ಯೆಹೋಶುವ 4:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನೀವು ಅವರಿಗೆ ಯೆಹೋವನ ಒಡಂಬಡಿಕೆಯ ಮಂಜೂಷವು ಯೊರ್ದನ್ ನದಿ ದಾಟುವಾಗ ಅದರ ಮುಂದೆ ಯೊರ್ದನಿನ ನೀರು ನಿಂತುಹೋಯಿತೆಂದು ಹೇಳಿರಿ. ಯೊರ್ದನಿನ ನೀರು ನಿಂತು ಹೋಯಿತೆಂಬುದಕ್ಕೆ ಈ ಕಲ್ಲುಗಳು ಇಸ್ರಾಯೇಲ್ಯರಿಗೆ ಸದಾಕಾಲಕ್ಕೂ ಸಾಕ್ಷಿಗಳಾಗಿರುವವು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ‘ಸರ್ವೇಶ್ವರನ ಒಡಂಬಡಿಕೆಯ ಮಂಜೂಷವು ಜೋರ್ಡನನ್ನು ದಾಟುವಾಗ ಅದರ ಮುಂದೆ ಜೋರ್ಡನಿನ ನೀರು ನಿಂತುಹೋಯಿತು,’ ಎಂದು ಹೇಳಿರಿ. ಅದರ ನೀರು ನಿಂತುಹೋಯಿತೆಂಬುದಕ್ಕೆ ಈ ಕಲ್ಲುಗಳು ಇಸ್ರಯೇಲರಿಗೆ ಚಿರಸ್ಮಾರಕಗಳಾಗಿರುವುವು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನೀವು ಅವರಿಗೆ - ಯೆಹೋವನ ಒಡಂಬಡಿಕೆಯ ಮಂಜೂಷವು ಯೊರ್ದನನ್ನು ದಾಟುವಾಗ ಅದರ ಮುಂದೆ ಯೊರ್ದನಿನ ನೀರು ನಿಂತುಹೋಯಿತೆಂದು ಹೇಳಿರಿ. ಯೊರ್ದನಿನ ನೀರು ನಿಂತುಹೋಯಿತೆಂಬದಕ್ಕೆ ಈ ಕಲ್ಲುಗಳು ಇಸ್ರಾಯೇಲ್ಯರಿಗೆ ಸದಾಕಾಲವೂ ಸಾಕ್ಷಿಗಳಾಗಿರುವವು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅದಕ್ಕೆ ನೀವು, ‘ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯು ಜೋರ್ಡನ್ ನದಿಯನ್ನು ದಾಟುತ್ತಿರುವಾಗ ಹರಿಯುವ ನೀರು ನಿಂತುಹೋಯಿತು’ ಎಂದು ಹೇಳಿರಿ. ಆ ಕಲ್ಲುಗಳು ಇಸ್ರೇಲರಿಗೆ ಸದಾಕಾಲ ಸಾಕ್ಷಿಗಳಾಗಿರುತ್ತವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನೀವು ಅವರಿಗೆ, ‘ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ಯೊರ್ದನ್ ನದಿಯ ನೀರು ವಿಭಾಗವಾಯಿತು. ಒಡಂಬಡಿಕೆಯ ಮಂಜೂಷವು ಯೊರ್ದನ್ ನದಿಯನ್ನು ದಾಟುವಾಗ, ಯೊರ್ದನ್ ನದಿಯ ನೀರು ನಿಂತುಹೋಯಿತು. ಈ ಕಲ್ಲುಗಳು ಇಸ್ರಾಯೇಲರಿಗೆ ಎಂದೆಂದಿಗೂ ಜ್ಞಾಪಕಾರ್ಥವಾದ ಗುರುತು,’ ಎಂದು ಉತ್ತರಕೊಡಬೇಕು,” ಎಂದನು. ಅಧ್ಯಾಯವನ್ನು ನೋಡಿ |