ಯೆಹೋಶುವ 6:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅದೇ ಸಮಯದಲ್ಲಿ ಯೆಹೋಶುವನು ಇಸ್ರಾಯೇಲ್ಯರಿಂದ ಪ್ರಮಾಣಮಾಡಿಸಿ ಅವರಿಗೆ “ಈ ಯೆರಿಕೋ ಪಟ್ಟಣವನ್ನು ಕಟ್ಟುವುದಕ್ಕೆ ಕೈ ಹಾಕುವ ಮನುಷ್ಯನು ಯೆಹೋವನ ದೃಷ್ಟಿಯಲ್ಲಿ ಶಾಪಗ್ರಸ್ತನಾಗಿರಲಿ. ಅಂಥವನು ಅದಕ್ಕೆ ಅಸ್ತಿವಾರ ಹಾಕುವಾಗ ತನ್ನ ಹಿರಿಯ ಮಗನನ್ನೂ ಬಾಗಿಲುಗಳನ್ನಿಡುವಾಗ ಕಿರಿಯ ಮಗನನ್ನೂ ಕಳೆದುಕೊಳ್ಳಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅದೇ ಸಮಯಕ್ಕೆ ಯೆಹೋಶುವನು ಇಸ್ರಯೇಲರಿಂದ ಪ್ರಮಾಣ ಮಾಡಿಸಿ ಅವರಿಗೆ, “ಜೆರಿಕೋ ಎಂಬ ಈ ನಗರವನ್ನು ಕಟ್ಟುವುದಕ್ಕೆ ಕೈಹಾಕುವವನು ಸರ್ವೇಶ್ವರನ ದೃಷ್ಟಿಯಲ್ಲಿ ಶಾಪಗ್ರಸ್ತನಾಗಿರಲಿ! ಅಂಥವನು ಅದಕ್ಕೆ ಅಸ್ತಿವಾರ ಹಾಕುವಾಗ ಹಿರಿಯ ಮಗನನ್ನೂ ಬಾಗಿಲುಗಳನ್ನಿಡುವಾಗ ಕಿರಿಯ ಮಗನನ್ನೂ ಕಳೆದುಕೊಳ್ಳಲಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅದೇ ಸಮಯದಲ್ಲಿ ಯೆಹೋಶುವನು ಇಸ್ರಾಯೇಲ್ಯರಿಂದ ಪ್ರಮಾಣಮಾಡಿಸಿ ಅವರಿಗೆ - ಈ ಯೆರಿಕೋ ಪಟ್ಟಣವನ್ನು ಕಟ್ಟುವದಕ್ಕೆ ಕೈ ಹಚ್ಚುವ ಮನುಷ್ಯನು ಯೆಹೋವನ ದೃಷ್ಟಿಯಲ್ಲಿ ಶಾಪಗ್ರಸ್ತನಾಗಿರಲಿ. ಅಂಥವನು ಅದಕ್ಕೆ ಅಸ್ತಿವಾರ ಹಾಕುವಾಗ ತನ್ನ ಹಿರೀ ಮಗನನ್ನೂ ಬಾಗಲುಗಳನ್ನಿಡುವಾಗ ಕಿರೀ ಮಗನನ್ನೂ ಕಳೆದುಕೊಳ್ಳಲಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆ ಸಮಯದಲ್ಲಿ ಯೆಹೋಶುವನು, ಇಸ್ರೇಲಿನ ಜನರಿಂದ ಪ್ರಮಾಣಮಾಡಿಸಿ ಅವರಿಗೆ, “ಈ ಜೆರಿಕೊ ಪಟ್ಟಣವನ್ನು ಪುನಃ ಕಟ್ಟಲು ಪ್ರಯತ್ನಿಸುವವನು ಯೆಹೋವನ ದೃಷ್ಟಿಯಲ್ಲಿ ಶಾಪಗ್ರಸ್ತನಾಗಲಿ. ಈ ನಗರಕ್ಕೆ ಅಡಿಗಲ್ಲನ್ನಿಡುವ ವ್ಯಕ್ತಿಯು ತನ್ನ ಹಿರಿಯ ಮಗನನ್ನು ಕಳೆದುಕೊಳ್ಳಲಿ; ಹೆಬ್ಬಾಗಿಲನ್ನು ನಿಲ್ಲಿಸುವ ವ್ಯಕ್ತಿ ತನ್ನ ಕಿರಿಯ ಮಗನನ್ನು ಕಳೆದುಕೊಳ್ಳಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆ ಕಾಲದಲ್ಲಿ ಯೆಹೋಶುವನು ಅವರಿಗೆ ಆಣೆ ಇಟ್ಟು ಹೇಳಿದ್ದೇನೆಂದರೆ, “ಯೆರಿಕೋವೆಂಬ ಈ ನಗರವನ್ನು ಮತ್ತೆ ಕಟ್ಟುವವನು, ಯೆಹೋವ ದೇವರ ದೃಷ್ಟಿಯಲ್ಲಿ ಶಾಪಗ್ರಸ್ತನಾಗುವನು. “ಅದರ ಅಸ್ತಿವಾರವನ್ನು ಹಾಕುವವನು, ಅವನು ತನ್ನ ಚೊಚ್ಚಲು ಮಗನನ್ನು ಕಳೆದುಕೊಳ್ಳುವನು. ಪಟ್ಟಣದ ಬಾಗಿಲುಗಳನ್ನಿಡುವಾಗ ತನ್ನ ಕಿರಿ ಮಗನನ್ನು ಕಳೆದುಕೊಳ್ಳುವನು.” ಅಧ್ಯಾಯವನ್ನು ನೋಡಿ |