Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 4:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇಸ್ರಾಯೇಲ್ಯರು ಯೆಹೋಶುವನು ಆಜ್ಞಾಪಿಸಿದಂತೆಯೇ ಮಾಡಿದರು. ಯೆಹೋವನು ಯೆಹೋಶುವನಿಗೆ ಹೇಳಿದ ಪ್ರಕಾರ ಅವರು ಇಸ್ರಾಯೇಲ್ಯರ ಕುಲಸಂಖ್ಯೆಗೆ ಅನುಸಾರವಾಗಿ ಯೊರ್ದನಿನ ಮಧ್ಯದಿಂದ ಹನ್ನೆರಡು ಕಲ್ಲುಗಳನ್ನು ಎತ್ತಿ ತಾವು ಇಳುಕೊಳ್ಳುವ ಸ್ಥಳಕ್ಕೆ ತಂದು ಅಲ್ಲಿ ಅವುಗಳನ್ನು ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇಸ್ರಯೇಲರು ಯೆಹೋಶುವನು ಆಜ್ಞಾಪಿಸಿದಂತೆಯೇ ಮಾಡಿದರು. ಸರ್ವೇಶ್ವರಸ್ವಾಮಿ ಯೆಹೋಶುವನಿಗೆ ಹೇಳಿದ ಪ್ರಕಾರ ಅವರು ಇಸ್ರಯೇಲರ ಸಂಖ್ಯೆಗೆ ಅನುಸಾರವಾಗಿ ಜೋರ್ಡನಿನ ಮಧ್ಯದಿಂದ ಹನ್ನೆರಡು ಕಲ್ಲುಗಳನ್ನು ಎತ್ತಿ ತಮ್ಮ ಬಿಡಾರದ ಸ್ಥಳಕ್ಕೆ ತಂದು ಅಲ್ಲಿ ಅವುಗಳನ್ನು ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇಸ್ರಾಯೇಲ್ಯರು ಯೆಹೋಶುವನು ಆಜ್ಞಾಪಿಸಿದಂತೆಯೇ ಮಾಡಿದರು. ಯೆಹೋವನು ಯೆಹೋಶುವನಿಗೆ ಹೇಳಿದ ಪ್ರಕಾರ ಅವರು ಇಸ್ರಾಯೇಲ್ಯರ ಕುಲಸಂಖ್ಯೆಗನುಸಾರವಾಗಿ ಯೊರ್ದನಿನ ಮಧ್ಯದಿಂದ ಹನ್ನೆರಡು ಕಲ್ಲುಗಳನ್ನು ಎತ್ತಿ ತಾವು ಇಳುಕೊಳ್ಳುವ ಸ್ಥಳಕ್ಕೆ ತಂದು ಅಲ್ಲಿ ಅವುಗಳನ್ನು ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಇಸ್ರೇಲರು ಯೆಹೋಶುವನ ಆಜ್ಞೆಯಂತೆ ಜೋರ್ಡನ್ ನದಿಯ ಮಧ್ಯಭಾಗದಿಂದ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಬಂದರು. ಇಸ್ರೇಲಿನ ಹನ್ನೆರಡು ಕುಲಗಳಿಗೆ ಸರಿಯಾಗಿ ಹನ್ನೆರಡು ಕಲ್ಲುಗಳಿದ್ದವು. ಯೆಹೋವನು ಯೆಹೋಶುವನಿಗೆ ಹೇಳಿದಂತೆಯೇ ಅವರು ಕಲ್ಲುಗಳನ್ನು ತಮ್ಮ ಸಂಗಡ ತೆಗೆದುಕೊಂಡು ಬಂದು ತಾವು ಇಳಿದುಕೊಂಡಿದ್ದ ಸ್ಥಳದಲ್ಲಿ ಆ ಕಲ್ಲುಗಳನ್ನು ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಇಸ್ರಾಯೇಲರು ಯೆಹೋಶುವನು ಆಜ್ಞಾಪಿಸಿದ ಹಾಗೆ ಮಾಡಿದರು. ಯೆಹೋವ ದೇವರು ಯೆಹೋಶುವನಿಗೆ ಹೇಳಿದ ಪ್ರಕಾರ ಇಸ್ರಾಯೇಲರ ಗೋತ್ರಗಳ ಲೆಕ್ಕಕ್ಕೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ಯೊರ್ದನ್ ನದಿಯ ಮಧ್ಯದಿಂದ ತೆಗೆದುಕೊಂಡು, ಅವುಗಳನ್ನು ತಮ್ಮ ಸಂಗಡ ತಂದು ತಾವು ಇಳಿದುಕೊಂಡ ಸ್ಥಳದಲ್ಲಿ ಅವುಗಳನ್ನು ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 4:8
6 ತಿಳಿವುಗಳ ಹೋಲಿಕೆ  

ಯೆಹೋಶುವನು ಇಸ್ರಾಯೇಲರು ಯೊರ್ದನಿನಿಂದ ತೆಗೆದುಕೊಂಡು ಬಂದಿದ್ದ ಹನ್ನೆರಡು ಕಲ್ಲುಗಳನ್ನು ಗಿಲ್ಗಾಲಿನಲ್ಲೇ ನಿಲ್ಲಿಸಿದನು.


ಇದಲ್ಲದೆ ಯೆಹೋಶುವನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು, ಯೊರ್ದನಿನ ಮಧ್ಯದಲ್ಲಿ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ನಿಂತಿದ್ದ ಸ್ಥಳದಲ್ಲಿ ನಿಲ್ಲಿಸಿದನು. ಅವು ಇಂದಿನವರೆಗೂ ಅಲ್ಲಿಯೇ ಇವೆ.


ಇಸ್ರಾಯೇಲರು ಅಲ್ಲಿಂದ ಹೊರಟು ಯೆಹೋವನು ಮೋಶೆ ಆರೋನರಿಗೆ ಆಜ್ಞಾಪಿಸಿದ ಪ್ರಕಾರವೇ ಮಾಡಿದರು.


ಮೋಶೆಯು ಯೆಹೋವನ ಆಜ್ಞೆಗಳನ್ನೆಲ್ಲಾ ಬರೆದಿಟ್ಟನು. ಬೆಳಿಗ್ಗೆ ಎದ್ದು ಆ ಬೆಟ್ಟದ ತಪ್ಪಲಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲರ ಹನ್ನೆರಡು ಕುಲಗಳಿಗೆ ಸರಿಯಾಗಿ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆಮಾಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು