ಯೆಹೋಶುವ 7:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920-21 ಆಕಾನನು, “ನಾನು ಇಂಥ ಕಾರ್ಯವನ್ನು ಮಾಡಿ ಇಸ್ರಾಯೇಲಿನ ದೇವರಾದ ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡ್ದಿದು ನಿಜ. ನಾನು ಕೊಳ್ಳೆಯಲ್ಲಿ ಶಿನಾರ್ ದೇಶದ ಒಂದು ಉತ್ತಮವಾದ ನಿಲುವಂಗಿಯನ್ನೂ ಇನ್ನೂರು ರೂಪಾಯಿ ತೂಕದ ಬೆಳ್ಳಿಯನ್ನೂ ಐವತ್ತು ರೂಪಾಯಿ ತೂಕದ ಬಂಗಾರದ ಗಟ್ಟಿಯನ್ನೂ ಕಂಡು ಅದನ್ನು ಮೋಹಿಸಿ ಆಸೆಯಿಂದ ತೆಗೆದುಕೊಂಡೆನು. ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ಹೂತಿಟ್ಟಿದ್ದೇನೆ; ಬೆಳ್ಳಿಯು ಅಂಗಿಯ ಕೆಳಗಿರುತ್ತದೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅವನಿಗೆ ಆಕಾನನು, “ನಾನು ಇಂಥ ಕಾರ್ಯವನ್ನು ಮಾಡಿ ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದ್ದು ನಿಜ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20-21 ಆಕಾನನು ಯೆಹೋಶುವನಿಗೆ - ನಾನು ಕೊಳ್ಳೆಯಲ್ಲಿ ಶಿನಾರ್ ದೇಶದ ಒಂದು ಉತ್ತಮವಾದ ನಿಲುವಂಗಿಯನ್ನೂ ಇನ್ನೂರು ರೂಪಾಯಿ ತೂಕದ ಬೆಳ್ಳಿಯನ್ನೂ ಐವತ್ತು ರೂಪಾಯಿ ತೂಕದ ಬಂಗಾರದ ಗಟ್ಟಿಯನ್ನೂ ಕಂಡು ಅದನ್ನು ಆಶೆಯಿಂದ ತೆಗೆದುಕೊಂಡೆನು. ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ಹುಗಿದಿಟ್ಟಿದ್ದೇನೆ; ಬೆಳ್ಳಿಯು ಅಂಗಿಯ ಕೆಳಗಿರುತ್ತದೆ. ನಾನು ನಿಜವಾಗಿ ಇಂಥದನ್ನು ಮಾಡಿ ಇಸ್ರಾಯೇಲ್ ದೇವರಾದ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇನೆ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆಗ ಆಕಾನನು, “ಇದು ಸತ್ಯ. ನಾನು ಇಸ್ರೇಲಿನ ದೇವರಾದ ಯೆಹೋವನಿಗೆ ವಿರೋಧವಾಗಿ ಪಾಪಮಾಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆಕಾನನು ಯೆಹೋಶುವನಿಗೆ, “ನಿಜವಾಗಿ ನಾನು ಇಸ್ರಾಯೇಲ್ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿ, ಇಂಥಿಂಥವುಗಳನ್ನು ಮಾಡಿದ್ದೇನೆ. ಅಧ್ಯಾಯವನ್ನು ನೋಡಿ |