ಯೆಹೋಶುವ 4:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನಿಮ್ಮ ದೇವರಾದ ಯೆಹೋವನು ನಮ್ಮ ಕಣ್ಣು ಮುಂದೆ ಕೆಂಪುಸಮುದ್ರವನ್ನು ಬತ್ತಿಸಿ, ನಮ್ಮನ್ನು ದಾಟಿಸಿದಂತೆ ಈಗ ನಿಮ್ಮ ಕಣ್ಣು ಮುಂದೆಯೇ ಈ ಯೊರ್ದನನ್ನು ಬತ್ತಿಸಿ, ನಿಮ್ಮನ್ನು ದಾಟಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನಿಮ್ಮ ದೇವರಾದ ಸರ್ವೇಶ್ವರ ನಮ್ಮ ಕಣ್ಮುಂದೆ ಕೆಂಪುಸಮುದ್ರವನ್ನು ಬತ್ತಿಸಿ, ನಮ್ಮನ್ನು ದಾಟಿಸಿದಂತೆ ಈಗ ನಿಮ್ಮ ಕಣ್ಮುಂದೆಯೇ ಈ ಜೋರ್ಡನನ್ನು ಬತ್ತಿಸಿ, ನಿಮ್ಮನ್ನು ದಾಟಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನಿಮ್ಮ ದೇವರಾದ ಯೆಹೋವನು ನಮ್ಮ ಮುಂದೆ ಕೆಂಪು ಸಮುದ್ರವನ್ನು ಬತ್ತಿಸಿ ನಮ್ಮನ್ನು ದಾಟಿಸಿದಂತೆ ಈಗ ನಿಮ್ಮ ಮುಂದೆ ಈ ಯೊರ್ದನನ್ನು ಬತ್ತಿಸಿ ನಿಮ್ಮನ್ನು ದಾಟಿಸಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನಿಮ್ಮ ದೇವರಾದ ಯೆಹೋವನು ಜೋರ್ಡನ್ ನದಿಯ ನೀರಿನ ಚಲನೆಯನ್ನು ನಿಲ್ಲಿಸಿದನು. ಕೆಂಪುಸಮುದ್ರದ ಹಾಗೆ ಈ ನದಿಯೂ ಸಹ ಜನರೆಲ್ಲರೂ ದಾಟುವವರೆಗೆ ಬತ್ತಿಹೋಗಿತ್ತು. ಜನರು ದಾಟಲು ಸಾಧ್ಯವಾಗುವಂತೆ ಕೆಂಪುಸಮುದ್ರದ ನೀರಿನ ಚಲನೆಯನ್ನು ಸಹ ಯೆಹೋವನು ತಡೆದಿದ್ದನೆಂಬುದನ್ನು ಸ್ಮರಿಸಿಕೊಳ್ಳಿ ಎಂದು ನೀವು ಮಕ್ಕಳಿಗೆ ಹೇಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನೀವು ಯೊರ್ದನ್ ನದಿ ನೀರನ್ನು ದಾಟಿ ಬರುವವರೆಗೂ, ನಿಮ್ಮ ದೇವರಾದ ಯೆಹೋವ ದೇವರು ಆ ನದಿಯ ನೀರನ್ನು ಒಣಗಿ ಹೋಗುವಂತೆ ಮಾಡಿದರು. ಕೆಂಪು ಸಮುದ್ರವನ್ನು ನಾವು ದಾಟುವವರೆಗೂ ನಮ್ಮ ಮುಂದೆ ಬತ್ತಿಸಿದಂತೆ, ಯೊರ್ದನ್ ನದಿ ನೀರನ್ನೂ ಬತ್ತಿಸಿದರು. ಅಧ್ಯಾಯವನ್ನು ನೋಡಿ |