Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 4:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸುಮಾರು ನಲವತ್ತು ಸಾವಿರ ಭಟರು ಯುದ್ಧಮಾಡುವುದಕ್ಕಾಗಿ ಯೆಹೋವನ ಸಮ್ಮುಖದಲ್ಲಿ ಯೆರಿಕೋವಿನ ಬೈಲಿಗೆ ಬಂದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸುಮಾರು ನಾಲ್ವತ್ತು ಸಾವಿರ ಯೋಧರಿಂದ ಕೂಡಿದ ಅವರು ಸರ್ವೇಶ್ವರನ ಸಮ್ಮುಖದಲ್ಲಿ ನದಿ ದಾಟಿ ಯುದ್ಧ ಮಾಡುವುದಕ್ಕಾಗಿ ಜೆರಿಕೋವಿನ ಬಯಲಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವರು ಸುಮಾರು ನಾಲ್ವತ್ತು ಸಾವಿರ ಭಟರಾಗಿದ್ದು ಯುದ್ಧಮಾಡುವದಕ್ಕಾಗಿ ಯೆಹೋವನ ಮುಂದೆ ಯೆರಿಕೋವಿನ ಬೈಲಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯುದ್ಧಸನ್ನದ್ಧರಾದ ಸುಮಾರು ನಲವತ್ತು ಸಾವಿರ ಭಟರು ಯೆಹೋವನ ಮುಂದೆ ಜೆರಿಕೊವಿನ ಬಯಲಿನ ಕಡೆಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಹೆಚ್ಚು ಕಡಿಮೆ ನಾಲ್ವತ್ತು ಸಾವಿರ ಜನರು ಯುದ್ಧಕ್ಕೆ ಸಿದ್ಧರಾಗಿ ಯೆಹೋವ ದೇವರ ಮುಂದೆ ಯುದ್ಧಮಾಡುವುದಕ್ಕೆ ಯೆರಿಕೋವಿನ ಬಯಲುಗಳಿಗೆ ಹಾದುಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 4:13
11 ತಿಳಿವುಗಳ ಹೋಲಿಕೆ  

ಸೈತಾನನ ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.


ಕಸ್ದೀಯರ ಸೈನ್ಯದವರು ಅರಸನಾದ ಚಿದ್ಕೀಯನನ್ನು ಹಿಂದಟ್ಟಿ ಅವನನ್ನು ಯೆರಿಕೋವಿನ ಬಯಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದುರಿ ಹೋಗಿದ್ದರು.


ಕಸ್ದೀಯರ ಸೈನಿಕರು ಅವರನ್ನು ಹಿಂದಟ್ಟುತ್ತಾ ಯೆರಿಕೋವಿನ ಬಯಲಿನಲ್ಲಿ ಚಿದ್ಕೀಯನನ್ನು ಹಿಡಿದು ಹಮಾತ್ ಸೀಮೆಯ ರಿಬ್ಲದಲ್ಲಿದ್ದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಬಂದರು.


ಕಸ್ದೀಯರ ಸೈನ್ಯದವರು ಅರಸನಾದ ಚಿದ್ಕೀಯನನ್ನು ಹಿಂದಟ್ಟಿ ಯೆರಿಕೋವಿನ ಬಯಲಿನಲ್ಲಿ ಅವನನ್ನು ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದರಿ ಹೋಗಿದ್ದರು.


ಇಸ್ರಾಯೇಲ್ಯರು ಗಿಲ್ಗಾಲಿನಲ್ಲಿ ತಂಗಿದ್ದಾಗ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ಯೆರಿಕೋವಿನ ಬೈಲಿನಲ್ಲಿ ಪಸ್ಕಹಬ್ಬವನ್ನು ಆಚರಿಸಿದರು.


ಹೀಗಿರುವುದರಿಂದ ಯೆಹೋವನು ಜನರನ್ನು ಕೆಂಪುಸಮುದ್ರದ ಸಮೀಪದಲ್ಲಿರುವ ಮರುಭೂಮಿಯನ್ನು ಬಳಸಿಕೊಂಡು ಹೋಗುವಂತೆ ಮಾಡಿದನು. ಆದರೂ ಇಸ್ರಾಯೇಲರು ಯುದ್ಧಸನ್ನದ್ದರಾಗಿ ಐಗುಪ್ತ ದೇಶದೊಳಗಿಂದ ಹೊರಟುಬಂದರು.


ನಾವಾದರೋ ಇಸ್ರಾಯೇಲರನ್ನು ಅವರವರ ಸ್ಥಳಗಳಿಗೆ ಸೇರಿಸುವವರೆಗೂ ಯುದ್ಧಕ್ಕೆ ಸನ್ನದ್ಧರಾಗಿ ಅವರ ಮುಂದೆ ನಡೆಯುವೆವು. ಅಷ್ಟರಲ್ಲಿ ನಮ್ಮ ಕುಟುಂಬಗಳವರು ಈ ದೇಶದ ನಿವಾಸಿಗಳ ಭಯದ ದೆಸೆಯಿಂದ ಕೋಟೆಕೋತ್ತಲುಗಳುಳ್ಳ ಊರುಗಳಲ್ಲಿ ವಾಸಿಸಲಿ.


ಆ ಕಾಲದಲ್ಲಿ ನಾನು ನಿಮಗೆ, “ನಿಮ್ಮ ದೇವರಾದ ಯೆಹೋವನು ಈ ಪ್ರದೇಶವನ್ನೇ ನಿಮಗೆ ಸ್ವತ್ತಾಗಿ ಕೊಟ್ಟಿದ್ದಾನೆ. ಆದರೆ ನಿಮ್ಮ ಸೈನಿಕರೆಲ್ಲರೂ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಾದ ಇಸ್ರಾಯೇಲರ ಮುಂದೆ ಹೊರಟು ಹೊಳೆ ದಾಟಿ ಹೋಗಬೇಕು.


ರೂಬೇನ್ಯರೂ, ಗಾದ್ಯರೂ, ಮನಸ್ಸೆ ಕುಲದ ಅರ್ಧ ಗೋತ್ರದವರೂ ಮೋಶೆಯು ತಮಗೆ ಆಜ್ಞಾಪಿಸಿದಂತೆ ಯುದ್ಧಸನ್ನದ್ದರಾಗಿ ಇಸ್ರಾಯೇಲ್ಯರ ಮುಂದಾಗಿ ಹೊರಟು ಹೊಳೆದಾಟಿದರು.


ಆ ದಿನದಲ್ಲಿ ಯೆಹೋವನು ಯೆಹೋಶುವನನ್ನು ಎಲ್ಲಾ ಇಸ್ರಾಯೇಲ್ಯರ ಮುಂದೆ ಘನಪಡಿಸಿದನು. ಅವರು ಮೋಶೆಗೆ ಹೇಗೆ ನಡೆದುಕೊಂಡರೋ ಹಾಗೆಯೇ ಯೆಹೋಶುವನು ಭಯ ಮತ್ತು ಗೌರವದಿಂದ ನಡೆದುಕೊಂಡರು.


ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ, ಗಿಲ್ಯಾದಿನಲ್ಲಿಯೂ ಇರುವ ಇಸ್ರಾಯೇಲರೆಲ್ಲರೂ ಏಕಮನಸ್ಸಿನಿಂದ ಹೊರಟು ಮಿಚ್ಪೆಗೆ ಬಂದು ಯೆಹೋವನ ಸನ್ನಿಧಿಯಲ್ಲಿ ಸಭೆ ಸೇರಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು