Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 7:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇಸ್ರಾಯೇಲ್ಯರು ನನ್ನ ನಿಬಂಧನೆಯನ್ನು ಮೀರಿ ಪಾಪಿಷ್ಠರಾಗಿದ್ದಾರೆ. ಕೊಳ್ಳೆಯಲ್ಲಿ ಮೀಸಲಾದ ವಸ್ತುಗಳನ್ನು ಕದ್ದು ತಮ್ಮ ಸಾಮಾನುಗಳಲ್ಲಿ ಅಡಗಿಸಿಟ್ಟು ವಂಚಕರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇಸ್ರಯೇಲರು ನನ್ನ ಕಟ್ಟಳೆಯನ್ನು ಮೀರಿ ಪಾಪಿಷ್ಠರಾಗಿದ್ದಾರೆ. ಮೀಸಲಾದ ವಸ್ತುಗಳನ್ನು ತೆಗೆದುಕೊಂಡು ಕಳ್ಳರಾಗಿದ್ದಾರೆ. ಅವುಗಳನ್ನು ತಮ್ಮ ಸಲಕರಣೆಗಳಲ್ಲಿ ಬಚ್ಚಿಟ್ಟುಕೊಂಡು ವಂಚಕರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇಸ್ರಾಯೇಲ್ಯರು ನನ್ನ ನಿಬಂಧನೆಯನ್ನು ಮೀರಿ ಪಾಪಿಷ್ಠರಾಗಿದ್ದಾರೆ. ಮೀಸಲಾದ ವಸ್ತುಗಳನ್ನು ತೆಗೆದುಕೊಂಡು ಕಳ್ಳರಾಗಿ ತಮ್ಮ ಸಾಮಾನುಗಳಲ್ಲಿ ಅಡಗಿಸಿಟ್ಟು ವಂಚಕರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಇಸ್ರೇಲರು ಪಾಪಮಾಡಿದ್ದಾರೆ. ನಾನು ಮಾಡಿಕೊಂಡ ಒಡಂಬಡಿಕೆಯನ್ನು ಮೀರಿದ್ದಾರೆ. ನಾನು ನಾಶಪಡಿಸಲು ಹೇಳಿದ ವಸ್ತುಗಳಲ್ಲಿ ಕೆಲವನ್ನು ಅವರು ತೆಗೆದುಕೊಂಡಿದ್ದಾರೆ; ಅವರು ನನ್ನಿಂದ ಕದ್ದಿದ್ದಾರೆ; ಸುಳ್ಳು ಹೇಳಿದ್ದಾರೆ. ಅವರು ಆ ವಸ್ತುಗಳನ್ನು ತಮಗಾಗಿ ತೆಗೆದುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇಸ್ರಾಯೇಲರು ಪಾಪಮಾಡಿದ್ದಾರೆ. ನಾನು ತಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಮೀರಿದರು. ಅವರು ಅರ್ಪಿತವಾದದ್ದರಲ್ಲಿ ಕೆಲವೊಂದನ್ನು ಕಳವು ಮಾಡಿ ತೆಗೆದುಕೊಂಡು, ವಂಚನೆಮಾಡಿ ಅದನ್ನು ತಮ್ಮ ಸಲಕರಣೆಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 7:11
24 ತಿಳಿವುಗಳ ಹೋಲಿಕೆ  

ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.


ಆಗ ಪೇತ್ರನು ಆಕೆಗೆ, “ನೀವಿಬ್ಬರೂ ಕರ್ತನ ಆತ್ಮನನ್ನು ಪರೀಕ್ಷಿಸುವುದಕ್ಕೆ ಏಕೆ ಒಡಂಬಟ್ಟಿರಿ? ಅಗೋ, ನಿನ್ನ ಗಂಡನನ್ನು ಸಮಾಧಿಮಾಡಿದವರು ಬಂದು ಬಾಗಿಲಿನಲ್ಲಿ ಕಾಲಿಟ್ಟಿದ್ದಾರೆ, ನಿನ್ನನ್ನೂ ಹೊತ್ತುಕೊಂಡು ಹೋಗುವರು” ಎಂದು ಹೇಳಿದನು.


ಅವರು, “ಕೈಸರನದು” ಅಂದರು. ಆಗ ಆತನು ಅವರಿಗೆ, “ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಎಂದು ಹೇಳಿದನು.


ನಾನು ಶಾಪವನ್ನು ಕಳುಹಿಸುತ್ತೇನೆ. ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನನ್ನ ಅಪ್ಪಣೆಯಂತೆ ಅದು ಕಳ್ಳನ ಮನೆಯಲ್ಲಿಯೂ, ನನ್ನ ಹೆಸರೆತ್ತಿ ಸುಳ್ಳು ಸಾಕ್ಷಿಹೇಳುವವನ ಮನೆಯೊಳಗೆ ನುಗ್ಗಿ ಮತ್ತು ಅವನ ಮನೆಯಲ್ಲಿನ ಮರಗಳನ್ನೂ, ಅದರ ಕಲ್ಲುಗಳನ್ನೂ ನಾಶಮಾಡುವುದು’” ಎಂದು ಹೇಳಿದನು.


“ಆದರೆ ಹೀಗೆ ಅವನ ದುರಾಶೆಯ ಪಾಶಕ್ಕೆ ಗುರಿಯಾದವರು ಅವನ ಬಗ್ಗೆ ತಿಳಿದು ಗೇಲಿ, ಅಪಹಾಸ್ಯದ ಲಾವಣಿ ಗೀತೆಗಳನ್ನು ರಚಿಸಿ ಹಾಡುವರು. ‘ಅನ್ಯರ ವಸ್ತುಗಳನ್ನು ಅಡವಿಟ್ಟುಕೊಂಡು ಐಶ್ವರ್ಯ ಸಂಪಾದಿಸುವವನ ಗತಿಯನ್ನು ಏನೆಂದು ಹೇಳುವುದು, ಅವನು ಎಷ್ಟು ಕಾಲ ಹೀಗೆ ಮಾಡುವನು!’


ಅವರು ಆದಾಮನಂತೆ ನನ್ನ ನಿಬಂಧನೆಯನ್ನು ಮೀರಿದ್ದಾರೆ; ಅಲ್ಲಲ್ಲಿ ನನಗೆ ದ್ರೋಹಮಾಡಿದ್ದಾರೆ.


ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈ ಹಿಡಿದು ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.


ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ನಿಯಮಗಳನ್ನು ಬದಲಾಯಿಸಿ, ಶಾಶ್ವತವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಅವರ ಹೆಜ್ಜೆಯಿಂದ ಅಪವಿತ್ರವಾಯಿತು.


ಏಕೆಂದರೆ ಅವರು ತಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆ ಆತನ ಒಡಂಬಡಿಕೆಯನ್ನು ಮೀರಿ, ಆತನ ಸೇವಕನಾದ ಮೋಶೆಯ ಆಜ್ಞೆಗಳಿಗೆ ವಿಧೇಯರಾಗಿ ನಡೆಯಲಿಲ್ಲ. ದೇವರ ಆಜ್ಞೆಗಳಿಗೆ ಕಿವಿಗೊಡದೇ ಅವುಗಳಂತೆ ನಡೆಯದೇ ಇದ್ದುದರಿಂದಲೇ ಹೀಗಾಯಿತು.


ಆದ್ದರಿಂದ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಹೆಚ್ಚಾಯಿತು. ಆತನು, “ಈ ಜನರ ಪೂರ್ವಿಕರಿಗೆ ನಾನು ಕೊಟ್ಟ ಒಡಂಬಡಿಕೆಯನ್ನು ಇವರು ಕೈಕೊಳ್ಳಲಿಲ್ಲ; ನನ್ನ ಮಾತಿಗೆ ಕಿವಿಗೊಡಲಿಲ್ಲ.


ನಿಮ್ಮ ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ ಅನ್ಯದೇವತೆಗಳಿಗೆ ಅಡ್ಡಬಿದ್ದು ಸೇವಿಸಿದರೆ ಯೆಹೋವನ ಕೋಪಾಗ್ನಿಯು ನಿಮ್ಮ ಮೇಲೆ ಉರಿಯುವುದು ಮತ್ತು ಆತನು ಕೊಟ್ಟ ಒಳ್ಳೆಯ ದೇಶದಿಂದ ನೀವು ತೆಗೆದುಹಾಕಲ್ಪಟ್ಟು ಬೇಗನೆ ನಾಶವಾದೀರಿ” ಎಂದನು.


ಯೆಹೂದ ಕುಲದವನೂ ಜೆರಹನ ಗೋತ್ರದವನೂ, ಜಬ್ದೀಯ ಕುಟುಂಬದವನೂ, ಕರ್ಮೀಯ ಮಗನೂ ಆದ ಆಕಾನನು ಯೆಹೋವನಿಗೆ ಮೀಸಲಾಗಿಟ್ಟ ವಸ್ತುಗಳಲ್ಲಿ ಕೆಲವನ್ನು ಕದ್ದುಕೊಂಡದ್ದರಿಂದ ಇಸ್ರಾಯೇಲ್ಯರೆಲ್ಲರು ದ್ರೋಹಿಗಳಾದರು. ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು.


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಯಾವುದೇ ಊರಿನಲ್ಲಿ, ಯಾವ ಪುರುಷನಾಗಲಿ ಅಥವಾ ಸ್ತ್ರೀಯಾಗಲಿ ನಿಮ್ಮ ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ,


“ಯಾವನಾದರೂ ಯೆಹೋವನಿಗೆ ಸಲ್ಲಿಸಬೇಕಾದ ದೇವರ ವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ ಅವನು ಆ ಅಪರಾಧದ ಪ್ರಾಯಶ್ಚಿತ್ತಕ್ಕಾಗಿ ಪೂರ್ಣಾಂಗವಾದ ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಯೆಹೋವನಿಗೆ ಸಮರ್ಪಿಸಬೇಕು ಅಥವಾ ದೇವರ ಸೇವೆಗೆ ನೇಮಕವಾದ ಎರಡು ಬೆಳ್ಳಿ ನಾಣ್ಯ ಅಥವಾ ಹೆಚ್ಚು ಬೆಲೆ ಬಾಳುವ ಟಗರನ್ನು ಹಿಂಡಿನಿಂದ ತಂದು ಅರ್ಪಿಸಬೇಕು.


ಆಗ ಯೆಹೋವನು ಯೆಹೋಶುವನಿಗೆ ಹೇಳಿದ್ದೇನೆಂದರೆ “ಏಳು, ನೀನು ಈ ಪ್ರಕಾರ ಬೋರಲು ಬಿದ್ದಿರುವುದೇಕೆ?


ಆಗ ಸೌಲನು ಪ್ರಜೆಗಳ ಮುಖಂಡರಿಗೆ, “ನೀವೆಲ್ಲರೂ ಇಲ್ಲಿ ಬಂದು, ಈ ಹೊತ್ತು ಪಾಪ ಯಾವುದರಿಂದ ಉಂಟಾಯಿತು ಎಂದು ವಿಚಾರಿಸಿ ಗೊತ್ತುಮಾಡಿರಿ.


ಗೇಹಜಿಯು ಗುಡ್ಡವನ್ನು ಮುಟ್ಟಿದಾಗ, ಎರಡು ಚೀಲ ಬೆಳ್ಳಿಯನ್ನು ತೆಗೆದುಕೊಂಡು ಮನೆಯಲ್ಲಿ ಅಡಗಿಸಿಟ್ಟು, ಆಳುಗಳನ್ನು ಕಳುಹಿಸಿಬಿಟ್ಟನು, ಅವರು ಹೊರಟು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು