ಯೆಹೋಶುವ 4:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಮೋಶೆಯು ಆಜ್ಞಾಪಿಸಿದಂತೆ ಯೆಹೋಶುವನು ಜನರಿಗೆ ತಿಳಿಸಿದ ಯೆಹೋವನ ಅಪ್ಪಣೆಗಳನ್ನೆಲ್ಲಾ ಅವರು ನೆರವೇರಿಸುವ ತನಕ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲೇ ನಿಂತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಮೋಶೆ ಆಜ್ಞಾಪಿಸಿದಂತೆ ಯೆಹೋಶುವನು ಜನರಿಗೆ ತಿಳಿಸಿದ ಸರ್ವೇಶ್ವರನ ಅಪ್ಪಣೆಗಳನ್ನೆಲ್ಲ ಅವರು ನೆರವೇರಿಸುವ ತನಕ ಮಂಜೂಷವನ್ನು ಹೊತ್ತ ಯಾಜಕರು ಜೋರ್ಡನಿನ ಮಧ್ಯದಲ್ಲೇ ನಿಂತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಮೋಶೆಯು ಆಜ್ಞಾಪಿಸಿದಂತೆ ಯೆಹೋಶುವನು ಜನರಿಗೆ ತಿಳಿಸಿದ ಯೆಹೋವನ ಅಪ್ಪಣೆಗಳನ್ನೆಲ್ಲಾ ಅವರು ನೆರವೇರಿಸುವವರೆಗೂ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲೇ ನಿಂತರು. ಜನರು ಬೇಗನೆ ಹೊಳೆದಾಟಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಮೋಶೆಯು ಆಜ್ಞಾಪಿಸಿದಂತೆ ಯೆಹೋಶುವನು ಜನರಿಗೆ ತಿಳಿಸಿದ. ಯೆಹೋವನ ಅಪ್ಪಣೆಗಳನ್ನೆಲ್ಲ ಅವರು ಕೈಗೊಳ್ಳುವವರೆಗೆ ಪವಿತ್ರ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುತ್ತಿದ್ದ ಯಾಜಕರು ನದಿಯ ಮಧ್ಯದಲ್ಲಿ ನಿಂತುಕೊಂಡೇ ಇದ್ದರು. ಜನರು ತ್ವರಿತಗತಿಯಿಂದ ನದಿಯನ್ನು ದಾಟಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಮೋಶೆಯು ಯೆಹೋಶುವನಿಗೆ ಆಜ್ಞಾಪಿಸಿದ ಪ್ರಕಾರ, ಯೆಹೋವ ದೇವರು ಆಜ್ಞಾಪಿಸಿದ್ದೆಲ್ಲಾ ನೆರವೇರಿಸುವ ತನಕ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನ್ ನದಿ ನಡುವೆಯೇ ನಿಂತರು. ಜನರು ತ್ವರೆಯಾಗಿ ಆಚೆಗೆ ದಾಟಿಹೋದರು. ಅಧ್ಯಾಯವನ್ನು ನೋಡಿ |