ಯೆಹೋಶುವ 7:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅವನ ಮೇಲೆ ಕಲ್ಲುಗಳ ಒಂದು ದೊಡ್ಡ ರಾಶಿಯು ನಿರ್ಮಾಣವಾಯಿತು. ಅದು ಇಂದಿನ ವರೆಗೂ ಇದೆ. ಆಗ ಯೆಹೋವನ ಕೋಪಾಗ್ನಿ ತಣ್ಣಗಾಯಿತು. ಈ ಸಂಗತಿಯ ದೆಸೆಯಿಂದ ಆ ಸ್ಥಳಕ್ಕೆ ಇಂದಿನವರೆಗೂ ಆಕೋರಿನ ತಗ್ಗು ಎಂಬ ಹೆಸರಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅವನ ಮೇಲೆ ಕಲ್ಲುಗಳ ಒಂದು ದೊಡ್ಡ ಗುಡ್ಡೆಯನ್ನು ಹಾಕಿದರು. ಅದು ಇಂದಿನವರೆಗೂ ಇದೆ. ಬಳಿಕ ಸರ್ವೇಶ್ವರನ ಕೋಪಾಗ್ನಿ ತಣ್ಣಗಾಯಿತು. ಈ ಘಟನೆಯಿಂದಾಗಿ ಆ ಸ್ಥಳಕ್ಕೆ ‘ಆಕೋರಿನ ಕಣಿವೆ’ ಎಂಬ ಹೆಸರು ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅವನ ಮೇಲೆ ಕಲ್ಲುಗಳ ಒಂದು ದೊಡ್ಡ ಕುಪ್ಪೆಯನ್ನು ಹಾಕಿದರು. ಅದು ಇಂದಿನವರೆಗೂ ಅದೆ. ಆಗ ಯೆಹೋವನ ರೋಷಾಗ್ನಿಯು ಅಡಗಿಹೋಯಿತು. ಈ ಸಂಗತಿಯ ದೆಸೆಯಿಂದ ಆ ಸ್ಥಳಕ್ಕೆ ಇಂದಿನವರೆಗೂ ಆಕೋರಿನ ತಗ್ಗು ಎಂಬ ಹೆಸರಿರುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆಕಾನನನ್ನು ಸುಟ್ಟ ಬಳಿಕ ಅವರು ಅವನ ದೇಹದ ಮೇಲೆ ಕಲ್ಲುಗಳ ಒಂದು ದೊಡ್ಡ ಕುಪ್ಪೆಯನ್ನು ಹಾಕಿದರು. ಆ ಕುಪ್ಪೆಯು ಇಂದಿಗೂ ಅಲ್ಲಿದೆ. ಹೀಗೆ ದೇವರು ಆಕಾನನನ್ನು ಶಿಕ್ಷಿಸಿದನು. ಅದಕ್ಕಾಗಿ ಆ ಕಣಿವೆಗೆ “ಆಕೋರ್ ಕಣಿವೆ” ಎಂಬ ಹೆಸರು ಬಂದಿತು. ಬಳಿಕ ಯೆಹೋವನಿಗೆ ಜನರ ಮೇಲಿದ್ದ ಕೋಪ ಶಮನವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅವರ ಮೇಲೆ ಕಲ್ಲುಕುಪ್ಪೆ ಕೂಡಿಸಿದರು. ಅದು ಈ ದಿನದವರೆಗೂ ಇದೆ. ಆಗ ಯೆಹೋವ ದೇವರು ತಮ್ಮ ಕೋಪದ ಉರಿಯನ್ನು ಬಿಟ್ಟು ತಿರುಗಿದರು. ಆದ್ದರಿಂದ ಆ ಸ್ಥಳವು ಈವರೆಗೂ ಆಕೋರಿನ ಕಣಿವೆ ಎಂದು ಕರೆಯಲಾಗುತ್ತದೆ. ಅಧ್ಯಾಯವನ್ನು ನೋಡಿ |
ಐಗುಪ್ತ್ಯರು ನಿನ್ನ ವಿಷಯದಲ್ಲಿ, ‘ಯೆಹೋವನು ಕೇಡು ಮಾಡಬೇಕೆಂಬ ಅಭಿಪ್ರಾಯದಿಂದಲೇ ಇಸ್ರಾಯೇಲರನ್ನು ಇಲ್ಲಿಂದ ಕರೆದುಕೊಂಡು ಹೋದನಲ್ಲಾ. ಅವರನ್ನು ಬೆಟ್ಟಗಳಲ್ಲಿ ಸಾಯಿಸಲಿಕ್ಕೂ ಭೂಮಿಯಿಂದ ನಿರ್ಮೂಲ ಮಾಡುವುದಕ್ಕೂ ಅವರನ್ನು ಕರೆದುಕೊಂಡು ಹೋದನೆಂದು ಹೇಳಿಕೊಳ್ಳುವುದೇತಕ್ಕೆ?’ ನೀನು ರೋಷಾಗ್ನಿಯನ್ನು ಬಿಟ್ಟು ನಿನ್ನ ಪ್ರಜೆಗಳಿಗೆ ಕೆಡುಕನ್ನು ಮಾಡದೆ ಮನಸ್ಸನ್ನು ಬದಲು ಮಾಡಿಕೋ.
ಆದುದರಿಂದ ನಮ್ಮ ಹಿರಿಯರು, ನಾಯಕರು ಸರ್ವಸಮೂಹಕ್ಕೋಸ್ಕರ ಕಾರ್ಯವನ್ನು ವಹಿಸಿಕೊಳ್ಳಲಿ; ನಮ್ಮ ನಮ್ಮ ಊರುಗಳಲ್ಲಿ ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರೆಲ್ಲರೂ ನೇಮಿತವಾದ ದಿನದಲ್ಲಿ ತಮ್ಮ ಊರಿನ ಹಿರಿಯರೊಡನೆಯೂ ಮತ್ತು ನ್ಯಾಯಾಧಿಪತಿಗಳೊಡನೆಯೂ ಇಲ್ಲಿಗೆ ಸೇರಿ ಬರಲಿ. ನಮ್ಮ ದೇವರು ಈ ವಿಷಯದಲ್ಲಿ ನಮ್ಮ ಮೇಲೆ ಮಾಡಿಕೊಂಡಿರುವ ಉಗ್ರಕೋಪವು ಹೀಗೆ ಪರಿಹಾರವಾಗಲಿ” ಎಂದು ಉತ್ತರಕೊಟ್ಟರು.