Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 3:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲಿ ಒಣನೆಲದ ಮೇಲೆ ನಿಂತಿದ್ದರು. ಅಷ್ಟರಲ್ಲಿ ಇಸ್ರಾಯೇಲ್ಯರೆಲ್ಲರೂ ಒಣನೆಲದ ಮೇಲೆ ನಡೆದು ಹೋದರು. ಈ ಪ್ರಕಾರ ಜನರೆಲ್ಲರೂ ಯೊರ್ದನಿನ ಆಚೆಗೆ ತಲುಪಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಜೋರ್ಡನಿನ ನಡುವೆ ನೆಲದ ಮೇಲೆ ನಿಂತಿದ್ದರು. ಅಷ್ಟರಲ್ಲಿ ಇಸ್ರಯೇಲರೆಲ್ಲರೂ ಒಣನೆಲದ ಮೇಲೆ ನಡೆದು ಹೋದರು. ಹೀಗೆ ಜನರೆಲ್ಲರೂ ಜೋರ್ಡನಿನ ಆಚೆಗೆ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲಿ ಒಣನೆಲದ ಮೇಲೆ ನಿಂತಿದ್ದರು. ಅಷ್ಟರಲ್ಲಿ ಇಸ್ರಾಯೇಲ್ಯರೆಲ್ಲರೂ ಒಣನೆಲದ ಮೇಲೆ ನಡೆದು ಹೋದರು. ಈ ಪ್ರಕಾರ ಜನರೆಲ್ಲಾ ಯೊರ್ದನಿನ ಆಚೆಗೆ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆ ಸ್ಥಳದಲ್ಲಿ ನೆಲವು ಒಣಗಿತ್ತು; ಯಾಜಕರು ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ನದಿಯ ಮಧ್ಯದವರೆಗೆ ತೆಗೆದುಕೊಂಡು ಹೋಗಿ ಅಲ್ಲಿ ನಿಂತುಕೊಂಡರು. ಯಾಜಕರು ಅಲ್ಲಿಯೇ ನಿಂತುಕೊಂಡಿರಲಾಗಿ ಎಲ್ಲಾ ಇಸ್ರೇಲರು ಒಣನೆಲದ ಮೇಲೆ ನಡೆದುಕೊಂಡು ಹೋಗಿ ಜೋರ್ಡನ್ ನದಿಯನ್ನು ದಾಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನ್ ನದಿಯ ಮಧ್ಯದಲ್ಲಿ ಒಣನೆಲದಲ್ಲಿ ದೃಢವಾಗಿ ನಿಂತಿದ್ದರು. ಅಷ್ಟರಲ್ಲಿ ಇಸ್ರಾಯೇಲರೆಲ್ಲರೂ ಒಣನೆಲದ ಮೇಲೆ ನಡೆದರು. ಹೀಗೆ ಇಡೀ ರಾಷ್ಟ್ರವು ಯೊರ್ದನ್ ನದಿ ಆಚೆ ಸೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 3:17
14 ತಿಳಿವುಗಳ ಹೋಲಿಕೆ  

ಇಸ್ರಾಯೇಲರಾದರೋ, ಸಮುದ್ರದೊಳಗೆ ಒಣನೆಲದಲ್ಲೇ ನಡೆದುಹೋದರು. ನೀರು ಅವರ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಂತೆ ನಿಂತಿತ್ತು.


ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲಿ ನಡೆದುಹೋದರು. ನೀರು ಅವರ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಂತೆ ನಿಂತುಕೊಂಡಿತು.


ಸಮುದ್ರವನ್ನು ಒಣನೆಲವಾಗುವಂತೆ ಮಾಡಿದನು; ಜನರು ನದಿಯ ಮಧ್ಯದಲ್ಲಿ ಕಾಲಿನಿಂದ ದಾಟಿದರು; ಅದಕ್ಕಾಗಿ ನಾವು ಆತನಲ್ಲಿ ಆನಂದಪಡೋಣ.


ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರೆಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ.


ಅನಂತರ ಎಲೀಯನು ತನ್ನ ಕಂಬಳಿಯನ್ನು ಮಡಚಿ ಅದರಿಂದ ನೀರನ್ನು ಹೊಡೆಯಲು ನೀರು ಎರಡು ಭಾಗವಾಯಿತು. ಇಬ್ಬರೂ ಒಣನೆಲದ ಮೇಲೆ ನಡೆದುಕೊಂಡು ಯೊರ್ದನನ್ನು ದಾಟಿದರು.


ಯೊರ್ದನಿನ ಮಧ್ಯದಲ್ಲಿ ಯಾಜಕರು ನಿಂತಿದ್ದ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ಎತ್ತಿ ಅವುಗಳನ್ನು ನಿಮ್ಮ ಸಂಗಡ ಈಚೇ ದಡಕ್ಕೆ ತಂದು ನೀವು ಈ ರಾತ್ರಿ ತಂಗುವ ಸ್ಥಳದಲ್ಲಿ ನಿಲ್ಲಿಸಿರಿ” ಎಂದು ಆಜ್ಞಾಪಿಸು ಎಂದನು.


ಇಸ್ರಾಯೇಲ್ಯರು ನಂಬಿಕೆಯಿಂದಲೇ ಕೆಂಪು ಸಮುದ್ರವನ್ನು ಒಣ ಭೂಮಿಯನ್ನು ದಾಟುವಂತೆ ದಾಟಿದರು. ಐಗುಪ್ತದೇಶದವರು ಅದನ್ನು ದಾಟುವುದಕ್ಕೆ ಪ್ರಯತ್ನಿಸಿದಾಗ ಮುಳುಗಿ ಹೋದರು.


ಮೋಶೆ ಸಮುದ್ರದ ಮೇಲೆ ಕೈಚಾಚಿದಾಗ, ಯೆಹೋವನು ಆ ರಾತ್ರಿಯೆಲ್ಲಾ ಮೂಡಣ ದಿಕ್ಕಿನಿಂದ ಬಲವಾದ ಬಿರುಗಾಳಿಯನ್ನು ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದು ಕಡೆಗೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದನು. ನೀರು ಇಬ್ಭಾಗವಾಯಿತು.


“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನೀವು ಯೊರ್ದನ್ ನದಿಯನ್ನು ದಾಟಿ ಕಾನಾನ್ ದೇಶವನ್ನು ಸೇರಿದಾಗ,


ಜನರೆಲ್ಲರು ಯೊರ್ದನಿನ ಆಚೆಗೆ ದಾಟಿದ ಮೇಲೆ ಯೆಹೋವನು ಯೆಹೋಶುವನಿಗೆ


‘ಇಸ್ರಾಯೇಲ್ಯರು ಒಣನೆಲವಾಗಿದ್ದ ಈ ಯೊರ್ದನನ್ನು ದಾಟಿ ಬಂದ್ದದರ ಗುರುತು’ ಎಂದು ಹೇಳಿರಿ.


ಮೋಶೆಯು ಆಜ್ಞಾಪಿಸಿದಂತೆ ಯೆಹೋಶುವನು ಜನರಿಗೆ ತಿಳಿಸಿದ ಯೆಹೋವನ ಅಪ್ಪಣೆಗಳನ್ನೆಲ್ಲಾ ಅವರು ನೆರವೇರಿಸುವ ತನಕ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲೇ ನಿಂತರು.


ಜನರು ಬೇಗನೆ ಹೊಳೆ ದಾಟಿದರು. ಅವರೆಲ್ಲರು ಆಚೆ ದಡ ಸೇರಿದ ಮೇಲೆ ಯಾಜಕರು ಯೆಹೋವನ ಮಂಜೂಷ ಸಹಿತವಾಗಿ ಹೊಳೆ ದಾಟಿ ಜನರ ಎದುರಿನಲ್ಲಿ ಹೋದರು.


ಯೊರ್ದನಿನ ಪಶ್ಚಿಮದಲ್ಲಿದ್ದ ಅಮೋರಿಯರ ಎಲ್ಲಾ ಅರಸರು ಮತ್ತು ಸಮುದ್ರದ ಬಳಿಯಲ್ಲಿದ್ದ ಎಲ್ಲಾ ಕಾನಾನ್ಯರ ರಾಜರು, ಯೆಹೋವನು ಇಸ್ರಾಯೇಲ್ಯರ ಮುಂದೆ ಯೊರ್ದನಿನ ಹೊಳೆಯನ್ನು ಬತ್ತಿಸಿ, ಅವರನ್ನು ದಾಟಿಸಿದನೆಂಬ ವಾರ್ತೆ ಕೇಳಲು ಅವರ ಎದೆಯೊಡೆದು ಹೋಯಿತು. ಇಸ್ರಾಯೇಲ್ಯರ ನಿಮಿತ್ತವಾಗಿ ಅವರು ಬಲಗುಂದಿ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು