Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 6:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನೀವಾದರೋ ಯೆಹೋವನಿಗೆ ಅರ್ಪಿಸುವ ವಸ್ತುಗಳ ವಿಷಯದಲ್ಲಿ ಜಾಗರೂಕತೆಯಿಂದಿರಬೇಕು. ನೀವು ಅವುಗಳಲ್ಲಿ ಯಾವುದನ್ನಾದರೂ ತೆಗೆದುಕೊಂಡರೆ, ಇಸ್ರಾಯೇಲ್ಯರ ಪಾಳೆಯವು ಶಾಪಕ್ಕೆ ಗುರಿಯಾಗಿ ನಾಶವಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನೀವಾದರೋ ಸರ್ವೇಶ್ವರನಿಗೆ ಮೀಸಲಾದ ವಸ್ತುಗಳ ವಿಷಯದಲ್ಲಿ ಜಾಗರೂಕತೆಯಿಂದಿರಬೇಕು. ನೀವು ಅವುಗಳಲ್ಲಿ ಯಾವುದನ್ನಾದರೂ ತೆಗೆದುಕೊಂಡರೆ ಇಸ್ರಯೇಲರ ಪಾಳೆಯವೇ ಶಾಪಕ್ಕೆ ಗುರಿಯಾಗಿ ನಾಶವಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನೀವಾದರೋ ಯೆಹೋವನಿಗೆ ಮೀಸಲಾದ ವಸ್ತುಗಳ ವಿಷಯದಲ್ಲಿ ಜಾಗರೂಕತೆಯಿಂದಿರಬೇಕು. ನೀವು ಅವುಗಳಲ್ಲಿ ಯಾವದನ್ನಾದರೂ ತೆಗೆದುಕೊಂಡರೆ ಇಸ್ರಾಯೇಲ್ಯರ ಪಾಳೆಯವು ಶಾಪಕ್ಕೆ ಗುರಿಯಾಗಿ ಕೆಟ್ಟೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅಲ್ಲದೆ ನಾವು ಉಳಿದೆಲ್ಲವನ್ನು ನಾಶಪಡಿಸಬೇಕೆಂಬುದನ್ನು ನೆನಪಿಡಿ. ಅವರ ವಸ್ತುಗಳನ್ನು ತೆಗೆದುಕೊಳ್ಳಬೇಡಿ. ನೀವು ಅವರ ವಸ್ತುಗಳನ್ನು ತೆಗೆದುಕೊಂಡರೆ ಮತ್ತು ಅವುಗಳನ್ನು ನಮ್ಮ ಪಾಳೆಯಕ್ಕೆ ತಂದರೆ ನೀವೇ ನಾಶವಾಗುವಿರಿ; ಇಸ್ರೇಲಿನ ಎಲ್ಲಾ ಜನರಿಗೆ ಕಷ್ಟವನ್ನುಂಟುಮಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದರೆ ಅರ್ಪಿತವಾದವುಗಳನ್ನು ನೀವು ಮುಟ್ಟಬೇಡಿರಿ. ಹಾಗೆ ಅವುಗಳನ್ನು ತೆಗೆದುಕೊಂಡು ನಿಮಗೆ ನಾಶನವನ್ನು ತಂದುಕೊಳ್ಳಬೇಡಿರಿ. ಇಸ್ರಾಯೇಲಿನ ಪಾಳೆಯವೇ ಶಾಪಕ್ಕೆ ಈಡು ಮಾಡಿ, ತೊಂದರೆ ಪಡಿಸದಂತೆ ಶಾಪಕ್ಕೆ ಈಡಾದವುಗಳನ್ನು ತೆಗೆದುಕೊಳ್ಳದೆ ಬಹು ಎಚ್ಚರಿಕೆಯಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 6:18
20 ತಿಳಿವುಗಳ ಹೋಲಿಕೆ  

ಪ್ರಿಯಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ.


ನಿಷ್ಪ್ರಯೋಜಕವಾದ ಕತ್ತಲೆಯ ಕೃತ್ಯಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬಯಲಿಗೆಳೆದು ಖಂಡಿಸಿರಿ.


ಯೆಹೂದ ಕುಲದವನೂ ಜೆರಹನ ಗೋತ್ರದವನೂ, ಜಬ್ದೀಯ ಕುಟುಂಬದವನೂ, ಕರ್ಮೀಯ ಮಗನೂ ಆದ ಆಕಾನನು ಯೆಹೋವನಿಗೆ ಮೀಸಲಾಗಿಟ್ಟ ವಸ್ತುಗಳಲ್ಲಿ ಕೆಲವನ್ನು ಕದ್ದುಕೊಂಡದ್ದರಿಂದ ಇಸ್ರಾಯೇಲ್ಯರೆಲ್ಲರು ದ್ರೋಹಿಗಳಾದರು. ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು.


ಆಗ ಯೆಹೋಶುವನು ಆಕಾನನಿಗೆ “ನೀನು ನಮ್ಮನ್ನು ಆಪತ್ತಿಗೆ ಗುರಿಮಾಡಿದ್ದೇಕೆ? ಈ ಹೊತ್ತು ಯೆಹೋವನು ನಿನ್ನ ಮೇಲೆ ಆಪತ್ತನ್ನು ಬರಮಾಡುವನು” ಎಂದು ಹೇಳಿದ ಕೂಡಲೆ ಇಸ್ರಾಯೇಲ್ಯರೆಲ್ಲರೂ ಅವನನ್ನು ಕಲ್ಲೆಸೆದು ಕೊಂದರು. ಅವನಿಗಿದ್ದದ್ದೆಲ್ಲವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.


ಆದ್ದರಿಂದ, “ಅನ್ಯಜನರನ್ನು ಬಿಟ್ಟು ಹೊರಬನ್ನಿರಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ” ಎಂದು ಕರ್ತನು ಹೇಳುತ್ತಾನೆ.


ಸಂಕಟದಲ್ಲಿ ಬಿದ್ದಿರುವ ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಪರಾಂಬರಿಸಿ ತನಗೆ ಇಹಲೋಕದ ದೋಷವು ಹತ್ತದಂತೆ ತನ್ನನ್ನು ತಾನು ಕಾಪಾಡಿಕೊಳ್ಳುವುದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ, ನಿರ್ಮಲವೂ ಆಗಿರುವ ಭಕ್ತಿ.


ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟತನವನ್ನು ತಿರಸ್ಕರಿಸಿರಿ, ಒಳ್ಳೆಯದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ.


ಯೋನನು ಅವರಿಗೆ “ನನ್ನನ್ನೆತ್ತಿ ಸಮುದ್ರದಲ್ಲಿ ಹಾಕಿರಿ; ಆಗ ಸಮುದ್ರವು ಶಾಂತವಾಗುವುದು; ಈ ಭೀಕರ ಬಿರುಗಾಳಿ ನಿಮಗೆ ಸಂಭವಿಸಿದ್ದು ನನ್ನ ನಿಮಿತ್ತವೇ ಎಂಬುದು ನನಗೆ ಗೊತ್ತು” ಎಂದು ಉತ್ತರಕೊಟ್ಟನು.


ಯುದ್ಧದ ಆಯುಧಗಳಿಗಿಂತಲೂ ಜ್ಞಾನವೇ ಉತ್ತಮ. ಆದರೆ ಒಬ್ಬ ಪಾಪಿಯು ಬಹಳ ಶುಭವನ್ನು ಹಾಳುಮಾಡುತ್ತಾನೆ.


ದಾವೀದನ ಕಾಲದಲ್ಲಿ ಮೂರು ವರ್ಷಗಳ ವರೆಗೂ ಎಡಬಿಡದೆ ಬರವಿತ್ತು. ದಾವೀದನು ಯೆಹೋವನನ್ನು ವಿಚಾರಿಸಲು ಆತನು, “ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೆಯೂ, ಅವನ ಮನೆಯವರ ಮೇಲೆಯೂ ರಕ್ತಾಪರಾಧವಿದೆ” ಎಂದು ಉತ್ತರ ಕೊಟ್ಟನು.


ಅದು ಕೇವಲ ಯೆಹೋವನಿಂದ ನಾಶವಾಗತಕ್ಕದ್ದು. ಆದುದರಿಂದ ನೀವು ಅಂತಹ ವಸ್ತುವನ್ನು ಮನೆಯೊಳಕ್ಕೆ ತಂದು ಅದರಂತೆಯೇ ನಾಶಕ್ಕೆ ಗುರಿಯಾಗಬಾರದು. ನೀವು ಅದನ್ನು ಅಸಹ್ಯಪಟ್ಟು ಮುಟ್ಟಲೂ ಬಾರದು.


ಯಾವನು ಮೀಸಲಾದ ವಸ್ತುಗಳನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುತ್ತಾನೋ ಅವನು ಯೆಹೋವನ ನಿಬಂಧನೆಯನ್ನು ಮೀರಿ ಇಸ್ರಾಯೇಲರಲ್ಲಿ ಬುದ್ಧಿಹೀನಕಾರ್ಯ ನಡಿಸಿದ್ದರಿಂದ ತನ್ನ ಎಲ್ಲಾ ಆಸ್ತಿ ಸಹಿತವಾಗಿ ಸುಡಲ್ಪಡಬೇಕು’” ಎಂದು ಹೇಳು ಎಂಬುದೇ.


“ಕೇವಲ ಯೆಹೋವನಿಗೇ ಆಗಲಿ” ಎಂದು ನೀವು ಗೊತ್ತು ಮಾಡಿದ್ದರಲ್ಲಿ ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು. ನಾನು ಈಗ ನಿಮಗೆ ಬೋಧಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಗೆ ಸರಿಯಾದದ್ದನ್ನು ಮಾಡಬೇಕು.


ನೀನೆದ್ದು ಜನರನ್ನು ಶುದ್ಧೀಕರಿಸು. ನೀನು ಅವರಿಗೆ ‘ಇಸ್ರಾಯೇಲ್ಯರೇ, ನಾಳೆ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಿಮ್ಮ ಮಧ್ಯದಲ್ಲಿ ಶಾಪಕ್ಕೆ ಕಾರಣವಾದ ವಸ್ತುವಿದೆ. ನೀವು ಅದನ್ನು ತೆಗೆದುಹಾಕುವ ತನಕ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ನಿಮ್ಮ ದೇವರಾದ ಯೆಹೋವನು ಹೇಳಿದ್ದಾನೆ.


ರಾತ್ರಿಕಾಲದಲ್ಲಿ ವೀರ್ಯಸ್ಖಲನದಿಂದ ಯಾವನಾದರೂ ಅಶುದ್ಧನಾದರೆ, ಅವನು ಪಾಳೆಯದೊಳಗೆ ಇರದೆ ಹೊರಗೆ ಇರಬೇಕು.


ಸೌಲನೂ ಮತ್ತು ಇಸ್ರಾಯೇಲರೂ ಅಗಾಗನನ್ನೂ, ಉತ್ತಮವಾದ ಕುರಿದನಗಳನ್ನೂ, ಕುರಿಮರಿಗಳನ್ನೂ, ಕೊಬ್ಬಿದ ಪಶುಗಳನ್ನೂ, ಶ್ರೇಷ್ಠವಾದ ಎಲ್ಲಾ ಪದಾರ್ಥಗಳನ್ನೂ ನಾಶಮಾಡಲು ಮನಸ್ಸಿಲ್ಲದೆ ಉಳಿಸಿ ಪ್ರಯೋಜನವಿಲ್ಲದಂಥ ಹೀನವಾದವುಗಳನ್ನೆಲ್ಲಾ ನಾಶಮಾಡಿಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು