ಯೆಹೋಶುವ 24:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಿಮ್ಮ ಪೂರ್ವಿಕರು ಐಗುಪ್ತದಿಂದ ಬಿಡುಗಡೆಯಾಗಿ ಕೆಂಪು ಸಮುದ್ರಕ್ಕೆ ಬರುತ್ತಿರುವಾಗ ಐಗುಪ್ತರು ರಥಾಶ್ವಬಲಗಳ ಸಹಿತವಾಗಿ ಅವರನ್ನು ಆ ಸಮುದ್ರದವರೆಗೂ ಹಿಂದಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಿಮ್ಮ ಪೂರ್ವಜರು ಈಜಿಪ್ಟಿನಿಂದ ಬಿಡುಗಡೆಯಾಗಿ ಕೆಂಪುಸಮುದ್ರಕ್ಕೆ ಬರುತ್ತ ಇರುವಾಗ ಈಜಿಪ್ಟಿನವರು ರಥಾಶ್ವಬಲಗಳ ಸಹಿತ ಅವರನ್ನು ಆ ಸಮುದ್ರದವರೆಗೂ ಹಿಂದಟ್ಟಿ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಿಮ್ಮ ಪಿತೃಗಳು ಐಗುಪ್ತದಿಂದ ಬಿಡುಗಡೆಯಾಗಿ ಕೆಂಪುಸಮುದ್ರಕ್ಕೆ ಬರುತ್ತಿರುವಾಗ ಐಗುಪ್ತ್ಯರು ರಥಾಶ್ವಬಲಗಳ ಸಹಿತವಾಗಿ ಅವರನ್ನು ಆ ಸಮುದ್ರದವರೆಗೂ ಹಿಂದಟ್ಟಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಹೀಗೆ ನಿಮ್ಮ ಪೂರ್ವಿಕರು ಈಜಿಪ್ಟಿನಿಂದ ಹೊರಡು ಕೆಂಪು ಸಮುದ್ರಕ್ಕೆ ಬಂದರು. ಈಜಿಪ್ಟಿನ ಜನರು ರಥಗಳಲ್ಲಿ ಮತ್ತು ಕುದುರೆಗಳ ಮೇಲೆ ಅವರನ್ನು ಬೆನ್ನಟ್ಟಿಕೊಂಡು ಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಾನು ನಿಮ್ಮ ಪೂರ್ವಜರನ್ನು ಈಜಿಪ್ಟಿನಿಂದ ಹೊರಡಿಸಿದಾಗ ನೀವು ಸಮುದ್ರದ ತೀರಕ್ಕೆ ಬಂದಿರಿ. ಆದರೆ ಈಜಿಪ್ಟಿನವರು ರಥಗಳ ಮತ್ತು ರಾಹುತರ ಸಂಗಡ ನಿಮ್ಮ ಪೂರ್ವಜರನ್ನು ಕೆಂಪು ಸಮುದ್ರದವರೆಗೂ ಹಿಂದಟ್ಟಿದರು. ಅಧ್ಯಾಯವನ್ನು ನೋಡಿ |