಮಾಡಿ ಹೇಳಿದ ದೇಶಕ್ಕೆ ನೀವು ಹೋಗಿ ಸೇರುವಂತೆ ಮಾಡುವನು” ಎಂದು ತಿಳಿದುಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು