ಯೆಹೋಶುವ 5:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೊರ್ದನಿನ ಪಶ್ಚಿಮದಲ್ಲಿದ್ದ ಅಮೋರಿಯರ ಎಲ್ಲಾ ಅರಸರು ಮತ್ತು ಸಮುದ್ರದ ಬಳಿಯಲ್ಲಿದ್ದ ಎಲ್ಲಾ ಕಾನಾನ್ಯರ ರಾಜರು, ಯೆಹೋವನು ಇಸ್ರಾಯೇಲ್ಯರ ಮುಂದೆ ಯೊರ್ದನಿನ ಹೊಳೆಯನ್ನು ಬತ್ತಿಸಿ, ಅವರನ್ನು ದಾಟಿಸಿದನೆಂಬ ವಾರ್ತೆ ಕೇಳಲು ಅವರ ಎದೆಯೊಡೆದು ಹೋಯಿತು. ಇಸ್ರಾಯೇಲ್ಯರ ನಿಮಿತ್ತವಾಗಿ ಅವರು ಬಲಗುಂದಿ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಜೋರ್ಡನಿನ ಪಶ್ಚಿಮದಲ್ಲಿದ್ದ ಅಮೋರಿಯರ ಎಲ್ಲ ಅರಸರು ಮತ್ತು ಸಮುದ್ರದ ಬಳಿಯಿದ್ದ ಸರ್ವ ಕಾನಾನ್ ರಾಜರು ಸರ್ವೇಶ್ವರ ಸ್ವಾಮಿ ಇಸ್ರಯೇಲರ ಕಣ್ಮುಂದೆಯೇ ಜೋರ್ಡನನ್ನು ಬತ್ತಿಸಿ ಆ ನದಿ ದಾಟಿಸಿದರೆಂದು ಕೇಳಿದರು. ಆಗ ಅವರ ಎದೆ ಒಡೆದುಕೋಯಿತು. ಇಸ್ರಯೇಲರ ಮುಂದೆ ಅವರಿಗೆ ಧೈರ್ಯವಿಲ್ಲದೆ ಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೊರ್ದನಿನ ಪಶ್ಚಿಮದಲ್ಲಿದ್ದ ಎಲ್ಲಾ ಅಮೋರಿಯರ ಅರಸರೂ ಸಮುದ್ರದ ಬಳಿಯಲ್ಲಿದ್ದ ಸರ್ವ ಕಾನಾನ್ ರಾಜರೂ ಯೆಹೋವನು ಇಸ್ರಾಯೇಲ್ಯರ ಮುಂದೆ ಯೊರ್ದನನ್ನು ಬತ್ತಿಸಿ ಅವರನ್ನು ದಾಟಿಸಿದನೆಂದು ಕೇಳಲು ಅವರ ಎದೆಯೊಡೆದು ಹೋಯಿತು. ಇಸ್ರಾಯೇಲ್ಯರ ನಿವಿುತ್ತವಾಗಿ ಅವರಿಗೆ ಧೈರ್ಯವಿಲ್ಲವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಇಸ್ರೇಲರು ಜೋರ್ಡನ್ ನದಿಯನ್ನು ದಾಟುವವರೆಗೆ ಯೆಹೋವನು ಆ ನದಿಯನ್ನು ಬತ್ತಿಸಿದನು. ಜೋರ್ಡನ್ ನದಿಯ ಪಶ್ಚಿಮ ದಿಕ್ಕಿನಲ್ಲಿರುವ ಅಮೋರಿಯರ ಅರಸರು ಮತ್ತು ಭೂಮಧ್ಯ ಸಾಗರದ ಹತ್ತಿರವಿರುವ ಕಾನಾನ್ಯರ ಅರಸರು ಈ ಸಂಗತಿಯನ್ನು ಕೇಳಿ ಭಯಗ್ರಸ್ತರಾದರು; ಇಸ್ರೇಲರ ವಿರುದ್ಧವಾಗಿ ಹೋರಾಡುವಷ್ಟು ಧೈರ್ಯವಿಲ್ಲದವರಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಇದಾದ ಮೇಲೆ ಯೆಹೋವ ದೇವರು ಇಸ್ರಾಯೇಲರು ದಾಟಿಹೋಗುವವರೆಗೆ ಅವರ ಮುಂದೆ ಯೊರ್ದನ್ ನದಿಯನ್ನು ಒಣಗಿ ಹೋಗುವಂತೆ ಮಾಡಿದ್ದನ್ನು ಯೊರ್ದನ್ ನದಿ ಪಶ್ಚಿಮದ ಆಚೆದಡದಲ್ಲಿ ವಾಸಿಸಿದ್ದ ಅಮೋರಿಯರ ಸಕಲ ಅರಸರು ಮತ್ತು ಸಮುದ್ರದ ಆಚೆಯಲ್ಲಿ ವಾಸಿಸಿದ್ದ ಕಾನಾನ್ಯರ ಸಕಲ ಅರಸರು ಕೇಳಿದಾಗ ಅವರ ಹೃದಯವು ಕುಂದಿಹೋಯಿತು. ಇಸ್ರಾಯೇಲರ ನಿಮಿತ್ತವಾಗಿ ಅವರಿಗೆ ಪ್ರಾಣಹೋದಂತೆ ಆಯಿತು. ಅಧ್ಯಾಯವನ್ನು ನೋಡಿ |