Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 5:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮರುದಿನದಿಂದ ಆ ದೇಶದ ಧಾನ್ಯವನ್ನು ಊಟಕ್ಕೆ ಉಪಯೋಗಿಸಲು ತೊಡಗಿದರು. ಹೇಗೆಂದರೆ ಅದೇ ಪಸ್ಕಹಬ್ಬದ ದಿನದಲ್ಲಿ ಅವರು ಹುಳಿಯಿಲ್ಲದ ರೊಟ್ಟಿಗಳನ್ನೂ, ಸುಟ್ಟ ತೆನೆಗಳನ್ನೂ ತಿಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮಾರನೆಯ ದಿನದಿಂದ ಕಾನಾನಿನ ಧಾನ್ಯವನ್ನು ಊಟಕ್ಕೆ ಬಳಸಲು ತೊಡಗಿದರು - ಹುಳಿಯಿಲ್ಲದ ರೊಟ್ಟಿಗಳನ್ನು ಮತ್ತು ಸುಟ್ಟ ತೆನೆಗಳನ್ನು ತಿನ್ನತೊಡಗಿದರು .

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮರುದಿವಸದಿಂದ ಆ ದೇಶದ ಧಾನ್ಯವನ್ನು ಊಟಕ್ಕೆ ಉಪಯೋಗಿಸ ತೊಡಗಿದರು. ಹೇಗಂದರೆ ಅದೇ ದಿನದಲ್ಲಿ ಅವರು ಹುಳಿಯಿಲ್ಲದ ರೊಟ್ಟಿಗಳನ್ನೂ ಸುಟ್ಟ ತೆನೆಗಳನ್ನೂ ತಿಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಪಸ್ಕಹಬ್ಬದ ಮರುದಿನ ಮುಂಜಾನೆಯಲ್ಲಿ ಅವರು ಆ ಭೂಮಿಯಲ್ಲಿ ಬೆಳೆದ ಆಹಾರವನ್ನು ಊಟಮಾಡಿದರು; ಅವರು ಹುಳಿ ರಹಿತವಾದ ರೊಟ್ಟಿಯನ್ನು ಮತ್ತು ಹುರಿದ ಕಾಳುಗಳನ್ನು ಊಟ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಪಸ್ಕದ ಮರುದಿವಸ ಅವರು ಆ ದೇಶದ ಬೆಳೆಯನ್ನು ಅಂದರೆ ಹುಳಿಯಿಲ್ಲದ ರೊಟ್ಟಿಗಳನ್ನೂ ಹುರಿದ ಧಾನ್ಯಗಳನ್ನೂ ತಿಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 5:11
7 ತಿಳಿವುಗಳ ಹೋಲಿಕೆ  

ನೀವು ನಿಮ್ಮ ದೇವರಿಗೆ ಸಲ್ಲಿಸಬೇಕಾದದ್ದನ್ನು ತಂದು ಕೊಡುವವರೆಗೂ ಆ ವರ್ಷದ ಬೆಳೆಯ ರೊಟ್ಟಿಯನ್ನಾಗಲಿ, ಸುಟ್ಟ ತೆನೆಗಳನ್ನಾಗಲಿ ಅಥವಾ ಹಸಿತೆನೆಗಳನ್ನಾಗಲಿ ತಿನ್ನಲೇಬಾರದು. ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ವಾಸಸ್ಥಾನಗಳಲ್ಲಿಯೂ ಇದು ಶಾಶ್ವತನಿಯಮ.


ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು. ಅದು ಮೊದಲುಗೊಂಡು ಏಳು ದಿನಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು.


ನೀವು ಭೂಮಿಯಿಂದ ಬೆಳೆದ ಬೆಳೆಯನ್ನು ಉಪಯೋಗಿಸುವಾಗ, ಸ್ವಲ್ಪವನ್ನು ಯೆಹೋವನಿಗೋಸ್ಕರ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.


ಇಸ್ರಾಯೇಲ್ಯರು ಗಿಲ್ಗಾಲಿನಲ್ಲಿ ತಂಗಿದ್ದಾಗ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ಯೆರಿಕೋವಿನ ಬೈಲಿನಲ್ಲಿ ಪಸ್ಕಹಬ್ಬವನ್ನು ಆಚರಿಸಿದರು.


ಆ ದೇಶದ ಹುಟ್ಟುವಳಿಯನ್ನು ಊಟಮಾಡಿದ ಮರುದಿನವೇ ಮನ್ನವು ನಿಂತುಹೋಯಿತು. ಅದು ಅವರಿಗೆ ತಿರುಗಿ ಸಿಕ್ಕಲೇ ಇಲ್ಲ. ಇಸ್ರಾಯೇಲ್ಯರು ಆ ವರ್ಷವೆಲ್ಲ ಕಾನಾನ್ ದೇಶದ ಉತ್ಪನ್ನವನ್ನೇ ಅನುಭವಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು