Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 6:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಯೆಹೋವನು ಯೆಹೋಶುವನಿಗೆ “ನೋಡು, ನಾನು ಯೆರಿಕೋವನ್ನೂ ಅದರ ಅರಸನನ್ನೂ ಹಾಗೂ ಯುದ್ಧವೀರರನ್ನೂ ನಿನ್ನ ಕೈಗೆ ಒಪ್ಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ಸರ್ವೇಶ್ವರಸ್ವಾಮಿ ಯೆಹೋಶುವನಿಗೆ, “ನೋಡು, ನಾನು ಜೆರಿಕೋವನ್ನು, ಅದರ ಅರಸನನ್ನು ಹಾಗು ಅದರ ಯುದ್ಧವೀರರನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ಯೆಹೋವನು ಯೆಹೋಶುವನಿಗೆ - ನೋಡು, ನಾನು ಯೆರಿಕೋವನ್ನೂ ಅದರ ಅರಸನನ್ನೂ ಯುದ್ಧವೀರರನ್ನೂ ನಿನ್ನ ಕೈಗೆ ಒಪ್ಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ಯೆಹೋವನು ಯೆಹೋಶುವನಿಗೆ, “ಇಗೋ ನೋಡು, ನೀನು ಜೆರಿಕೊ ನಗರವನ್ನು ಗೆಲ್ಲುವಂತೆ ಮಾಡುತ್ತೇನೆ. ನೀನು ಅರಸನನ್ನು ಮತ್ತು ನಗರದ ಎಲ್ಲ ಯೋಧರನ್ನು ಸೋಲಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಯೆಹೋವ ದೇವರು ಯೆಹೋಶುವನಿಗೆ, “ನೋಡು, ಯೆರಿಕೋವನ್ನೂ ಅದರ ಅರಸನನ್ನೂ ಯುದ್ಧ ವೀರರನ್ನೂ ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 6:2
20 ತಿಳಿವುಗಳ ಹೋಲಿಕೆ  

ಆತನು ಅವರ ಅರಸರನ್ನು ನಿಮ್ಮ ಕೈಗೆ ಸಿಗುವಂತೆ ಮಾಡಿ, ನೀವು ಅವರ ಹೆಸರುಗಳೇ ಭೂಮಿಯ ಮೇಲೆ ಉಳಿಯದಂತೆ ಮಾಡಬೇಕು. ಯಾರೂ ನಿಮ್ಮ ಮುಂದೆ ನಿಲ್ಲುವುದಿಲ್ಲ; ನೀವು ಎಲ್ಲರನ್ನೂ ನಾಶಮಾಡುವಿರಿ.


ಅನಂತರ ಯೆಹೋವನು ಯೆಹೋಶುವನಿಗೆ “ಅಂಜಬೇಡ, ಕಳವಳಗೊಳ್ಳಬೇಡ; ಎದ್ದು ಭಟರೆಲ್ಲರನ್ನೂ ಕರೆದುಕೊಂಡು ಆಯಿ ಪಟ್ಟಣಕ್ಕೆ ಹೋಗು. ನೋಡು, ಆಯಿ ಎಂಬ ಊರಿನ ಅರಸ, ಪ್ರಜೆ, ನಗರ, ಸೀಮೆ ಇವುಗಳನ್ನೆಲ್ಲಾ ನಿನಗೆ ಕೊಟ್ಟಿದ್ದೇನೆ.


ಇದಲ್ಲದೆ ಅವರು “ಯೆಹೋಶುವನಿಗೆ ನಿಶ್ಚಯವಾಗಿ ಯೆಹೋವನು ಆ ದೇಶವನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿ ಕೊಟ್ಟಿದ್ದಾನೆ; ಅದರ ನಿವಾಸಿಗಳೆಲ್ಲಾ ನಮ್ಮ ನಿಮಿತ್ತ ನಡುಗುತ್ತಾ ಕಂಗೆಟ್ಟು ಹೋಗಿದ್ದಾರೆ” ಎಂದು ತಿಳಿಸಿದರು.


“ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿದ್ದಾನೆಂದು ನಾನು ಬಲ್ಲೆನು. ನಿಮ್ಮ ವಿಷಯದಲ್ಲಿ ನಮಗೆ ಮಹಾಭಯವುಂಟಾಗಿದೆ; ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟುಹೋಗಿದ್ದಾರೆ.


ಅವರು ಆ ದೇಶದಲ್ಲಿ ಹೋಗಿ ಸೇರಿಕೊಂಡು ಅದನ್ನು ಸ್ವಾಧೀನಮಾಡಿಕೊಂಡರು. ನೀನು ಅವರ ಮುಂದೆ ದೇಶನಿವಾಸಿಗಳಾಗಿದ್ದ ಕಾನಾನ್ಯರನ್ನು ಕುಗ್ಗಿಸಿ ಮನಸ್ಸಿಗೆ ಬಂದಂತೆ ನಡಿಸುವ ಹಾಗೆ ಆ ದೇಶದ ರಾಜರನ್ನೂ ಪ್ರಜೆಗಳನ್ನೂ ಅವರ ಕೈಗೆ ಒಪ್ಪಿಸಿದೆ.


ಇದು ಸಾಕ್ಷಿಗಳ ತೀರ್ಮಾನ, ದೇವರ ತೀರ್ಪು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳ್ವಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇಮಿಸುತ್ತಾನೆಂಬುದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು’ ಎಂದು ಸಾರಿದನು.


ಕಾಲ ಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ಕಡೆಗಣಿಸುತ್ತಾನೆ, ನೆಲೆಸುವಂತೆ ಮಾಡುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ.


ಅದನ್ನು ತಿಳಿದು ದಾವೀದನು ಯೆಹೋವನನ್ನು, “ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗಬಹುದೋ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿಯೋ?” ಎಂದು ಕೇಳಿದನು. ಅದಕ್ಕೆ ಯೆಹೋವನು, “ಹೋಗು ನಾನು ಹೇಗೂ ಅವರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು” ಎಂದು ಉತ್ತರಕೊಟ್ಟನು.


ನಿನ್ನ ದೇವನಾದ ಕೆಮೋಷನು ನಿನಗೆ ಕೊಡುವ ದೇಶಗಳನ್ನು ನೀನು ಸ್ವಾಧೀನಪಡಿಸಿಕೊಳ್ಳುವುದಿಲ್ಲವೋ? ಹಾಗೆಯೇ ನಮ್ಮ ದೇವರಾದ ಯೆಹೋವನು ನಮಗೆ ಒಪ್ಪಿಸಿಕೊಡುವುದನ್ನು ನಾವು ಸ್ವಾಧೀನಪಡಿಸಿಕೊಳ್ಳುವುದು ನ್ಯಾಯವಾಗಿದೆ.


ಇಸ್ರಾಯೇಲರ ದೇವರಾದ ಯೆಹೋವನು ಸೀಹೋನನನ್ನೂ, ಅವನ ಜನರೆಲ್ಲರನ್ನೂ ಇಸ್ರಾಯೇಲರ ಕೈಗೆ ಒಪ್ಪಿಸಿದ್ದರಿಂದ ಅವರು ಈ ದೇಶದ ನಿವಾಸಿಗಳಾದ ಅಮೋರಿಯರನ್ನು ಹೊಡೆದು, ಅವರ ದೇಶವನ್ನೆಲ್ಲಾ ಸ್ವಾಧೀನಪಡಿಸಿಕೊಂಡರು.


ಭೂನಿವಾಸಿಗಳೆಲ್ಲರೂ ಆತನ ದೃಷ್ಟಿಯಲ್ಲಿ ಶೂನ್ಯರಾಗಿ ಪರಲೋಕ ಸೈನ್ಯದವರಲ್ಲಿಯೂ, ಭೂಲೋಕದವರಲ್ಲಿಯೂ ತನ್ನ ಚಿತ್ತದ ಪ್ರಕಾರ ಮಾಡುತ್ತಾನೆ; ಆತನ ಶಕ್ತಿಯುತ ಕೈಯನ್ನು ತಡೆಹಿಡಿಯಲು ಸಾಧ್ಯವಿಲ್ಲ ‘ನೀನು ಏನು ಮಾಡುತ್ತೀ?’” ಎಂದು ಯಾರೂ ಕೇಳಲಾರರು.


“ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.


ಅರಸನೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯಮಹತ್ವ, ಮಾನಸನ್ಮಾನಗಳನ್ನು ದಯಪಾಲಿಸಿದನು.


ಯೆರಿಕೋವಿನವರು ಇಸ್ರಾಯೇಲ್ಯರಿಗೆ ಹೆದರಿ ತಮ್ಮ ಪಟ್ಟಣದ ಬಾಗಿಲುಗಳನ್ನು ಭದ್ರವಾಗಿ ಮುಚ್ಚಿಕೊಂಡರು. ಯಾರೂ ಒಳಗೆ ಹೋಗಲಿಲ್ಲ; ಹೊರಗೆ ಬರಲಿಲ್ಲ.


ನಿನ್ನ ಭಟರೆಲ್ಲ ಆರು ದಿನಗಳ ವರೆಗೆ ದಿನಕ್ಕೆ ಒಂದು ಸಾರಿ ಪಟ್ಟಣವನ್ನು ಸುತ್ತಲಿ.


ಯೆರಿಕೋವಿನ ಅರಸನು - 1 ಬೇತೇಲ್ ಬಳಿಯಲ್ಲಿರುವ ಆಯಿ ಎಂಬ ಊರಿನ ಅರಸನು - 1


ಯೆಹೋವನು ಯೆಹೋಶುವನನ್ನು ಕುರಿತು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು