Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 3:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮೇಲಿನಿಂದ ಹರಿದು ಬರುತ್ತಿದ್ದ ನೀರು ಬಹುದೂರದಲ್ಲಿದ್ದ ಚಾರೆತಾನಿನ ಹತ್ತಿರವಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತಿತು. ಕೆಳಗಿನ ನೀರು ಅರಾಬಾ ತಗ್ಗಿನಲ್ಲಿರುವ ಲವಣಸಮುದ್ರಕ್ಕೆ ಹರಿದು ಹೋಯಿತು ಜನರು ಯೆರಿಕೋವಿನ ಎದುರಿನಲ್ಲಿ ಹೊಳೆದಾಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಮೇಲಿಂದ ಬರುತ್ತಿದ್ದ ನೀರು ಬಹು ದೂರದಲ್ಲಿದ್ದ ಚಾರೆತಾನಿನ ಬಳಿಯಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತುಕೊಂಡಿತು. ಕೆಳಗಿನ ನೀರು ಅರಾಬಾ ತಗ್ಗಿನಲ್ಲಿರುವ ಲವಣಸಮುದ್ರಕ್ಕೆ ಹರಿದುಹೋಯಿತು. ಜನರು ಜೆರಿಕೋವಿನ ಎದುರಿನಲ್ಲಿ ನದಿ ದಾಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮೇಲಣಿಂದ ಬರುವ ನೀರು ಬಹುದೂರದಲ್ಲಿದ್ದ ಚಾರೆತಾನಿನ ಹತ್ತಿರವಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತುಕೊಂಡಿತು. ಕೆಳಗಣ ನೀರು ಅರಾಬಾ ತಗ್ಗಿನಲ್ಲಿರುವ ಲವಣ ಸಮುದ್ರಕ್ಕೆ ಹರಿದುಹೋಯಿತು. ಜನರು ಯೆರಿಕೋವಿನ ಎದುರಿನಲ್ಲಿ ಹೊಳೆದಾಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆಗ ನೀರು ಹರಿಯದೆ ನಿಂತುಬಿಟ್ಟಿತು. ಆ ಸ್ಥಳದ ಹಿಂಭಾಗದಲ್ಲಿ ಒಂದು ಸರೋವರದಂತೆ ನೀರು ತುಂಬಿಕೊಂಡಿತು. ನೀರು ಬಹುದೂರದಲ್ಲಿರುವ ಆದಾಮ್ ಊರು ಅಂದರೆ ಜಾರೆತಾನಿನ ಹತ್ತಿರ ಇರುವ ಒಂದು ಊರಿನವರೆಗೂ ರಾಶಿರಾಶಿಯಾಗಿ ನಿಂತುಕೊಂಡಿತು. ಜನರು ಜೆರಿಕೊವಿನ ಹತ್ತಿರ ನದಿಯನ್ನು ದಾಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಮೇಲಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಸಮೀಪವಾಗಿದ್ದ ಆದಾಮ್ ಪಟ್ಟಣಕ್ಕೆ ಬಂದು ರಾಶಿಯಾಗಿ ನಿಂತುಕೊಂಡಿತು. ಕೆಳಗಿನ ನೀರು ಅರಾಬಾ ಎಂಬ ಲವಣ ಸಮುದ್ರಕ್ಕೆ ಹರಿದುಹೋಯಿತು. ಆಗ ಜನರು ಯೆರಿಕೋವಿನ ಎದುರಾಗಿ ನದಿ ದಾಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 3:16
31 ತಿಳಿವುಗಳ ಹೋಲಿಕೆ  

ಸರ್ವಲೋಕದ ಒಡೆಯನಾದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ತಮ್ಮ ಕಾಲುಗಳನ್ನು ಯೊರ್ದನ್ ನದಿಯ ನೀರಲ್ಲಿ ಇಡುತ್ತಲೇ ಮೇಲಿನಿಂದ ಹರಿದು ಬರುವ ನೀರು ಮುಂದೆ ಸಾಗದೆ, ಅಲ್ಲೇ ರಾಶಿಯಾಗಿ ನಿಂತುಕೊಳ್ಳುವುದು” ಎಂದು ತಿಳಿಸಿದನು.


ಅರಸನು ಯೊರ್ದನಿನ ತಗ್ಗಿನಲ್ಲಿ ಸುಕ್ಕೋತಿಗೂ ಮತ್ತು ಚಾರೆತಾನಿಗೂ ಮಧ್ಯದಲ್ಲಿರುವ ಜೇಡಿ ಮಣ್ಣು ಇರುವ ನೆಲದಲ್ಲಿ ಎರಕ ಹೊಯ್ಯಿಸಿದನು.


ತಾಣಕ್ ಮತ್ತು ಮೆಗಿದ್ದೋ, ಚಾರೆತಾನಿನ ಬಳಿಯಲ್ಲಿಯೂ ಇಜ್ರೇಲಿನ ಕೆಳಗಣಭಾಗಗಳೂ, ಬೇತ್ ಷೆಯಾನಿನಿಂದ ಆಬೇಲ್ ಮೆಹೋಲದವರೆಗೂ ಇರುವಂಥ ಯೊಕ್ಮೆಯಾನಿನ ಆಚೆಗೆ ವಿಸ್ತರಿಸಿಕೊಂಡಿರುವಂಥ ಬೇತ್ ಷೆಯಾನಿನ ಎಲ್ಲಾ ಪ್ರದೇಶ ಇವುಗಳಿಗೆ ಅಹೀಲೂದನ ಮಗನಾದ ಬಾಣಾ ಅಧಿಪತಿಯಾಗಿದ್ದನು.


ಈ ಐದು ಅರಸರು ಈಗಿನ ಲವಣಸಮುದ್ರ ಎನ್ನಿಸಿಕೊಳ್ಳುವ ಸಿದ್ದೀಮ್, ತಗ್ಗಿನ ಪ್ರದೇಶದಲ್ಲಿ ಒಟ್ಟಾಗಿ ಕೂಡಿದ್ದರು.


ಸಮುದ್ರವು ಕಂಡು ಓಡಿಹೋಯಿತು; ಯೊರ್ದನ್ ಹೊಳೆಯು ಹಿಂದಿರುಗಿತು.


ಯೊರ್ದನ್ ನದಿಯ ಆಚೆ, ಪಾರಾನ್, ತೋಫೆಲ್, ಲಾಬಾನ್, ಹಚೇರೋತ್ ಮತ್ತು ದೀಜಾಹಾಬ್ ಎಂಬ ಸ್ಥಳಗಳ ನಡುವೆ, ಅರಣ್ಯದಲ್ಲಿ ಆರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಸೂಫಿಗೆ ಎದುರಾಗಿ ಮೋಶೆಯು ಇಸ್ರಾಯೇಲರೆಲ್ಲರಿಗೆ ಮಾಡಿದ ಉಪದೇಶ ಮತ್ತು ಉಪನ್ಯಾಸಗಳು.


ನೀವು ಅಲ್ಲಿ ಸೇರಿದಾಗ ಎದೋಮ್ಯರ ಗಡಿಗಳ ಬಳಿಯಲ್ಲಿರುವ ಚಿನ್ ಅರಣ್ಯವು ನಿಮ್ಮ ದಕ್ಷಿಣದ ಮೇರೆಯಾಗಿರಬೇಕು. ಆ ಮೇರೆಯ ಪೂರ್ವದಿಕ್ಕಿನಲ್ಲಿರುವ ಲವಣಸಮುದ್ರದ ಕೊನೆಯಿಂದ ಪ್ರಾರಂಭಿಸಬೇಕು.


ನೀನು ಸಮುದ್ರದಲ್ಲಿ ಮಾರ್ಗಮಾಡಿದಿ; ಮಹಾಜಲರಾಶಿಗಳನ್ನು ದಾಟಿದಿ; ನಿನ್ನ ಹೆಜ್ಜೆ ಗುರುತು ಕಾಣಲಿಲ್ಲ.


ಬುಗ್ಗೆಹಳ್ಳಗಳನ್ನು ಉಕ್ಕಿಸಿದವನು ನೀನು; ಮಹಾನದಿಗಳನ್ನು ಒಣಗಿಸಿಬಿಟ್ಟವನು ನೀನು.


ಸಮುದ್ರವನ್ನು ಒಣನೆಲವಾಗುವಂತೆ ಮಾಡಿದನು; ಜನರು ನದಿಯ ಮಧ್ಯದಲ್ಲಿ ಕಾಲಿನಿಂದ ದಾಟಿದರು; ಅದಕ್ಕಾಗಿ ನಾವು ಆತನಲ್ಲಿ ಆನಂದಪಡೋಣ.


ಯೆಹೋವನು ಜಲಪ್ರಳಯದಲ್ಲಿ ಆಸೀನನಾಗಿರುವನು; ಆತನು ಸದಾಕಾಲವೂ ಅರಸನಾಗಿ ಕುಳಿತಿರುವನು.


ಅದರ ದಕ್ಷಿಣದ ಮೇರೆಯು ಲವಣ ಸಮುದ್ರದ ತೆಂಕಣ ಕೊನೆಯಿಂದ


ಅದಲ್ಲದೆ ಆರಾಬಾ ಎಂಬ ತಗ್ಗನ್ನೂ ಅವರಿಗೆ ಕೊಟ್ಟೆನು; ಅದರಲ್ಲಿ ಕಿನ್ನೆರೆತ್ ಸಮುದ್ರದಿಂದ ಪಿಸ್ಗಾ ಬೆಟ್ಟದ ಪಶ್ಚಿಮದಲ್ಲಿರುವ ಅರಾಬದ ಸಮುದ್ರವೆನಿಸಿಕೊಳ್ಳುವ ಲವಣಸಮುದ್ರದ ವರೆಗೆ ಯೊರ್ದನ್ ನದಿಯು ಅವರ (ಪಶ್ಚಿಮದ ವರೆಗೆ) ಮೇರೆ.


ಮೋಶೆ ಸಮುದ್ರದ ಮೇಲೆ ಕೈಚಾಚಿದಾಗ, ಯೆಹೋವನು ಆ ರಾತ್ರಿಯೆಲ್ಲಾ ಮೂಡಣ ದಿಕ್ಕಿನಿಂದ ಬಲವಾದ ಬಿರುಗಾಳಿಯನ್ನು ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದು ಕಡೆಗೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದನು. ನೀರು ಇಬ್ಭಾಗವಾಯಿತು.


ನೀರುಗಳನ್ನು ಒಟ್ಟುಗೂಡಿಸಿ ಸಮುದ್ರವನ್ನು ಮಾಡಿದವನು ಆತನೇ; ಭೂಮಿಯ ಕೆಳಗೆ ಜಲಾಶಯಗಳನ್ನು ಇಟ್ಟವನು ಆತನೇ.


ಸಮುದ್ರವೇ, ನಿನಗೇನಾಯಿತು? ಏಕೆ ಓಡಿ ಹೋಗುತ್ತೀ? ಯೊರ್ದನೇ, ಏಕೆ ಹಿಂದಿರುಗುತ್ತೀ?


ನಾನು ಬಂದಾಗ ಏಕೆ ಯಾರೂ ಕಾದಿರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರಕೊಡಲಿಲ್ಲ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿಯು ನನ್ನಲ್ಲಿಲ್ಲವೋ? ಇಗೋ, ನನ್ನ ಗದರಿಕೆಯಿಂದಲೇ ನಾನು ಸಮುದ್ರವನ್ನು ಬತ್ತಿಸಿ ನದಿಗಳನ್ನು ಒಣಕಾಡನ್ನಾಗಿ ಮಾಡುತ್ತೇನೆ. ನೀರಿಲ್ಲದೆ ಅಲ್ಲಿನ ಮೀನುಗಳು ಬಾಯಾರಿ ಸತ್ತು ನಾರುವವು.


ಆಗ ಅವನು ನನಗೆ ಹೀಗೆ ಹೇಳಿದನು, “ಈ ಪ್ರವಾಹವು ಪೂರ್ವ ಪ್ರಾಂತ್ಯಕ್ಕೆ ಹೊರಟು, ಅರಾಬಾ ಎಂಬ ಕಣಿವೆಗೆ ಇಳಿದು ಲವಣ ಸಮುದ್ರದ ಕಡೆಗೆ ಹರಿಯುವುದು. ಈ ನೀರು ಲವಣ ಸಮುದ್ರಕ್ಕೆ ಸೇರಲು ಅದರ ನೀರು ಸಿಹಿಯಾಗುವುದು.


ಆತನು ಸಮುದ್ರವನ್ನು ಗದರಿಸಿ ಒಣಗಿಸುತ್ತಾನೆ, ಸಕಲನದಿಗಳನ್ನು ಬತ್ತಿಸುತ್ತಾನೆ; ಬಾಷಾನೂ ಮತ್ತು ಕರ್ಮೆಲ್ ಹೊಲಗಳೂ ಕಂದುತ್ತವೆ. ಲೆಬನೋನಿನ ಚಿಗುರು ಬಾಡುತ್ತದೆ.


ಯೆಹೋವನೇ, ನಿನಗೆ ನದಿಗಳ ಮೇಲೆ ರೌದ್ರವೋ? ಹೊಳೆಗಳ ಮೇಲೆ ಸಿಟ್ಟುಗೊಂಡಿದ್ದಿಯಾ? ಸಮುದ್ರದ ಮೇಲೆ ಕೋಪವನ್ನು ಪ್ರದರ್ಶಿಸುತ್ತೀಯೋ? ಇಲ್ಲಾ, ನೀನು ಜಯರಥಗಳಲ್ಲಿ ಆಸೀನನಾಗಿ ಮೋಡಗಳ ಮೇಲೆ ರಕ್ಷಣೆಯನ್ನು ಕಳುಹಿಸಿದಾತನು!


ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲಿ ನಡೆದುಹೋದರು. ನೀರು ಅವರ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಂತೆ ನಿಂತುಕೊಂಡಿತು.


ಇಸ್ರಾಯೇಲರಾದರೋ, ಸಮುದ್ರದೊಳಗೆ ಒಣನೆಲದಲ್ಲೇ ನಡೆದುಹೋದರು. ನೀರು ಅವರ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಂತೆ ನಿಂತಿತ್ತು.


ನಿನ್ನ ಮೂಗಿನ ಶ್ವಾಸದಿಂದ ಸಮುದ್ರದ ನೀರು ಒಟ್ಟುಗೂಡಿದವು; ಪ್ರವಾಹವು ಗೋಡೆಯೋಪಾದಿಯಲ್ಲಿ ನಿಂತುಕೊಂಡಿತು; ಸಾಗರದಾಳದೊಳಗಿನ ನೀರು ಗಟ್ಟಿಯಾಯಿತು.


‘ಇಸ್ರಾಯೇಲ್ಯರು ಒಣನೆಲವಾಗಿದ್ದ ಈ ಯೊರ್ದನನ್ನು ದಾಟಿ ಬಂದ್ದದರ ಗುರುತು’ ಎಂದು ಹೇಳಿರಿ.


ಯೊರ್ದನಿನ ಪಶ್ಚಿಮದಲ್ಲಿದ್ದ ಅಮೋರಿಯರ ಎಲ್ಲಾ ಅರಸರು ಮತ್ತು ಸಮುದ್ರದ ಬಳಿಯಲ್ಲಿದ್ದ ಎಲ್ಲಾ ಕಾನಾನ್ಯರ ರಾಜರು, ಯೆಹೋವನು ಇಸ್ರಾಯೇಲ್ಯರ ಮುಂದೆ ಯೊರ್ದನಿನ ಹೊಳೆಯನ್ನು ಬತ್ತಿಸಿ, ಅವರನ್ನು ದಾಟಿಸಿದನೆಂಬ ವಾರ್ತೆ ಕೇಳಲು ಅವರ ಎದೆಯೊಡೆದು ಹೋಯಿತು. ಇಸ್ರಾಯೇಲ್ಯರ ನಿಮಿತ್ತವಾಗಿ ಅವರು ಬಲಗುಂದಿ ಹೋದರು.


ಹಾಗೂ ಯೊರ್ದನ್ ನದಿಯ ಪೂರ್ವದಲ್ಲಿ ಕಿನ್ನೆರೋತ್ ಸಮುದ್ರದಿಂದ ಲವಣಸಮುದ್ರವೆನಿಸಿಕೊಳ್ಳುವ ಅರಾಬ್ ಸಮುದ್ರದ ಹತ್ತಿರವಿರುವ ಬೇತಯೆಷಿಮೋತಿನವರೆಗೂ ದಕ್ಷಿಣದಲ್ಲಿರುವ ಪಿಸ್ಗಾ ಬೆಟ್ಟದ ಬುಡದವರೆಗೂ ಇರುವ ಕಣಿವೆ ಪ್ರದೇಶವು ಇವೇ ಅವನ ರಾಜ್ಯ:


ಅಲ್ಲಿಂದ ಯಾನೋಹ ಊರಿನ ಪೂರ್ವಮಾರ್ಗವಾಗಿ ಅಟಾರೋತ್, ನಾರಾ ಎಂಬ ಊರುಗಳ ಮೇಲೆ ಇಳಿಯುತ್ತಾ ಯೆರಿಕೋ ಪ್ರಾಂತ್ಯಕ್ಕೆ ಬಂದು ಯೊರ್ದನ್ ನದಿಯ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ.


ಆ ಮುನ್ನೂರು ಮಂದಿಯು ಕೊಂಬುಗಳನ್ನು ಊದುತ್ತಿರುವಾಗ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಯೆಹೋವನು ಮಾಡಿದನು. ಪಾಳೆಯದವರು ಚೆರೇರದ ದಾರಿಯಲ್ಲಿರುವ ಬೇತ್‍ಷಿಟ್ಟದ ವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ ಮೆಹೋಲಾ ಪ್ರಾಂತ್ಯದ ವರೆಗೂ ಓಡಿಹೋದರು.


ಆತನು ಸಮುದ್ರವನ್ನು ವಿಭಾಗಿಸಿ, ಅದರ ನೀರನ್ನು ರಾಶಿಯಾಗಿ ನಿಲ್ಲುವಂತೆ ಮಾಡಿ, ಅವರನ್ನು ದಾಟಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು