Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 24:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀವು ಬಹು ಕಾಲದವರೆಗೆ ಅರಣ್ಯದಲ್ಲಿದ್ದ ನಂತರ ನಿಮ್ಮನ್ನು ಯೊರ್ದನಿನ ಆಚೆಯಲ್ಲಿ ಅಮೋರಿಯರ ದೇಶಕ್ಕೆ ಕರೆತಂದೆನು. ನಿಮ್ಮೊಡನೆ ಯುದ್ಧಕ್ಕೆ ಬಂದ ಅವರನ್ನು ನಿಮ್ಮ ಕೈಗೆ ಕೊಟ್ಟುಬಿಟ್ಟೆನು. ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಂಡಿರಿ. ಅವರನ್ನು ನಿಮ್ಮೆದುರಿನಲ್ಲೇ ಸಂಹರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ‘ನೀವು ದೀರ್ಘಕಾಲ ಮರುಭೂಮಿಯಲ್ಲಿದ್ದಿರಿ. ಅನಂತರ ನಿಮ್ಮನ್ನು ಜೋರ್ಡನಿನ ಆಚೆ ಅಮೋರಿಯರ ನಾಡಿಗೆ ಕರೆತಂದೆ. ನಿಮ್ಮೊಡನೆ ಯುದ್ಧಕ್ಕೆ ಬಂದ ಅವರನ್ನು ನಿಮ್ಮ ಕೈವಶಮಾಡಿದೆ. ನೀವು ಅವರ ನಾಡನ್ನು ಸ್ವತಂತ್ರಿಸಿಕೊಂಡಿರಿ. ಅವರನ್ನು ನಿಮ್ಮೆದುರಿನಲ್ಲೇ ನಾಶಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನೀವು ಬಹುಕಾಲದವರೆಗೆ ಅರಣ್ಯದಲ್ಲಿದ್ದನಂತರ ನಿಮ್ಮನ್ನು ಯೊರ್ದನಿನ ಆಚೆಯಲ್ಲಿ ಅಮೋರಿಯರ ದೇಶಕ್ಕೆ ಕರತಂದೆನು. ನಿಮ್ಮೊಡನೆ ಯುದ್ಧಕ್ಕೆ ಬಂದ ಅವರನ್ನು ನಿಮ್ಮ ಕೈಗೆ ಕೊಟ್ಟುಬಿಟ್ಟೆನು. ನೀವು ಅವರ ದೇಶವನ್ನು ಸ್ವತಂತ್ರಿಸಿಕೊಂಡಿರಿ. ಅವರನ್ನು ನಿಮ್ಮೆದುರಿನಲ್ಲಿ ಸಂಹರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಗ ನಾನು ನಿಮ್ಮನ್ನು ಜೋರ್ಡನ್ ನದಿಯ ಪೂರ್ವದಲ್ಲಿರುವ ಅಮೋರಿಯರ ಪ್ರದೇಶಕ್ಕೆ ಕರೆತಂದೆನು. ಆ ಜನರು ನಿಮ್ಮೊಂದಿಗೆ ಯುದ್ಧಮಾಡಿದರು. ಆದರೆ ನೀವು ಅವರನ್ನು ಸೋಲಿಸುವಂತೆ ನಾನು ಮಾಡಿದೆ. ಆ ಜನರನ್ನು ನಾಶಮಾಡುವ ಶಕ್ತಿಯನ್ನು ನಾನು ನಿಮಗೆ ಕೊಟ್ಟೆನು. ಆಗ ನೀವು ಆ ಪ್ರದೇಶವನ್ನು ಸ್ವಾಧೀನಪಡಿಸಿಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ ‘ನಾನು ಈಜಿಪ್ಟಿನಲ್ಲಿ ಮಾಡಿದ್ದನ್ನು ನಿಮ್ಮ ಕಣ್ಣುಗಳು ಕಂಡವು. ಮರುಭೂಮಿಯಲ್ಲಿ ಬಹುಕಾಲದವರೆಗೆ ವಾಸವಾಗಿದ್ದೀರಿ. ಅನಂತರ ಯೊರ್ದನ್ ನದಿ ಆಚೆ ವಾಸವಾಗಿದ್ದ ಅಮೋರಿಯರ ದೇಶಕ್ಕೆ ನಿಮ್ಮನ್ನು ಕರೆದುಕೊಂಡು ಬಂದೆನು. ಅವರು ನಿಮ್ಮ ಸಂಗಡ ಯುದ್ಧಮಾಡುವಾಗ ಅವರ ದೇಶವನ್ನು ನೀವು ಸ್ವಾಧೀನ ಮಾಡಿಕೊಳ್ಳುವ ಹಾಗೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿ, ಅವರನ್ನು ನಿಮ್ಮ ಎದುರಿನಿಂದ ನಾಶಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 24:8
10 ತಿಳಿವುಗಳ ಹೋಲಿಕೆ  

ರಾಜ್ಯಗಳನ್ನೂ, ಜನಾಂಗಗಳನ್ನು ಅವರಿಗೆ ವಶಪಡಿಸಿ, ಆ ರಾಜ್ಯಗಳನ್ನು ಅವರಿಗೆ ಸ್ವತ್ತಾಗಿ ಹಂಚಿಕೊಟ್ಟೆ. ಹೀಗೆ ಅವರು ಹೆಷ್ಬೋನಿನ ಅರಸನಾದ ಸೀಹೋನ್, ಬಾಷಾನಿನ ಅರಸನಾದ ಓಗ್ ಇವರ ಪ್ರಾಂತ್ಯಗಳನ್ನು ಸ್ವಾಧೀನಪಡಿಸಿಕೊಂಡರು.


ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯರ ಅರಸನಾದ ಸೀಹೋನನ ವಶದಲ್ಲಿದ್ದ ಅಮ್ಮೋನಿಯರ ಮೇರೆಯ ಈಚೆಗೆ ಇದ್ದಂಥ ಎಲ್ಲಾ ಪಟ್ಟಣಗಳು; ಗಿಲ್ಯಾದ್ ಸೀಮೆ


ಸೀಹೋನನು ತನ್ನ ಜನರೆಲ್ಲರ ಸಮೇತ ನಮ್ಮೊಡನೆ ಯುದ್ಧಮಾಡುವುದಕ್ಕೆ ಯಹಜಿಗೆ ಹೊರಟುಬಂದನು.


ನನ್ನ ದೂತನು ನಿಮ್ಮ ಮುಂದಾಗಿ ಹೊರಟು ಅಮೋರಿಯರು, ಹಿತ್ತಿಯರು, ಪೆರಿಜೀಯರು, ಕಾನಾನ್ಯರು, ಹಿವ್ವಿಯರು, ಯೆಬೂಸಿಯರೂ ಇರುವ ದೇಶಕ್ಕೆ ನಿಮ್ಮನ್ನು ಸೇರಿಸುವನು. ಅವರನ್ನಾದರೋ ನಾನು ನಿರ್ಮೂಲಮಾಡುವೆನು.


ಆಹಾ, ಅವರಿಗೆ ಎದುರಾಗಿ ನಿಂತ ಅಮೋರಿಯರನ್ನು ನಾನೇ ಧ್ವಂಸಮಾಡಿದೆನು, ಆ ಶತ್ರುವು ದೇವದಾರು ಮರದಷ್ಟು ಎತ್ತರವಾಗಿ, ಅಲ್ಲೋನ್ ಮರದ ಹಾಗೆ ಬಲಿಷ್ಠವಾಗಿಯೂ ಇದ್ದರು. ಆದರೂ ಮರದ ಮೇಲಿನ ಅದರ ಫಲವನ್ನು, ಕೆಳಗೆ ಅದರ ಬುಡವನ್ನು ನಾಶಪಡಿಸಿದೆನು.


ಇಸ್ರಾಯೇಲ್ಯರೇ, ನೀವು ಅಮ್ಮೋನಿಯರ ದೇಶವನ್ನು ಸ್ವಾಧೀನಪಡಿಸಿಕೊಳ್ಳಲು, ನಾನು ನಿಮ್ಮನ್ನು ಐಗುಪ್ತ ದೇಶದೊಳಗಿಂದ ಪಾರುಮಾಡಿ, ನಲ್ವತ್ತು ವರ್ಷ ಅರಣ್ಯದಲ್ಲಿ ನಿಮ್ಮನ್ನು ನಡೆಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು