ಯೆಹೋಶುವ 3:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು, ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಸುಗ್ಗೀ ಕಾಲದಲ್ಲೆಲ್ಲಾ ದಡಮೀರಿ ಹರಿಯುತ್ತಿದ್ದ ಯೊರ್ದನ್ ನದಿಯ ನೀರು ನಿಂತುಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಮಂಜೂಷವನ್ನು ಹೊತ್ತ ಯಾಜಕರು ಜೋರ್ಡನಿಗೆ ಬಂದರು. ಅದು ಸುಗ್ಗಿಯ ಕಾಲ ನದಿ ದಡಮೀರಿ ಹರಿಯುತ್ತಿತ್ತು. ಯಾಜಕರು ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಹರಿಯುತ್ತಿದ್ದ ಜೋರ್ಡನ್ ನದಿಯ ನೀರು ನಿಂತುಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಅದ್ದುತ್ತಲೇ ಸುಗ್ಗೀಕಾಲದಲ್ಲೆಲ್ಲಾ ದಡಮೀರಿ ಹರಿಯುವ ಯೊರ್ದನ್ ಹೊಳೆಯ ನೀರು ನಿಂತು ಹೋಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 (ಆಗ ಸುಗ್ಗಿಕಾಲವಾದ್ದರಿಂದ ಜೋರ್ಡನ್ ನದಿಯು ದಡಮೀರಿ ಹರಿಯುತ್ತಿತ್ತು.) ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುತ್ತಿದ್ದ ಯಾಜಕರು ನದಿಯ ತೀರಕ್ಕೆ ಬಂದರು. ಅವರು ನೀರಿನಲ್ಲಿ ಹೆಜ್ಜೆ ಇಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಎಂದಿನಂತೆ ಯೊರ್ದನ್ ನದಿಯು ಸುಗ್ಗಿಕಾಲದಲ್ಲಿ ದಡ ತುಂಬಿ ಹರಿಯುತ್ತಾ ಇತ್ತು. ಮಂಜೂಷವನ್ನು ಹೊರುವ ಯಾಜಕರ ಕಾಲುಗಳು ನೀರಿನ ಅಂಚಿನಲ್ಲಿ ಇಡುತ್ತಲೇ, ಅಧ್ಯಾಯವನ್ನು ನೋಡಿ |
ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟ ಅಡವಿಯಿಂದ ಎದೋಮ್ಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲರು?