ಯೆಹೋಶುವ 7:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಹಿಂದಿರುಗಿ ಬಂದು ಯೆಹೋಶುವನಿಗೆ “ಎಲ್ಲಾ ಜನರು ಹೋಗುವುದು ಅವಶ್ಯವಿಲ್ಲ; ಎರಡು ಅಥವಾ ಮೂರು ಸಾವಿರ ಮಂದಿ ಹೋದರೆ ಸಾಕು. ಅವರೇ ಪಟ್ಟಣವನ್ನು ಜಯಿಸಬಹುದು. ಎಲ್ಲರನ್ನೂ ಕಳುಹಿಸಿ ಸುಮ್ಮನೆ ದಣಿಸುವುದೇತಕೆ? ಅವರು ಕಡಿಮೆ ಜನರಿದ್ದಾರೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಬಂದ ಬಳಿಕ ಯೆಹೋಶುವನಿಗೆ, “ಎಲ್ಲಾ ಜನರು ಹೋಗುವುದು ಅವಶ್ಯವಿಲ್ಲ, ಎರಡು ಅಥವಾ ಮೂರು ಸಾವಿರ ಮಂದಿ ಹೋದರೆ ಸಾಕು. ಅವರೇ ಆ ನಗರವನ್ನು ಜಯಿಸಬಹುದು. ಎಲ್ಲರನ್ನು ಕಳುಹಿಸಿ ಸುಮ್ಮನೆ ದಣಿಸುವುದೇಕೆ? ಅಲ್ಲಿ ಸ್ವಲ್ಪಮಂದಿ ಮಾತ್ರ ಇದ್ದಾರೆ,” ಎಂದು ವರದಿ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಹಿಂದಿರುಗಿ ಬಂದು ಯೆಹೋಶುವನಿಗೆ - ಎಲ್ಲಾ ಜನರು ಹೋಗುವದು ಅವಶ್ಯವಿಲ್ಲ; ಎರಡು ಅಥವಾ ಮೂರು ಸಾವಿರ ಮಂದಿ ಹೋದರೆ ಸಾಕು. ಅವರು ಪಟ್ಟಣವನ್ನು ಜಯಿಸಬಹುದು. ಎಲ್ಲರನ್ನೂ ಕಳುಹಿಸಿ ಸುಮ್ಮನೆ ದಣಿಸುವದೇಕೆ? ಅವರು ಸ್ವಲ್ಪ ಮಂದಿ ಮಾತ್ರ ಇರುತ್ತಾರೆ ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ತರುವಾಯ ಆ ಜನರು ಯೆಹೋಶುವನಲ್ಲಿಗೆ ಬಂದು, “ಆಯಿ ಒಂದು ದುರ್ಬಲ ಪ್ರದೇಶವಾಗಿದೆ, ಆ ಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ನಮ್ಮ ಎಲ್ಲ ಜನರು ಬೇಕಾಗುವುದಿಲ್ಲ. ಅಲ್ಲಿ ಯುದ್ಧ ಮಾಡಲು ಎರಡು ಅಥವಾ ಮೂರುಸಾವಿರ ಜನರನ್ನು ಕಳುಹಿಸಿದರೆ ಸಾಕು, ಇಡೀ ಸೈನ್ಯವನ್ನು ಉಪಯೋಗಿಸುವ ಅವಶ್ಯಕತೆ ಇಲ್ಲ. ಅಲ್ಲಿ ನಮ್ಮ ವಿರುದ್ಧ ಹೋರಾಡಬಲ್ಲ ಕೆಲವೇ ಜನರು ಇದ್ದಾರೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೆಹೋಶುವನ ಬಳಿಗೆ ತಿರುಗಿಬಂದು ಅವನಿಗೆ, “ಜನರೆಲ್ಲರೂ ಹೋಗುವ ಅವಶ್ಯಕತೆ ಇಲ್ಲ, ಆಯಿ ಎಂಬ ಪಟ್ಟಣವನ್ನು ಹೊಡೆಯುವುದಕ್ಕೆ ಎರಡು ಅಥವಾ ಮೂರು ಸಾವಿರ ಜನರು ಹೋದರೆ ಸಾಕು. ಸೈನ್ಯವನ್ನು ಕಳುಹಿಸಿ ದಣಿಸಬೇಡ. ಏಕೆಂದರೆ ಸ್ವಲ್ಪ ಜನರು ಮಾತ್ರ ಅಲ್ಲಿ ಇದ್ದಾರೆ,” ಎಂದರು. ಅಧ್ಯಾಯವನ್ನು ನೋಡಿ |