Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 6:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆರು ದಿನ ಈ ಪ್ರಕಾರ ಮಾಡಿದರು. ಏಳನೆಯ ದಿನದಲ್ಲಿ ಅವರು ಸೂರ್ಯೋದಯವಾಗುತ್ತಲೇ ಎದ್ದು ಅದೇ ಕ್ರಮದಲ್ಲಿ ಪಟ್ಟಣವನ್ನು ಏಳು ಸಾರಿ ಸುತ್ತಿದರು. ಈ ದಿನದಲ್ಲಿ ಮಾತ್ರ ಅದನ್ನು ಏಳು ಸಾರಿ ಸುತ್ತಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಏಳನೆಯ ದಿನದಲ್ಲಿ ಅವರು ಸೂರ್ಯೋದಯವಾಗುತ್ತಲೇ ಎದ್ದು ಅದೇ ಕ್ರಮದಲ್ಲಿ ನಗರವನ್ನು ಏಳುಸಾರಿ ಸುತ್ತಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆರು ದಿವಸ ಈ ಪ್ರಕಾರ ಮಾಡಿದರು. ಏಳನೆಯ ದಿನದಲ್ಲಿ ಅವರು ಸೂರ್ಯೋದಯವಾಗುತ್ತಲೇ ಎದ್ದು ಅದೇ ಕ್ರಮದಲ್ಲಿ ಪಟ್ಟಣವನ್ನು ಏಳು ಸಾರಿ ಸುತ್ತಿದರು. ಈ ದಿವಸದಲ್ಲಿ ಮಾತ್ರ ಅದನ್ನು ಏಳು ಸಾರಿ ಸುತ್ತಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಏಳನೆಯ ದಿನ ಸೂರ್ಯೋದಯವಾಗುತ್ತಲೇ ಅವರು ಎದ್ದರು. ಪಟ್ಟಣದ ಸುತ್ತಲು ಅವರು ಏಳು ಸಲ ಸುತ್ತಿದರು. ಅವರು ಮುಂಚಿನ ದಿನಗಳಲ್ಲಿ ನಡೆದ ಕ್ರಮದಲ್ಲಿಯೇ ನಡೆದರು. ಆದರೆ ಆ ದಿನ ಅವರು ನಗರದ ಸುತ್ತಲು ಏಳು ಸಲ ಸುತ್ತಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ಏಳನೆಯ ದಿನ ಸೂರ್ಯೋದಯವಾಗುವಾಗ, ಅವರು ಎದ್ದು ಪಟ್ಟಣವನ್ನು ಅದೇ ರೀತಿಯಾಗಿ ಏಳು ಸಾರಿ ಸುತ್ತಿಬಂದರು. ಆ ದಿನದಲ್ಲಿ ಮಾತ್ರವೇ ಪಟ್ಟಣವನ್ನು ಏಳು ಸಾರಿ ಸುತ್ತಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 6:15
7 ತಿಳಿವುಗಳ ಹೋಲಿಕೆ  

ಅರುಣೋದಯದಲ್ಲಿ ಎದ್ದು ಮೊರೆಯಿಟ್ಟೆನು, ನಿನ್ನ ವಾಕ್ಯವನ್ನು ನಿರೀಕ್ಷಿಸಿಕೊಂಡಿದ್ದೇನೆ.


ಇದಲ್ಲದೆ ಪ್ರವಾದನವಾಕ್ಯವು ನಮಗೆ ಬಹುದೃಢವಾಗಿ ದೊರೆತಿದೆ. ಆ ದಿನವು ಅರುಣೋದಯವಾಗುವರೆಗೆ ಮತ್ತು ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪವೆಂದೆಣಿಸಿ ಅದಕ್ಕೆ ಲಕ್ಷ್ಯಕೊಟ್ಟರೆ ಒಳ್ಳೆಯದು.


ಸಬ್ಬತ್ ದಿನ ಆದ ಮೇಲೆ ವಾರದ ಮೊದಲನೆಯ ದಿನ ಬೆಳಗಾಗುತ್ತಿರುವಾಗಲೇ ಮಗ್ದಲದ ಮರಿಯಳೂ ಮತ್ತು ಆ ಬೇರೆ ಮರಿಯಳೂ ಸಮಾಧಿಯನ್ನು ನೋಡಲು ಬಂದರು.


ನಂಬಿಕೆಯಿಂದಲೇ ಅವರು ಏಳು ದಿನಗಳ ತನಕ ಯೆರಿಕೋ ಪಟ್ಟಣದ ಗೋಡೆಗಳನ್ನು ಸುತ್ತಿದ ಮೇಲೆ ಅವು ಬಿದ್ದವು.


ಹೀಗೆ ಎರಡನೆಯ ದಿನದಲ್ಲಿಯೂ ಪಟ್ಟಣವನ್ನು ಸುತ್ತಿ ಪಾಳೆಯಕ್ಕೆ ಹಿಂದಿರುಗಿದರು.


ಏಳನೆಯ ಸಾರಿ ಸುತ್ತುವಾಗ ಯಾಜಕರು ಕೊಂಬುಗಳನ್ನು ಊದಲು ಯೆಹೋಶುವನು ಜನರಿಗೆ, “ಆರ್ಭಟಿಸಿರಿ, ಯೆಹೋವನು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾನೆ.


ಯೆಹೋಶುವನು ಬೆಳಗಿನ ಜಾವದಲ್ಲೇ ಎದ್ದನು; ಅವನೊಂದಿಗೆ ಇಸ್ರಾಯೇಲ್ಯರೆಲ್ಲರೂ ಶಿಟ್ಟೀಮನ್ನು ಬಿಟ್ಟು ಯೊರ್ದನಿಗೆ ಬಂದು ಅದನ್ನು ದಾಟುವ ಮೊದಲು ಅಲ್ಲೇ ಇಳಿದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು