Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 3:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇದಲ್ಲದೆ ಯೆಹೋಶುವನು ಜನರಿಗೆ “ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ; ಯೆಹೋವನು ನಾಳೆ ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ನಡಿಸುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇದಲ್ಲದೆ, ಯೆಹೋಶುವನು ಜನರಿಗೆ, “ಸರ್ವೇಶ್ವರ ನಾಳೆ ನಿಮ್ಮ ಮಧ್ಯೆ ಅದ್ಭುತಗಳನ್ನು ಮಾಡಲಿದ್ದಾರೆ. ಆದುದರಿಂದ ನಿಮ್ಮನ್ನೇ ಶುದ್ಧೀಕರಿಸಿಕೊಳ್ಳಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇದಲ್ಲದೆ ಯೆಹೋಶುವನು ಜನರಿಗೆ - ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ; ಯೆಹೋವನು ನಾಳೆ ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ನಡಿಸುವನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ನಿಮ್ಮನ್ನು ನೀವು ಶುದ್ಧೀಕರಿಸಿಕೊಳ್ಳಿರಿ. ನಾಳೆ ನಿಮ್ಮ ದೇವರಾದ ಯೆಹೋವನು ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ಮಾಡುತ್ತಾನೆ” ಎಂದು ಯೆಹೋಶುವನು ಜನರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋಶುವನು ಜನರಿಗೆ, “ಇಂದು ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ, ನಾಳೆ ಯೆಹೋವ ದೇವರು ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ಮಾಡುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 3:5
16 ತಿಳಿವುಗಳ ಹೋಲಿಕೆ  

ನೀನೆದ್ದು ಜನರನ್ನು ಶುದ್ಧೀಕರಿಸು. ನೀನು ಅವರಿಗೆ ‘ಇಸ್ರಾಯೇಲ್ಯರೇ, ನಾಳೆ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಿಮ್ಮ ಮಧ್ಯದಲ್ಲಿ ಶಾಪಕ್ಕೆ ಕಾರಣವಾದ ವಸ್ತುವಿದೆ. ನೀವು ಅದನ್ನು ತೆಗೆದುಹಾಕುವ ತನಕ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ನಿಮ್ಮ ದೇವರಾದ ಯೆಹೋವನು ಹೇಳಿದ್ದಾನೆ.


ನಾನು ನಿಮ್ಮ ದೇವರಾದ ಯೆಹೋವನಾಗಿರುವುದರಿಂದ ನೀವು ನನ್ನವರಾಗಿ ಪರಿಶುದ್ಧರಾಗಿರಬೇಕು.


ಜನರನ್ನು ಒಟ್ಟುಗೂಡಿಸಿರಿ, ಪವಿತ್ರ ಸಭೆಯನ್ನು ಏರ್ಪಡಿಸಿರಿ. ಹಿರಿಯರನ್ನು ಕೂಡಿಸಿರಿ, ಮಕ್ಕಳನ್ನು ಸೇರಿಸಿರಿ, ಮೊಲೆಕೂಸುಗಳನ್ನು ಸೇರಿಸಿರಿ. ಮದುಮಗನು ತನ್ನ ಕೊಠಡಿಯಿಂದ ಹೊರಟುಬರಲಿ, ವಧುವು ತನ್ನ ಕಲ್ಯಾಣಗೃಹದಿಂದ ಹೊರಟುಬರಲಿ.


ಅವನು, “ಹೌದು, ಶುಭಕರವಾಗಿದೆ; ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕೆ ಬಂದಿದ್ದೇನೆ. ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ನನ್ನ ಜೊತೆಯಲ್ಲಿ ಯಜ್ಞಕ್ಕೆ ಬನ್ನಿರಿ” ಎಂದು ಹೇಳಿ ಇಷಯನನ್ನೂ, ಅವನ ಮಕ್ಕಳನ್ನೂ ಶುದ್ಧೀಕರಿಸಿ ಅವರನ್ನೂ ಯಜ್ಞಕ್ಕೆ ಕರೆದನು.


ಇವರು ನಿಜವಾಗಿ ಪ್ರತಿಷ್ಠಿರಾಗಬೇಕೆಂದು, ನನ್ನನ್ನು ನಾನೇ ಇವರಿಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ.


ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನೆಂದರೆ, ‘ನಾನು ಪರಿಶುದ್ಧನೆಂಬುದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬುದೇ’” ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.


ಮಹೋನ್ನತನು, ಮಹತ್ಕಾರ್ಯಗಳನ್ನು ನಡೆಸುವವನು ನೀನು; ನೀನೊಬ್ಬನೇ ದೇವರು.


ಔತಣದ ಸರದಿ ತೀರಿದ ನಂತರ ಯೋಬನು, “ನನ್ನ ಮಕ್ಕಳು ಒಂದು ವೇಳೆ ಹೃದಯದಲ್ಲಿ ದೇವರನ್ನು ದೂಷಿಸಿ ಪಾಪ ಮಾಡಿರಬಹುದು” ಎಂದು ಅವರನ್ನು ಕರೆಯಿಸಿ ಶುದ್ಧಿಪಡಿಸಿ, ಬೆಳಿಗ್ಗೆ ಎದ್ದು ಅವರ ಸಂಖ್ಯೆಗೆ ತಕ್ಕಂತೆ ಹೋಮಗಳನ್ನು ಅರ್ಪಿಸುತ್ತಿದ್ದನು. ಹೀಗೆ ಯೋಬನು ಕ್ರಮವಾಗಿ ಮಾಡುವುದು ದೈನಂದಿನ ಕ್ರಮವಾಗಿತ್ತು.


ಸರ್ವಲೋಕದ ಒಡೆಯನಾದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ತಮ್ಮ ಕಾಲುಗಳನ್ನು ಯೊರ್ದನ್ ನದಿಯ ನೀರಲ್ಲಿ ಇಡುತ್ತಲೇ ಮೇಲಿನಿಂದ ಹರಿದು ಬರುವ ನೀರು ಮುಂದೆ ಸಾಗದೆ, ಅಲ್ಲೇ ರಾಶಿಯಾಗಿ ನಿಂತುಕೊಳ್ಳುವುದು” ಎಂದು ತಿಳಿಸಿದನು.


ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು, ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಸುಗ್ಗೀ ಕಾಲದಲ್ಲೆಲ್ಲಾ ದಡಮೀರಿ ಹರಿಯುತ್ತಿದ್ದ ಯೊರ್ದನ್ ನದಿಯ ನೀರು ನಿಂತುಹೋಯಿತು.


ಜನರು ತಿರುಗಾಡುತ್ತಾ ಅದನ್ನು ಕೂಡಿಸಿಕೊಂಡು ಬೀಸುವ ಕಲ್ಲುಗಳಿಂದ ಬೀಸಿ, ಇಲ್ಲವೆ ಒರಳಿನಲ್ಲಿ ಕುಟ್ಟಿ ಪಾತ್ರೆಗಳಲ್ಲಿ ಬೇಯಿಸಿ ರೊಟ್ಟಿಗಳನ್ನು ಮಾಡಿಕೊಂಡರು. ಅದರ ರುಚಿ ಎಣ್ಣೆ ಬೆರಸಿ ಮಾಡಿದ ಭಕ್ಷ್ಯಗಳಂತಿತ್ತು.


ಆದರೆ ನಿಮಗೂ ಮಂಜೂಷಕ್ಕೂ ಸುಮಾರು ಎರಡು ಸಾವಿರ ಮೊಳ ಅಂತರವಿರಬೇಕು; ಹತ್ತಿರ ಹೋಗಬಾರದು. ಹೀಗೆ ನೀವು ಹೋಗಬೇಕಾದ ಮಾರ್ಗವು ನಿಮಗೆ ಗೊತ್ತಾಗುವುದು; ಏಕೆಂದರೆ ನೀವು ಆ ಮಾರ್ಗವಾಗಿ ಇಲ್ಲಿಯವರೆಗೆ ಪ್ರಯಾಣ ಮಾಡಿರುವುದಿಲ್ಲ” ಅಂದರು.


ನಂತರ ಯೆಹೋಶುವನು ಯಾಜಕರಿಗೆ “ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ನಡೆದು ಹೊಳೆ ದಾಟಿರಿ” ಎಂದು ಆಜ್ಞಾಪಿಸಲು ಅವರು ಆ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ಹೋದರು.


ಯಾಕೋಬ ಮತ್ತು ಯೋಸೇಫರ ವಂಶದವರಾದ ನಿನ್ನ ಪ್ರಜೆಯನ್ನು, ಭುಜಬಲದಿಂದ ಬಿಡುಗಡೆಮಾಡಿದಿ. ಸೆಲಾ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು