ಯೆಹೋಶುವ 7:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಯಿ ಊರಿನವರು ಅವರನ್ನು ಊರ ಬಾಗಿಲಿನಿಂದ ಕಲ್ಲುಗಣಿಗಳವರೆಗೂ ಹಿಂದಟ್ಟಿ ಇಳಿನೆಲದಲ್ಲಿ ಅವರನ್ನು ಸೋಲಿಸಿ ಸುಮಾರು ಮೂವತ್ತಾರು ಮಂದಿಯನ್ನು ಕೊಂದುಹಾಕಿದರು. ಇದರಿಂದ ಇಸ್ರಾಯೇಲರ ಧೈರ್ಯ ಕುಂದಿಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆಯಿ ಊರಿನವರು ಅವರನ್ನು ಊರ ಬಾಗಿಲಿನಿಂದ ಕಲ್ಲುಗಣಿಯವರೆಗೂ ಹಿಂದಟ್ಟಿ ಇಳಿನೆಲದಲ್ಲಿ ಅವರನ್ನು ಸೋಲಿಸಿ ಸುಮಾರು ಮೂವತ್ತಾರು ಮಂದಿಯನ್ನು ಕೊಂದುಹಾಕಿದರು. ಇದರಿಂದ ಇಸ್ರಯೇಲರ ಧೈರ್ಯ ಕರಗಿ ನೀರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಯಿ ಎಂಬ ಊರಿನವರು ಅವರನ್ನು ಊರುಬಾಗಲಿನಿಂದ ಕಲ್ಲುಗಣಿಯವರೆಗೂ ಹಿಂದಟ್ಟಿ ಇಳಿ ನೆಲದಲ್ಲಿ ಅವರನ್ನು ಸೋಲಿಸಿ ಸುಮಾರು ಮೂವತ್ತಾರು ಮಂದಿಯನ್ನು ಹತಮಾಡಿದರು. ಇದರಿಂದ ಇಸ್ರಾಯೇಲ್ಯರ ಧೈರ್ಯವು ಕರಗಿ ನೀರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಯಿ ಎಂಬ ಪಟ್ಟಣದವರು ಇವರಲ್ಲಿ ಹೆಚ್ಚು ಕಡಿಮೆ ಮೂವತ್ತಾರು ಮಂದಿಯನ್ನು ಕೊಂದುಹಾಕಿದರು. ಪಟ್ಟಣದ ಬಾಗಿಲಿನಿಂದ ಪ್ರಾರಂಭಿಸಿ ಶೆಬಾರಿಮಿನವರೆಗೂ ಅವರನ್ನು ಹಿಂದಟ್ಟಿ, ಅವರನ್ನು ಹೊಡೆದರು. ಆದ್ದರಿಂದ ಜನರ ಹೃದಯವು ಕರಗಿ ನೀರಿನಂತಾಯಿತು. ಅಧ್ಯಾಯವನ್ನು ನೋಡಿ |