Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 24:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇಸಾಕನಿಗೆ ಯಾಕೋಬ, ಏಸಾವ ಎಂಬ ಇಬ್ಬರು ಮಕ್ಕಳನ್ನು ಅನುಗ್ರಹಿಸಿ, ಏಸಾವನಿಗೆ ಸೇಯೀರ್ ಪರ್ವತವನ್ನೂ ಸ್ವತ್ತಾಗಿ ದಯಪಾಲಿಸಿದೆನು. ಯಾಕೋಬನಾದರೋ ತನ್ನ ಮಕ್ಕಳ ಸಹಿತವಾಗಿ ಐಗುಪ್ತ ದೇಶಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇಸಾಕನಿಗೆ ಯಕೋಬ್ ಮತ್ತು ಏಸಾವ್ ಎಂಬ ಇಬ್ಬರು ಮಕ್ಕಳನ್ನು ಅನುಗ್ರಹಿಸಿದೆ. ಏಸಾವನಿಗೆ ಸೇಯೀರ್ ಬೆಟ್ಟವನ್ನು ಸ್ವಂತ ಸೊತ್ತಾಗಿ ದಯಪಾಲಿಸಿದೆ. ಯಕೋಬನಾದರೋ ತನ್ನ ಮಕ್ಕಳ ಸಮೇತ ಈಜಿಪ್ಟ್ ದೇಶಕ್ಕೆ ಹೋದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇಸಾಕನಿಗೆ ಯಾಕೋಬ್, ಏಸಾವ್ ಎಂಬಿಬ್ಬರು ಮಕ್ಕಳನ್ನು ಅನುಗ್ರಹಿಸಿ ಏಸಾವನಿಗೆ ಸೇಯೀರ್ ಪರ್ವತವನ್ನು ಸ್ವಾಸ್ತ್ಯವಾಗಿ ದಯಪಾಲಿಸಿದೆನು. ಯಾಕೋಬನಾದರೋ ತನ್ನ ಮಕ್ಕಳ ಸಹಿತವಾಗಿ ಐಗುಪ್ತ ದೇಶಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇಸಾಕನಿಗೆ ಯಾಕೋಬ ಮತ್ತು ಏಸಾವ ಎಂಬ ಗಂಡುಮಕ್ಕಳನ್ನು ಕೊಟ್ಟೆನು. ಏಸಾವನಿಗೆ ಸೇಯೀರ್ ಪರ್ವತಗಳ ಸುತ್ತಮುತ್ತಲಿನ ಪ್ರದೇಶವನ್ನು ಕೊಟ್ಟೆನು. ಯಾಕೋಬ ಮತ್ತು ಅವನ ಮಕ್ಕಳು ಅಲ್ಲಿ ಇರಲಿಲ್ಲ. ಅವರು ಈಜಿಪ್ಟ್ ದೇಶದಲ್ಲಿ ವಾಸಮಾಡಲು ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇಸಾಕನಿಗೆ ಯಾಕೋಬನನ್ನೂ ಏಸಾವನನ್ನೂ ಕೊಟ್ಟು ಏಸಾವನಿಗೆ ಸೇಯೀರ್ ಪರ್ವತದ ನಾಡನ್ನು ಸೊತ್ತಾಗಿ ಕೊಟ್ಟೆನು. ಆದರೆ ಯಾಕೋಬನೂ ಅವನ ಮಕ್ಕಳೂ ಈಜಿಪ್ಟಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 24:4
9 ತಿಳಿವುಗಳ ಹೋಲಿಕೆ  

ನಾನು ಸೇಯೀರ್ ಬೆಟ್ಟದ ಸೀಮೆಯನ್ನು ಏಸಾವ್ಯರಿಗೇ ಸ್ವದೇಶವಾಗಿ ಕೊಟ್ಟಿರುವುದರಿಂದ ಅದರಲ್ಲಿ ನಿಮಗೆ ಹೆಜ್ಜೆಯಿಡುವಷ್ಟು ನೆಲವನ್ನಾದರೂ ಕೊಡುವುದಿಲ್ಲ.


ಹೀಗೆ ಏಸಾವನು ಸೇಯೀರ್ ಬೆಟ್ಟದ ಸೀಮೆಗೆ ಹೋಗಿ ಅಲ್ಲೇ ವಾಸವಾಗಿದ್ದನು. ಏಸಾವನೆಂದರೆ ಎದೋಮನು.


ಯಾಕೋಬನು ಐಗುಪ್ತದೇಶಕ್ಕೆ ಬಂದು. ಅಲ್ಲಿ ಅವನೂ ಮತ್ತು ನಮ್ಮ ಪೂರ್ವಿಕರೂ ತೀರಿಹೋದರು.


ಆಗ ಇಸ್ರಾಯೇಲನು ಐಗುಪ್ತಕ್ಕೆ ಬಂದನು; ಯಾಕೋಬನು ಹಾಮನ ದೇಶದಲ್ಲಿ ಪ್ರವಾಸಿಯಾದನು.


ಬಳಿಕ ಯಾಕೋಬನು ತನಗಿಂತ ಮೊದಲು ಎದೋಮ್ಯರ ಪ್ರದೇಶವಾಗಿರುವ ಸೇಯೀರ್ ಸೀಮೆಗೆ ತನ್ನ ಅಣ್ಣನಾದ ಏಸಾವನ ಬಳಿಗೆ ಸೇವಕರನ್ನು ಕಳುಹಿಸಿದನು.


ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು; ಗರ್ಭಫಲವು ಆತನ ಬಹುಮಾನವೇ.


ಸೇಯೀರ್ ಬೆಟ್ಟದ ಸೀಮೆಯಲ್ಲಿದ್ದ ಎದೋಮ್ಯರ ಮೂಲಪುರುಷನಾದ ಏಸಾವನ ವಂಶದ ಚರಿತ್ರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು