Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 4:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಯೊರ್ದನನ್ನು ದಾಟಿ ಬಂದು ಯೆರಿಕೋವಿನ ಪೂರ್ವ ಗಡಿಯಲ್ಲಿರುವ ಗಿಲ್ಗಾಲಿನಲ್ಲಿ ಬಂದು ತಂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಜನರು ಮೊದಲನೇ ತಿಂಗಳಿನ ಹತ್ತನೆಯ ದಿನ ಜೋರ್ಡನನ್ನು ದಾಟಿ ಜೆರಿಕೋವಿನ ಪೂರ್ವಗಡಿಯಲ್ಲಿರುವ ಗಿಲ್ಗಾಲೆಂಬಲ್ಲಿಗೆ ಬಂದು ತಂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಯೊರ್ದನನ್ನು ದಾಟಿ ಯೆರಿಕೋವಿನ ಪೂರ್ವ ಪ್ರಾಂತದಲ್ಲಿರುವ ಗಿಲ್ಗಾಲೆಂಬಲ್ಲಿ ಇಳುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅವರು ಜೋರ್ಡನ್ ನದಿಯನ್ನು ಮೊದಲನೆಯ ತಿಂಗಳಿನ ಹತ್ತನೆಯ ದಿನ ದಾಟಿದರು. ಅವರು ಜೆರಿಕೊವಿನ ಪೂರ್ವಕ್ಕಿರುವ ಗಿಲ್ಗಾಲಿನಲ್ಲಿ ಇಳಿದುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಯೊರ್ದನಿನಿಂದ ಹೊರಟು, ಯೆರಿಕೋವಿನ ಪೂರ್ವದಿಕ್ಕಿನ ಮೇರೆಯಾದ ಗಿಲ್ಗಾಲಿನಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 4:19
18 ತಿಳಿವುಗಳ ಹೋಲಿಕೆ  

ಯೆಹೋವನು ಯೆಹೋಶುವನಿಗೆ, “ನಾನು ಐಗುಪ್ತ್ಯರ ನಿಂದೆಯನ್ನು ಈ ಹೊತ್ತು ನಿಮ್ಮಿಂದ ನಿವಾರಿಸಿ ಬಿಟ್ಟಿದ್ದೇನೆ” ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ ಇಂದಿನವರೆಗೂ ಗಿಲ್ಗಾಲ್ ಎಂಬ ಹೆಸರಿರುತ್ತದೆ.


ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನೂ ಮತ್ತು ಬೆಯೋರನ ಮಗನಾದ ಬಿಳಾಮನು ಹೇಳಿದ ಉತ್ತರವನ್ನೂ ಜ್ಞಾಪಕಮಾಡಿಕೊಳ್ಳಿರಿ. ಯೆಹೋವನ ಧರ್ಮಕಾರ್ಯಗಳು ನಿಮ್ಮ ಗ್ರಹಿಕೆಗೆ ಬರುವ ಹಾಗೆ ನೀವು ಶಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದದ್ದನ್ನೆಲ್ಲಾ ಸ್ಮರಿಸಿಕೊಳ್ಳಿರಿ.


ಬೇತೇಲನ್ನು ಆಶ್ರಯಿಸಬೇಡಿರಿ; ಗಿಲ್ಗಾಲನ್ನು ಸೇರಬೇಡಿರಿ; ಬೇರ್ಷೆಬಕ್ಕೆ ಯಾತ್ರೆ ಹೋಗಬೇಡಿರಿ. ಗಿಲ್ಗಾಲು ನಿಶ್ಚಯವಾಗಿ ಸೆರೆಗೆ ಹೋಗುವುದು. ಬೇತೇಲು ಬಯಲಾಗುವುದು.


“ಬೇತೇಲಿಗೆ ಹೋಗಿ ದ್ರೋಹ ಮಾಡಿರಿ, ಗಿಲ್ಗಾಲಿನಲ್ಲಿ ಸೇರಿ ದ್ರೋಹವನ್ನು ಇನ್ನೂ ಹೆಚ್ಚಿಸಿರಿ. ಪ್ರತಿದಿನ ಬೆಳಿಗ್ಗೆ ನಿಮ್ಮ ಬಲಿಗಳನ್ನು ಅರ್ಪಿಸಿರಿ, ಮೂರು ದಿನಕ್ಕೆ ಒಂದು ಸಲ ದಶಮಾಂಶವನ್ನು ಸಲ್ಲಿಸಿರಿ.


ಆದರೆ ಸಮುವೇಲನು ಅವನಿಗೆ, “ನಿನ್ನ ಕತ್ತಿಯು ಅನೇಕ ಸ್ತ್ರೀಯರಿಗೆ ಪುತ್ರಶೋಕವನ್ನುಂಟುಮಾಡಿದೆ; ಅದರಂತೆ ನಿನ್ನ ತಾಯಿಯು ಎಲ್ಲರಿಗಿಂತಲೂ ಹೆಚ್ಚಾಗಿ ಪುತ್ರಶೋಕವನ್ನು ಅನುಭವಿಸಲಿ” ಎಂದು ಹೇಳಿ ಅವನನ್ನು ಗಿಲ್ಗಾಲಿನಲ್ಲಿ ಯೆಹೋವನ ಸನ್ನಿಧಿಯಲ್ಲೇ ಕಡಿದುಹಾಕಿದನು.


ಆಕೋರಿನ ಕಣಿವೆ ಇವುಗಳ ಮೇಲೆ ದೆಬೇರಿಗೆ ಹೋಗುತ್ತದೆ. ಅದು ಅಲ್ಲಿಂದ ಉತ್ತರಕ್ಕೆ ತಿರುಗಿಕೊಂಡು ಹಳ್ಳದ ದಕ್ಷಿಣದಲ್ಲಿರುವ ಅದುಮೀಮಿಗೆ ಹೋಗುವ ದಾರಿಯ ಎದುರಿನಲ್ಲಿರುವ ಗಿಲ್ಗಾಲ್ ಏನ್ ಷೆಮೆಷ್ ಅನ್ನಿಸಿಕೊಳ್ಳುವ ಬುಗ್ಗೆ ಏನ್ ರೋಗೆಲ್ ಇವುಗಳ ಮೇಲೆ


ತರುವಾಯ ಯೆಹೋಶುವನು ಎಲ್ಲಾ ಇಸ್ರಾಯೇಲ್ಯರೊಡನೆ ಗಿಲ್ಗಾಲಿನಲ್ಲಿದ್ದ ತನ್ನ ಪಾಳೆಯಕ್ಕೆ ಹಿಂದಿರುಗಿದನು.


ಗಿಬ್ಯೋನ್ಯರು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ದೂತರನ್ನು ಕಳುಹಿಸಿದರು. “ನಿಮ್ಮ ಸೇವಕರಾದ ನಮ್ಮನ್ನು ಕೈಬಿಡದೆ, ಬೇಗನೆ ಬಂದು ಸಹಾಯಮಾಡಿ ನಮಗೆ ವಿರೋಧವಾಗಿ ಸೇರಿ ಬಂದಿರುವ ಈ ಬೆಟ್ಟದ ಸೀಮೆಯ ಎಲ್ಲಾ ಅಮೋರಿಯ ರಾಜರಿಂದ ನಮ್ಮನ್ನು ತಪ್ಪಿಸಿರಿ” ಎಂದು ಬೇಡಿಕೊಂಡರು.


ಇಸ್ರಾಯೇಲರು ಐಗುಪ್ತದೇಶವನ್ನು ಬಿಟ್ಟ ನಲ್ವತ್ತನೆಯ ವರ್ಷದ, ಹನ್ನೊಂದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮೋಶೆಯು ಇಸ್ರಾಯೇಲರಿಗೆ ತಿಳಿಸಿದನು.


ಆ ಬೆಟ್ಟಗಳು ಯೊರ್ದನ್ ನದಿಯ ಆಚೆ, ಪಡುವಣ ದಾರಿಯ ಪಶ್ಚಿಮದಲ್ಲಿ ಕಾನಾನ್ಯರು ವಾಸಿಸುವ ಅರಾಬಾ ಪ್ರದೇಶದಲ್ಲಿ, ಗಿಲ್ಗಾಲಿಗೆ ಎದುರಾಗಿ ಮೋರೆ ಎಂಬ ವೃಕ್ಷದ ಬಳಿಯಲ್ಲಿ ಇವೆ.


ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನಿಂದ ಮೇಲೆ ಬಂದು ಒಣನೆಲದಲ್ಲಿ ತಮ್ಮ ಕಾಲುಗಳನ್ನಿಟ್ಟ ಕೂಡಲೇ ನೀರು ಮೊದಲಿನಂತೆ ಬಂದು, ಯೊರ್ದನ್ ನದಿಯು ದಡಮೀರಿ ಹರಿಯಿತು.


ಇಸ್ರಾಯೇಲ್ಯರು ಗಿಲ್ಗಾಲಿನಲ್ಲಿ ತಂಗಿದ್ದಾಗ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ಯೆರಿಕೋವಿನ ಬೈಲಿನಲ್ಲಿ ಪಸ್ಕಹಬ್ಬವನ್ನು ಆಚರಿಸಿದರು.


ಯೆಹೋವನು ಎಲೀಯನನ್ನು ಸುಂಟರಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಸೇರಿಸಿಕೊಳ್ಳುವ ಸಮಯ ಬಂದಾಗ ಎಲೀಯನು ಎಲೀಷನೊಡನೆ ಗಿಲ್ಗಾಲನ್ನು ಬಿಟ್ಟು ಹೊರಟನು.


ತಾವು ರಾಯಭಾರಿಗಳೆಂದು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಬಂದರು. ಅವನಿಗೂ ಇಸ್ರಾಯೇಲ್ಯರಿಗೂ “ನಾವು ದೂರದೇಶದಿಂದ ಬಂದವರು. ನೀವು ನಮ್ಮ ಸಂಗಡ ಒಂದು ಒಪ್ಪಂದ ಮಾಡಿಕೊಳ್ಳಬೇಕು” ಎಂದು ಕೇಳಿ ಕೊಂಡರು.


ನೀವು ಯೊರ್ದನನ್ನು ದಾಟಿ ಯೆರಿಕೋವಿಗೆ ಬಂದಿರಿ. ಆಗ ಯೆರಿಕೋವಿನವರು ಅಮೋರಿಯರು, ಪೆರಿಜ್ಜೀಯರು, ಕಾನಾನ್ಯರು, ಹಿತ್ತಿಯರು, ಗಿರ್ಗಾಷಿಯರು, ಹಿವ್ವಿಯರು, ಯೆಬೂಸಿಯರು ಇವರೆಲ್ಲಾ ನಿಮಗೆ ವಿರೋಧವಾಗಿ ಯುದ್ಧಕ್ಕೆ ಬರಲು ನಾನು ಅವರೆಲ್ಲರನ್ನು ನಿಮ್ಮ ಕೈಗೆ ಒಪ್ಪಿಸಿದೆನು.


ನೀನು ಮುಂದಾಗಿ ಗಿಲ್ಗಾಲಿಗೆ ಹೋಗು; ಏಳು ದಿನಗಳಾದ ನಂತರ ನಾನು ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುವುದಕ್ಕೋಸ್ಕರ ಅಲ್ಲಿಗೆ ಬಂದು ನೀನು ಮಾಡಬೇಕಾದದ್ದನ್ನು ನಿನಗೆ ತಿಳಿಸುವೆನು; ಅಲ್ಲಿಯ ವರೆಗೆ ಕಾದುಕೊಂಡಿರು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು