Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 3:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ಜೀವಸ್ವರೂಪನಾದ ದೇವರು ನಿಮ್ಮ ಮಧ್ಯದಲ್ಲಿ ಇದ್ದಾನೆಂದು ಆತನು ಕಾನಾನ್ಯರನ್ನು, ಹಿತ್ತಿಯರನ್ನು, ಹಿವ್ವಿಯರನ್ನು, ಪೆರಿಜೀಯರನ್ನು, ಗಿರ್ಗಾಷಿಯರನ್ನು, ಅಮೋರಿಯರನ್ನು, ಯೆಬೂಸಿಯರನ್ನು ನಿಮ್ಮ ಮುಂದೆ ಓಡಿಸಿಬಿಡುವನೆಂದು ನಿಮಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಚೈತನ್ಯಸ್ವರೂಪನಾದ ದೇವರು ನಿಮ್ಮ ಮಧ್ಯೆ ಇದ್ದಾರೆಂದು ನಿಮಗೆ ಈಗ ತಿಳಿಯುವುದು. ಅದೇ ಕಾನಾನ್ಯರನ್ನು, ಹಿತ್ತಿಯರನ್ನು, ಹಿವ್ವಿಯರನ್ನು, ಪೆರಿಜೀಯರನ್ನು, ಗಿರ್ಗಾಷಿಯರನ್ನು, ಅಮೋರಿಯರನ್ನು ಹಾಗೂ ಯೆಬೂಸಿಯರನ್ನು ನಿಮ್ಮ ಮುಂದಿನಿಂದ ಓಡಿಸಿಬಿಡುವರೆಂದು ನಿಮಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಚೈತನ್ಯಸ್ವರೂಪನಾದ ದೇವರು ನಿಮ್ಮ ಮಧ್ಯದಲ್ಲಿರುತ್ತಾನೆಂಬದೂ ಆತನು ಕಾನಾನ್ಯರು, ಹಿತ್ತಿಯರು, ಹಿವ್ವಿಯರು, ಪೆರಿಜೀಯರು, ಗಿರ್ಗಾಷಿಯರು, ಅಮೋರಿಯರು, ಯೆಬೂಸಿಯರು ಇವರನ್ನೆಲ್ಲಾ ನಿಮ್ಮ ಮುಂದೆ ತಪ್ಪದೆ ಹೊರಡಿಸುವನೆಂಬದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಚೈತನ್ಯಸ್ವರೂಪನಾದ ದೇವರು ನಿಜವಾಗಿಯೂ ನಿಮ್ಮ ಸಂಗಡ ಇದ್ದಾನೆ ಎಂಬುದಕ್ಕೆ ಇಲ್ಲಿ ಒಂದು ಸಾಕ್ಷಿ ಇದೆ. ಆತನು ನಿಜವಾಗಿಯೂ ನಿಮ್ಮ ವೈರಿಗಳನ್ನು ಸೋಲಿಸುತ್ತಾನೆ ಎಂಬುದಕ್ಕೆ ಇಲ್ಲಿ ಸಾಕ್ಷಿ ಇದೆ. ಕಾನಾನ್ಯರು, ಹಿತ್ತಿಯರು, ಹಿವ್ವಿಯರು, ಪೆರಿಜೀಯರು, ಗಿರ್ಗಾಷಿಯರು, ಅಮೋರಿಯರು, ಯೆಬೂಸಿಯರು, ಇವರನ್ನೆಲ್ಲಾ ಆತನು ಸೋಲಿಸುತ್ತಾನೆ. ಆ ದೇಶದಿಂದ ಅವರನ್ನು ಬಲವಂತವಾಗಿ ಹೊರಗಟ್ಟುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಜೀವವುಳ್ಳ ದೇವರು ನಿಮ್ಮ ಮಧ್ಯದಲ್ಲಿರುವುದನ್ನೂ, ಅವರು ಕಾನಾನ್ಯರನ್ನೂ, ಹಿತ್ತಿಯರನ್ನೂ, ಹಿವ್ವಿಯರನ್ನೂ, ಪೆರಿಜೀಯರನ್ನೂ, ಗಿರ್ಗಾಷಿಯರನ್ನೂ, ಅಮೋರಿಯರನ್ನೂ, ಯೆಬೂಸಿಯರನ್ನೂ ನಿಮ್ಮ ಮುಂದೆ ನಿಶ್ಚಯವಾಗಿ ಓಡಿಸಿಬಿಡುವುದನ್ನೂ ನೀವು ತಿಳಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 3:10
37 ತಿಳಿವುಗಳ ಹೋಲಿಕೆ  

ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿ ಅಧಿಕ ಸಂಖ್ಯೆಯಲ್ಲಿಯೂ ಮತ್ತು ಅಧಿಕ ಬಲದಲ್ಲಿಯೂ ನಿಮಗೆ ಮೀರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ನಿಮ್ಮ ಮುಂದೆಯೇ ಹೊರಡಿಸುವನು.


ನಾನು, ನಿನಗಿಂತ ಮುಂದಾಗಿ ಒಬ್ಬ ದೂತನನ್ನು ಕಳುಹಿಸಿ ಕಾನಾನ್ಯರನ್ನು, ಅಮೋರಿಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಹಾಗು ಯೆಬೂಸಿಯರನ್ನು ಹೊರದೂಡುವೆನು.


ಜೀವಸ್ವರೂಪನಾದ ದೇವರ ಕೈಯಲ್ಲಿ ಸಿಕ್ಕಿಬೀಳುವುದು ಎಷ್ಟೋ ಭಯಂಕರವಾದದ್ದು.


ದಾವೀದನು, “ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸುವುದಕ್ಕೆ ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಾಯೇಲ್ಯರಿಗೆ ಬಂದಿರುವ ನಿಂದೆಯನ್ನು ತೆಗೆದುಹಾಕುವವನಿಗೆ ಏನು ಸಿಕ್ಕುವುದು ಹೇಳಿರಿ” ಎಂದು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರನ್ನು ಕೇಳಿದನು,


ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಮತ್ತು ಶಾಶ್ವತ ರಾಜನೂ ಆಗಿದ್ದಾನೆ. ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.


ಜೀವಸ್ವರೂಪನಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದನೆಯ ಮಾತುಗಳನ್ನು, ನಿನ್ನ ದೇವರಾದ ಯೆಹೋವನು ಕೇಳಿರುವನು. ನಿನ್ನ ದೇವರಾದ ಯೆಹೋವನು ತಾನು ಹೇಳಿದ ಮಾತುಗಳ ನಿಮಿತ್ತ ಮುಯ್ಯಿತೀರಿಸುವನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗಾಗಿಯಾದರೂ ಆತನನ್ನು ಪ್ರಾರ್ಥಿಸು ಎಂಬುದಾಗಿ ಹಿಜ್ಕೀಯನು ಹೇಳುತ್ತಾನೆ” ಎಂದು ಹೇಳಿರಿ ಅಂದನು.


ಮಹಾಯಾಜಕನಾದ ಎಲ್ಲಾಜಾರನ ಮಗನಾದ ಫೀನೆಹಾಸನು ರೂಬೇನ್, ಗಾದ್, ಮನಸ್ಸೆ ಕುಲಗಳವರಿಗೆ “ನೀವು ಯೆಹೋವನಿಗೆ ವಿರುದ್ಧವಾಗಿ ಅಂಥ ದ್ರೋಹವನ್ನು ಮಾಡಲಿಲ್ಲವಾದ್ದರಿಂದ ಆತನು ನಮ್ಮ ಮಧ್ಯದಲ್ಲಿದ್ದಾನೆಂಬುದು ಈಗ ನಮಗೆ ತಿಳಿಯಿತು. ಹೀಗಿರಲಾಗಿ ನೀವು ಇಸ್ರಾಯೇಲರನ್ನು ಯೆಹೋವನ ಶಿಕ್ಷಾಹಸ್ತದಿಂದ ತಪ್ಪಿಸಿದ್ದೀರಿ” ಎಂದನು.


ಆಗ ನಾನು ಅವರ ಮೇಲೆ ಬಲುಕೋಪಗೊಂಡು ಅವರನ್ನು ಬಿಟ್ಟು ಅವರಿಗೆ ವಿಮುಖನಾಗಿರುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಮತ್ತು ಅನೇಕ ಕಷ್ಟಗಳೂ ಹಾಗು ವಿಪತ್ತುಗಳೂ ಅವರಿಗೆ ಒದಗುವವು. ಆಗ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿತ್ತಲ್ಲ’ ಅಂದುಕೊಳ್ಳುವರು.


ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.


ನಾವು ನಿಮ್ಮಲ್ಲಿಗೆ ಬಂದಾಗ ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ನೀವು ವಿಗ್ರಹಗಳನ್ನು ತೊರೆದು ದೇವರ ಕಡೆಗೆ ತಿರುಗಿಕೊಂಡು ಜೀವಸ್ವರೂಪನಾದ ಸತ್ಯ ದೇವರನ್ನು ಸೇವಿಸುವವರಾಗಿದ್ದೀರಿ


ಇಸ್ರಾಯೇಲರ ಸಂಖ್ಯೆಯು ಅಳೆಯುವುದಕ್ಕೂ, ಲೆಕ್ಕಿಸುವುದಕ್ಕೂ ಅಸಾಧ್ಯವಾದ ಸಮುದ್ರತೀರದ ಮರಳಿನಂತಾಗುವುದು. ಆಗ ಅವರು ನನ್ನ ಪ್ರಜೆಯಲ್ಲ ಎನಿಸಿಕೊಳ್ಳುವುದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.


ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ


ಬೆಂಕಿಯ ಜ್ವಾಲೆಯೊಳಗಿಂದ ಮಾತನಾಡುವ ಚೈತನ್ಯಸ್ವರೂಪನಾದ ದೇವರ ಸ್ವರವನ್ನು ನಾವು ಕೇಳಿದಂತೆ ಎಲ್ಲಾ ಮನುಷ್ಯರೊಳಗೆ ಯಾರು ಕೇಳಿ ಬದುಕಿದರು? ಹೀಗಿರುವುದರಿಂದ ನಾವು ಯಾಕೆ ಸಾಯಬೇಕು?


ಆಗ ಸೀಮೋನ ಪೇತ್ರನು, “ನೀನು ಜೀವವುಳ್ಳ ದೇವರ ಕುಮಾರನಾದ ಕ್ರಿಸ್ತನು” ಎಂದು ಉತ್ತರ ಕೊಟ್ಟನು.


ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.


ಮೀಕಾಯೆಹುವು ಅರಸನಿಗೆ, “ನೀನು ಸುರಕ್ಷಿತವಾಗಿ ಬರುವುದಾದರೆ ನಾನು ನುಡಿದದ್ದು ಯೆಹೋವನ ಮಾತಲ್ಲವೆಂದು ತಿಳಿದುಕೋ” ಎಂದು ಹೇಳಿ “ಎಲ್ಲಾ ಜನರೇ, ಇದನ್ನು ಕೇಳಿರಿ” ಎಂದು ಕೂಗಿದನು.


ಯೆಹೋವನು ಇಸ್ರಾಯೇಲ್ಯರಿಗೆ ಮಾಡಿದ ಅತಿ ಶ್ರೇಷ್ಠ ವಾಗ್ದಾನಗಳಲ್ಲಿ ಒಂದೂ ತಪ್ಪಿ ಹೋಗಲಿಲ್ಲ. ಎಲ್ಲವೂ ನೆರವೇರಿದವು.


ಇಸ್ರಾಯೇಲರು, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ?” ಎಂದು ಯೆಹೋವನನ್ನು ಅಲ್ಲಿ ಪರೀಕ್ಷಿಸಿದ್ದರಿಂದ, ಮೋಶೆ ಆ ಸ್ಥಳಕ್ಕೆ ಮಸ್ಸಾ ಎಂತಲೂ ಅವರು ಗದ್ದಲ ಮಾಡಿದ್ದರಿಂದ ಅದಕ್ಕೆ ಮೆರೀಬಾ ಎಂತಲೂ ಹೆಸರಿಟ್ಟನು.


ನೀನು ದೇವರಿಂದ ಬಂದ ಅತಿಪರಿಶುದ್ಧನೆಂದು ನಾವು ನಂಬಿದ್ದೇವೆ ಮತ್ತು ತಿಳಿದಿದ್ದೇವೆ” ಎಂದನು.


ನೀವು ಅವರಿಗೆ ಹೆದರಿಕೊಳ್ಳಬೇಡಿರಿ; ನಿಮ್ಮ ದೇವರಾದ ಯೆಹೋವನು ನಿಮ್ಮ ಮಧ್ಯದಲ್ಲಿದ್ದಾನೆ; ಆತನು ನಮ್ಮ ಭಕ್ತಿಗೆ ಪ್ರತಿಕಾರವಾಗಿ ವಿಸ್ಮಯ ಹುಟ್ಟಿಸುವ ದೇವರಾಗಿದ್ದಾನೆ.


ಆಗ ಯೆಹೋಶುವನು ಇಸ್ರಾಯೇಲ್ಯರಿಗೆ “ಇಲ್ಲಿಗೆ ಬಂದು ನಿಮ್ಮ ದೇವರಾದ ಯೆಹೋವನ ಮಾತುಗಳನ್ನು ಕೇಳಿರಿ” ಎಂದು ಹೇಳಿ,


ಯೊರ್ದನ್ ನದಿಯ ಆಚೆಗಿರುವ ಬೆಟ್ಟದ ಮೇಲಿನ ಪ್ರದೇಶ, ಕಣಿವೆ ಪ್ರದೇಶ, ಲೆಬನೋನಿನ ಎದುರಿಗಿರುವ ಮಹಾಸಾಗರದ ತೀರಪ್ರದೇಶ ಇವುಗಳಲ್ಲಿ ವಾಸವಾಗಿದ್ದ ಅಮೋರಿಯ, ಹಿತ್ತಿಯ, ಕಾನಾನ್, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ರಾಜರು ನಡೆದ ಸಂಗತಿಯನ್ನು ಕೇಳಿದರು ಹಾಗೂ


ಆಗ ದಾವೀದನು ಹಿತ್ತಿಯನ ಮಗನಾದ ಅಹೀಮೆಲೆಕನಿಗೂ, ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ, “ನಿಮ್ಮಲ್ಲಿ ನನ್ನ ಸಂಗಡ ಸೌಲನ ಪಾಳೆಯಕ್ಕೆ ಯಾರು ಬರುವಿರಿ?” ಎಂದು ಕೇಳಿದ್ದಕ್ಕೆ ಅಬೀಷೈಯು, “ನಾನು ಬರುತ್ತೇನೆ” ಎಂದು ಉತ್ತರ ಕೊಟ್ಟನು.


ನನ್ನ ಮನಸ್ಸು ದೇವರಿಗಾಗಿ, ಚೈತನ್ಯಸ್ವರೂಪನಾದ ದೇವರಿಗಾಗಿ ಹಾರೈಸುತ್ತದೆ; ನಾನು ಯಾವಾಗ ಹೋಗಿ ದೇವರ ಸನ್ನಿಧಿಯಲ್ಲಿ ಸೇರುವೆನೋ?


ಅಮೋರಿಯರೂ, ಕಾನಾನ್ಯರೂ, ಗಿರ್ಗಾಷಿಯರೂ, ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ,” ಎಂದು ವಾಗ್ದಾನ ಮಾಡಿದನು.


ದಕ್ಷಿಣ ಸೀಮೆಯಲ್ಲಿ ಅಮಾಲೇಕ್ಯರು, ಬೆಟ್ಟದ ಸೀಮೆಯಲ್ಲಿ ಹಿತ್ತಿಯರು, ಯೆಬೂಸಿಯರು, ಅಮೋರಿಯರು ಸಮುದ್ರತೀರದಲ್ಲಿ ಮತ್ತು ಯೊರ್ದನ್ ಹೊಳೆಯ ಬಳಿಯಲ್ಲಿ ಕಾನಾನ್ಯರೂ ವಾಸವಾಗಿದ್ದಾರೆ” ಎಂದು ತಿಳಿಸಿದರು.


ಕಾನಾನ್ಯರು, ಅಮೋರಿಯರು, ಹಿತ್ತಿಯರು, ಪೆರಿಜ್ಜೀಯರು, ಬೆಟ್ಟದ ಮೇಲಿನ ಪ್ರದೇಶದಲ್ಲಿದ್ದ ಯೆಬೂಸಿಯರು, ಹೆರ್ಮೋನಿನ ತಗ್ಗಿನಲ್ಲಿದ್ದ ಮಿಚ್ಪಾ ದೇಶದಲ್ಲಿದ್ದ ಹಿವ್ವಿಯರು ಇವರನ್ನೂ ಕರೆಕಳುಹಿಸಿದನು.


ಇಳುಕಲ್ಲಿನ ಪ್ರದೇಶಗಳು, ಕಣಿವೆ ಪ್ರದೇಶಗಳು, ಬೆಟ್ಟಗಳ ಬುಡದಲ್ಲಿರುವ ಸೀಮೆಗಳು, ಅರಣ್ಯದ ದಕ್ಷಿಣ ಪ್ರಾಂತ್ಯ ಇವುಗಳನ್ನು ಆಳುತ್ತಿದ್ದ ಹಿತ್ತಿಯ, ಅಮೋರಿಯ, ಕಾನಾನ, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ಅರಸರನ್ನೂ ಸೋಲಿಸಿ, ಅವರ ದೇಶಗಳನ್ನು ಇಸ್ರಾಯೇಲರ ಕುಲದವರಿಗೆ ಶಾಶ್ವತ ಆಸ್ತಿಯಾಗಿ ಕೊಟ್ಟನು. ಆ ಅರಸರ ಪಟ್ಟಿಯು ಹೇಗೆಂದರೆ,


ನೀವು ಯೊರ್ದನನ್ನು ದಾಟಿ ಯೆರಿಕೋವಿಗೆ ಬಂದಿರಿ. ಆಗ ಯೆರಿಕೋವಿನವರು ಅಮೋರಿಯರು, ಪೆರಿಜ್ಜೀಯರು, ಕಾನಾನ್ಯರು, ಹಿತ್ತಿಯರು, ಗಿರ್ಗಾಷಿಯರು, ಹಿವ್ವಿಯರು, ಯೆಬೂಸಿಯರು ಇವರೆಲ್ಲಾ ನಿಮಗೆ ವಿರೋಧವಾಗಿ ಯುದ್ಧಕ್ಕೆ ಬರಲು ನಾನು ಅವರೆಲ್ಲರನ್ನು ನಿಮ್ಮ ಕೈಗೆ ಒಪ್ಪಿಸಿದೆನು.


ಇದಲ್ಲದೆ ಯೆಬೂಸಿಯರೂ, ಅಮೋರಿಯರೂ, ಗಿರ್ಗಾಷಿಯರೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು