Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 6:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಕೂಡಲೆ ಜನರ ಆರ್ಭಟವೂ ಕೊಂಬುಗಳ ಧ್ವನಿಯೂ ಉಂಟಾದವು. ಜನರು ಕೊಂಬಿನ ಧ್ವನಿಯನ್ನು ಕೇಳಿ ಗಟ್ಟಿಯಾಗಿ ಆರ್ಭಟಿಸಲು ಪಟ್ಟಣದ ಗೋಡೆಯು ತಾನೇ ಬಿದ್ದುಹೋಯಿತು. ಪ್ರತಿಯೊಬ್ಬನೂ ನೆಟ್ಟಗೆ ಪಟ್ಟಣದಲ್ಲಿ ನುಗ್ಗಿ ಹೋದನು. ಅದು ಅವರಿಗೆ ವಶವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಕೂಡಲೆ ಜನರು ಆರ್ಭಟಿಸಿದರು. ಕೊಂಬುಗಳು ಮೊಳಗಿದವು. ಕೊಂಬಿನ ಧ್ವನಿ ಕೇಳಿ ಜನರು ಇನ್ನೂ ಗಟ್ಟಿಯಾಗಿ ಆರ್ಭಟಿಸಿದರು. ನಗರದ ಗೋಡೆ ತಾನಾಗಿ ಬಿದ್ದುಹೋಯಿತು. ಪ್ರತಿ ಒಬ್ಬನೂ ನೆಟ್ಟಗೆ ನಗರಕ್ಕೆ ನುಗ್ಗಿದನು. ಅದು ಅವರ ಸ್ವಾಧೀನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಕೂಡಲೆ ಜನರ ಆರ್ಭಟವೂ ಕೊಂಬುಗಳ ಧ್ವನಿಯೂ ಉಂಟಾದವು. ಜನರು ಕೊಂಬಿನ ಧ್ವನಿಯನ್ನು ಕೇಳಿ ಮಹತ್ತರವಾಗಿ ಆರ್ಭಟಿಸಲು ಪಟ್ಟಣದ ಗೋಡೆಯು ತಾನೇ ಬಿದ್ದುಹೋಯಿತು. ಪ್ರತಿಯೊಬ್ಬನೂ ನೆಟ್ಟಗೆ ಪಟ್ಟಣದಲ್ಲಿ ನುಗ್ಗಿ ಹೋದನು. ಅದು ಅವರಿಗೆ ಸ್ವಾಧೀನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯಾಜಕರು ತುತ್ತೂರಿಗಳನ್ನು ಊದಿದಾಗ ಜನರು ಆರ್ಭಟಿಸತೊಡಗಿದರು. ಆಗ ಗೋಡೆಗಳು ಬಿದ್ದವು; ಜನರು ನೇರವಾಗಿ ನಗರದೊಳಗೆ ನುಗ್ಗಿದರು. ಹೀಗೆ ಇಸ್ರೇಲರು ನಗರವನ್ನು ಸ್ವಾಧೀನಪಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಕೂಡಲೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತೂರಿಯ ಶಬ್ದವನ್ನು ಜನರು ಕೇಳಿ ಮಹಾಧ್ವನಿಯಿಂದ ಆರ್ಭಟಿಸಿದಾಗ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು. ಹೀಗೆ ಜನರಲ್ಲಿ ಪ್ರತಿಯೊಬ್ಬನು ಮುಂದೆ ನೇರವಾಗಿ ಒಳಗೆ ನುಗ್ಗಿದರು. ಆಗ ಪಟ್ಟಣವು ಅವರಿಗೆ ಸ್ವಾಧೀನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 6:20
6 ತಿಳಿವುಗಳ ಹೋಲಿಕೆ  

ನಂಬಿಕೆಯಿಂದಲೇ ಅವರು ಏಳು ದಿನಗಳ ತನಕ ಯೆರಿಕೋ ಪಟ್ಟಣದ ಗೋಡೆಗಳನ್ನು ಸುತ್ತಿದ ಮೇಲೆ ಅವು ಬಿದ್ದವು.


ಅವರು ದೀರ್ಘವಾಗಿ ಊದುವ ಕೊಂಬಿನ ಧ್ವನಿಯು ಕೇಳಿಸುತ್ತಲೇ ನೀವೆಲ್ಲರೂ ಗಟ್ಟಿಯಾಗಿ ಆರ್ಭಟಿಸಿರಿ. ಆಗ ಪಟ್ಟಣದ ಗೋಡೆಯು ತಾನೇ ಬಿದ್ದುಹೋಗುವುದು; ಪ್ರತಿಯೊಬ್ಬನೂ ನೆಟ್ಟಗೆ ಒಳಗೆ ನುಗ್ಗಬಹುದು” ಎಂದು ಹೇಳಿದನು.


ಯೆಹೋವನ ಒಡಂಬಡಿಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ ಇಸ್ರಾಯೇಲ್ಯರೆಲ್ಲಾ ಭೂಮಿ ಕಂಪಿಸುವ ಹಾಗೆ ಆರ್ಭಟಿಸಿದರು.


ಅನಂತರ ಜನರು ಆರ್ಭಟಿಸಿದರು. ಅವರು ಆರ್ಭಟಿಸಿದ ಕೂಡಲೆ ಯೆಹೋವನಾದ ದೇವರು ಯಾರೊಬ್ಬಾಮನನ್ನೂ, ಎಲ್ಲಾ ಇಸ್ರಾಯೇಲರನ್ನೂ ಅಬೀಯನಿಂದಲೂ ಹಾಗೂ ಯೆಹೂದ್ಯರಿಂದಲೂ ಅಪಜಯಗೊಳಿಸಿದನು.


ಕೋಟೆಗಳನ್ನೂ, ದೊಡ್ಡ ಕೊತ್ತಲುಗಳನ್ನೂ ಹಿಡಿಯಲು, ಆರ್ಭಟಿಸಿ ಕೊಂಬೂದುವ ದಿನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು