ಯೆಹೋಶುವ 6:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ವೇಶ್ಯೆಯಾದ ರಾಹಾಬಳು ಯೆರಿಕೋ ಪಟ್ಟಣವನ್ನು ಸಂಚರಿಸಿ ನೋಡುವುದಕ್ಕೆ ಬಂದಿದ್ದ ಯೆಹೋಶುವನ ಗೂಢಚಾರರನ್ನು ಅಡಗಿಸಿಟ್ಟದ್ದರಿಂದ ಅವನು ಅವಳನ್ನೂ, ಅವಳ ತಂದೆಯ ಮನೆಯವರನ್ನೂ, ಅವಳಿಗಿರುವುದೆಲ್ಲವನ್ನೂ ಉಳಿಸಿದನು. ಅವಳು ಇಂದಿನವರೆಗೂ ಇಸ್ರಾಯೇಲ್ಯರಲ್ಲಿ ವಾಸವಾಗಿದ್ದಾಳೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ವೇಶ್ಯೆಯಾದ ರಾಹಾಬಳು, ಜೆರಿಕೋ ನಗರದಲ್ಲಿ ಸಂಚರಿಸಿ ನೋಡಲು ಬಂದಿದ್ದ ಯೆಹೋಶುವನ ಗೂಢಚಾರರನ್ನು ಬಚ್ಚಿಟ್ಟಿದ್ದರಿಂದ ಅವಳನ್ನೂ ಅವಳ ತಂದೆಯ ಮನೆಯವರನ್ನೂ ಅವಳಿಗಿದ್ದುದೆಲ್ಲವನ್ನೂ ಉಳಿಸಿದರು. ಅವಳು ಇಂದಿನವರೆಗೂ ಇಸ್ರಯೇಲರಲ್ಲೇ ವಾಸವಾಗಿದ್ದಾಳೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಸೂಳೆಯಾದ ರಾಹಾಬಳು ಯೆರಿಕೋ ಪಟ್ಟಣವನ್ನು ಸಂಚರಿಸಿನೋಡುವದಕ್ಕೆ ಬಂದಿದ್ದ ಯೆಹೋಶುವನ ದೂತರನ್ನು ಅಡಗಿಸಿಟ್ಟದರಿಂದ ಅವನು ಅವಳನ್ನೂ ಅವಳ ತಂದೆಯ ಮನೆಯವರನ್ನೂ ಅವಳಿಗಿರುವದೆಲ್ಲವನ್ನೂ ಉಳಿಸಿದನು. ಅವಳು ಇಂದಿನವರೆಗೂ ಇಸ್ರಾಯೇಲ್ಯರಲ್ಲಿ ವಾಸವಾಗಿದ್ದಾಳೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಯೆಹೋಶುವನು ವೇಶ್ಯೆಯಾದ ರಾಹಾಬಳನ್ನೂ ಅವಳ ಕುಟುಂಬವನ್ನೂ ಅವಳ ಸಂಗಡ ಇದ್ದ ಬೇರೆ ಜನರನ್ನೂ ಉಳಿಸಿದನು. ಯೆಹೋಶುವನು ಜೆರಿಕೊವಿಗೆ ಕಳಿಸಿಕೊಟ್ಟ ಗೂಢಚಾರರಿಗೆ ರಾಹಾಬಳು ಸಹಾಯ ಮಾಡಿದ್ದಕ್ಕಾಗಿ ಯೆಹೋಶುವನು ಅವರೆಲ್ಲರನ್ನು ಉಳಿಸಿದನು. ರಾಹಾಬಳು ಇಂದಿಗೂ ಸಹ ಇಸ್ರೇಲಿನ ಜನರೊಂದಿಗೆ ವಾಸವಾಗಿದ್ದಾಳೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆದರೆ ಯೆಹೋಶುವನು ವೇಶ್ಯೆಯಾದ ರಾಹಾಬಳನ್ನೂ, ಅವಳ ತಂದೆಯ ಮನೆಯವರನ್ನೂ ಅವಳಿಗಿದ್ದ ಸಮಸ್ತವನ್ನೂ ತಪ್ಪಿಸಿ ಉಳಿಸಿದನು. ಅವಳು ಈ ದಿವಸದವರೆಗೂ ಇಸ್ರಾಯೇಲರಲ್ಲಿ ವಾಸವಾಗಿದ್ದಾಳೆ. ಏಕೆಂದರೆ ಯೆರಿಕೋವನ್ನು ಸಂಚರಿಸಿ ನೋಡಲು, ಯೆಹೋಶುವನು ಕಳುಹಿಸಿದ ಗೂಢಚಾರರನ್ನು ಅವಳು ಬಚ್ಚಿಟ್ಟಿದ್ದಳು. ಅಧ್ಯಾಯವನ್ನು ನೋಡಿ |