Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 7:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆ ಕುಟುಂಬದ ಪುರುಷರನ್ನು ಕರೆದಾಗ ಯೆಹೂದ ಕುಲದವನೂ ಜೆರಹನ ಗೋತ್ರದವನೂ ಜಬ್ದೀಯ ಕುಟುಂಬದವನೂ ಕರ್ಮೀಯನ ಮಗನೂ ಆದ ಆಕಾನನು ಹಿಡಿಯಲ್ಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆ ಕುಟುಂಬದವರಲ್ಲಿ ಒಬ್ಬನಾದ ಮೇಲೆ ಒಬ್ಬನನ್ನು ಕರೆದಾಗ ಆಕಾನನು ಸಿಕ್ಕಿಕೊಂಡನು. ಯೆಹೂದ ಕುಲದವನೂ ಜೆರಹನ ಗೋತ್ರದವನೂ ಜಬ್ದೀಯ ಕುಟುಂಬದವನೂ ಹಾಗೂ ಕರ್ಮೀಯ ಮಗನೂ ಇವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆ ಕುಟುಂಬದ ಪುರುಷರನ್ನು ಕರೆದಾಗ ಯೆಹೂದಕುಲದವನೂ ಜೆರಹನ ಗೋತ್ರದವನೂ ಜಬ್ದೀಯ ಕುಟುಂಬದವನೂ ಕರ್ಮೀಯ ಮಗನೂ ಆದ ಆಕಾನನು ಹಿಡಿಯಲ್ಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆಗ ಯೆಹೋಶುವನು ಆ ಕುಟುಂಬದ ಎಲ್ಲ ಗಂಡಸರನ್ನು ಯೆಹೋವನ ಮುಂದೆ ಬರಲು ಹೇಳಿದನು. ಯೆಹೋವನು ಆಗ ಕರ್ಮೀಯ ಮಗನಾದ ಆಕಾನನನ್ನು ಸೂಚಿಸಿದನು. ಕರ್ಮೀಯು ಜಬ್ದೀಯ ಮಗನಾಗಿದ್ದನು, ಜಬ್ದೀಯು ಜೆರಹನ ಮಗನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವನ ಕುಟುಂಬಗಳು ಕುಟುಂಬಗಳಾಗಿ, ವ್ಯಕ್ತಿಗಳು ವ್ಯಕ್ತಿಗಳಾಗಿ ಬಂದಾಗ, ಜಿಮ್ರಿಯ ಮಗನಾದ ಕರ್ಮೀಯ ಮಗನಾದ ಆಕಾನನೂ ಯೆಹೂದ ಕುಲದವನೂ ಜೆರಹನ ಗೋತ್ರದವನೂ ಸಿಕ್ಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 7:18
6 ತಿಳಿವುಗಳ ಹೋಲಿಕೆ  

“ಆದರೆ ನೀವು ಹಾಗೆ ಮಾಡದೆ ಹೋದರೆ, ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವರಾಗುವಿರಿ ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವುದು ಎಂದು ತಿಳಿದುಕೊಳ್ಳಿರಿ.


ಕಳ್ಳನು ಸಿಕ್ಕಿಬಿದ್ದು ಹೇಗೆ ನಾಚಿಕೆಪಡುವನೋ, ಹಾಗೆಯೇ ಇಸ್ರಾಯೇಲ್ ವಂಶವು ನಾಚಿಕೆಪಡುವುದು. ಅವರು ಮರಕ್ಕೆ, “ನೀನು ನನ್ನ ತಂದೆ” ಎಂತಲೂ; ಕಲ್ಲಿಗೆ, “ನೀನು ಹೆತ್ತ ತಾಯಿ” ಎಂತಲೂ ಹೇಳುವ ಪ್ರಜೆಗಳು. ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು ನಾಚಿಕೆಗೆ ಈಡಾಗುವರು.


ಅಮಂಗಳವು ಪಾಪಿಗಳನ್ನು ಹಿಂಬಾಲಿಸುವುದು, ಮಂಗಳವು ಸಜ್ಜನರಿಗೆ ಪ್ರತಿಫಲವಾಗುವುದು.


ಸೌಲನು ಪುನಃ, “ನಮ್ಮಿಬ್ಬರೊಳಗೆ ಚೀಟು ಹಾಕಿರಿ” ಎಂದು ಹೇಳಿದನು. ಹಾಗೆಯೇ ಮಾಡಿದಾಗ ಚೀಟು ಯೋನಾತಾನನಿಗೆ ಬಿದ್ದಿತು.


ಅದರ ಗೋತ್ರಗಳನ್ನು ಕರೆದಾಗ ಜೆರಹನ ಗೋತ್ರವು ಸಿಕ್ಕಿಕೊಂಡಿತು. ಅ ಗೋತ್ರದ ಕುಟುಂಬಗಳನ್ನು ಕರೆದಾಗ ಜಬ್ದೀಯ ಕುಟುಂಬವು ಹಿಡಿಯಲ್ಪಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು