Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 7:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಯೆಹೋಶುವನೂ ಮತ್ತು ಇಸ್ರಾಯೇಲ್ಯರ ಹಿರಿಯರೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಭೂದಿಯನ್ನು ಹಾಕಿಕೊಂಡು ಸಾಯಂಕಾಲದವರೆಗೂ ಯೆಹೋವನ ಮಂಜೂಷದ ಮುಂದೆ ಬೋರಲು ಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ಯೆಹೋಶುವನು ಮತ್ತು ಇಸ್ರಯೇಲರ ಹಿರಿಯರು ದುಃಖ ತಾಳಲಾರದೆ ತಮ್ಮ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಬೂದಿಯನ್ನು ಸುರಿದುಕೊಂಡು ಸಾಯಂಕಾಲದವರೆಗೆ ಸರ್ವೇಶ್ವರನ ಮಂಜೂಷದ ಮುಂದೆ ಅಧೋಮುಖರಾಗಿ ಬಿದ್ದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಗ ಯೆಹೋಶುವನೂ ಇಸ್ರಾಯೇಲ್ಯರ ಹಿರಿಯರೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು ತಲೆಯ ಮೇಲೆ ಬೂದಿಯನ್ನು ಹಾಕಿಕೊಂಡು ಸಾಯಂಕಾಲದವರೆಗೂ ಯೆಹೋವನ ಮಂಜೂಷದ ಮುಂದೆ ಬೋರಲಬಿದ್ದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಇದನ್ನು ಕೇಳಿ ಯೆಹೋಶುವನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಪವಿತ್ರ ಪೆಟ್ಟಿಗೆಯ ಮುಂದೆ ನೆಲದ ಮೇಲೆ ಬೋರಲಾಗಿ ಬಿದ್ದುಕೊಂಡನು. ಸಾಯಂಕಾಲದವರೆಗೂ ಯೆಹೋಶುವನು ಹಾಗೆಯೇ ಇದ್ದನು. ಇಸ್ರೇಲಿನ ಹಿರಿಯರೂ ಹಾಗೆಯೇ ಮಾಡಿದರು. ಅವರು ದುಃಖದಿಂದ ತಮ್ಮ ತಲೆಯ ಮೇಲೆ ಧೂಳನ್ನು ಸುರಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡನು. ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಂಜೆಯವರೆಗೆ ಯೆಹೋವ ದೇವರ ಮಂಜೂಷದ ಮುಂದೆ ನೆಲದ ಮೇಲೆ ಬೋರಲು ಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 7:6
30 ತಿಳಿವುಗಳ ಹೋಲಿಕೆ  

ರೂಬೇನನು ತಿರುಗಿ ಆ ಗುಂಡಿಯ ಹತ್ತಿರಕ್ಕೆ ಬಂದು ಅದರಲ್ಲಿ ಯೋಸೇಫನು ಇಲ್ಲದೆ ಇರುವುದನ್ನು ಕಂಡು ತನ್ನ ಬಟ್ಟೆಗಳನ್ನು ಹರಿದುಕೊಂಡನು.


ಯಾಕೋಬನು ತನ್ನ ಬಟ್ಟೆಗಳನ್ನು ಹರಿದುಕೊಂಡು ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗಾಗಿ ಬಹು ದಿನಗಳವರೆಗೂ ದುಃಖಪಟ್ಟನು.


ಚೀಯೋನ್ ನಗರಿಯ ಹಿರಿಯರು ನೆಲದಲ್ಲಿ ಮೌನವಾಗಿ ಕುಕ್ಕರಿಸಿದ್ದಾರೆ; ತಲೆಯ ಮೇಲೆ ಧೂಳನ್ನು ತೂರಿಕೊಂಡು, ಗೋಣಿ ತಟ್ಟನ್ನು ಸುತ್ತಿಕೊಂಡಿದ್ದಾರೆ; ಯೆರೂಸಲೇಮಿನ ಕನ್ಯೆಯರು ತಲೆಗಳನ್ನು ನೆಲಕ್ಕೆ ಬೊಗ್ಗಿಸಿದ್ದಾರೆ.


ಆಗ ಅರಸನು ಎದ್ದು ತನ್ನ ಬಟ್ಟೆಗಳನ್ನು ಹರಿದುಕೊಂಡು ನೆಲದ ಮೇಲೆ ಬಿದ್ದನು. ಅವನ ಸೇವಕರೆಲ್ಲರೂ ತಮ್ಮ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅವನ ಹತ್ತಿರ ನಿಂತರು.


ಕಾನಾನ್ ದೇಶವನ್ನು ಸಂಚರಿಸಿ ನೋಡಿದವರಲ್ಲಿ ನೂನನ ಮಗನಾದ ಯೆಹೋಶುವನು ಮತ್ತು ಯೆಫುನ್ನೆಯ ಮಗನಾದ ಕಾಲೇಬನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡರು.


ಅನಂತರ ಅವರು ತಮ್ಮ ತಲೆಗಳ ಮೇಲೆ ಮಣ್ಣನ್ನು ಸುರಿದುಕೊಂಡು, ‘ಅಯ್ಯೋ ಅಯ್ಯೋ ಸಮುದ್ರದ ಮೇಲೆ ಹಡಗುಗಳನ್ನು ಹೊಂದಿದವರೆಲ್ಲರೂ ಅವಳ ಅಮೂಲ್ಯ ದ್ರವ್ಯಗಳಿಂದಲೇ ಐಶ್ವರ್ಯವಂತರಾದರಲ್ಲಾ, ಇವಳು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ’” ಎಂದು ಗೋಳಾಡುತ್ತಾ ದುಃಖಿಸುವರು.


ಇದನ್ನು ಕೇಳಿ ಅಪೊಸ್ತಲರಾದ ಬಾರ್ನಬ ಮತ್ತು ಪೌಲರು ತಮ್ಮ ವಸ್ತ್ರಗಳನ್ನು ಹರಿದುಕೊಂಡು ಜನರ ಗುಂಪಿನೊಳಗೆ ನುಗ್ಗಿ ಹೀಗೆಂದು ಕೂಗಿ ಹೇಳಿದರು;


ಅವರು ದೂರದಿಂದ ಕಣ್ಣೆತ್ತಿ ನೋಡಿ ಯೋಬನ ಗುರುತನ್ನು ಹಿಡಿಯಲಾರದೆ ಹೋದ ಕಾರಣ ಗಟ್ಟಿಯಾಗಿ ಅತ್ತು ತಮ್ಮ ತಮ್ಮ ಮೇಲಂಗಿಗಳನ್ನು ಹರಿದುಕೊಂಡು, ಮಣ್ಣನ್ನು ಮೇಲಕ್ಕೆ ತೂರಿ ತಮ್ಮ ತಲೆಯ ಮೇಲೆ ಸುರಿದುಕೊಂಡರು.


ಆಗ ಯೋಬನು ಎದ್ದು ಮೇಲಂಗಿಯನ್ನು ಹರಿದುಕೊಂಡು, ತಲೆ ಬೋಳಿಸಿಕೊಂಡು ನೆಲದ ಮೇಲೆ ಅಡ್ಡಬಿದ್ದು ದೇವರನ್ನು ಆರಾಧಿಸಿ,


ಮೊರ್ದೆಕೈಯು ನಡೆದದ್ದನ್ನೆಲ್ಲಾ ಕೇಳಿದಾಗ ತನ್ನ ಬಟ್ಟೆಗಳನ್ನು ಹರಿದುಕೊಂಡು, ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ತಲೆಯ ಮೇಲೆ ಹಾಕಿಕೊಂಡು, ಪಟ್ಟಣದ ಮಧ್ಯದಲ್ಲಿ ಹೋಗುತ್ತಾ ಮಹಾದುಃಖದಿಂದ ಗೋಳಾಡಿದನು.


ದಾವೀದನು ಮಗುವಿಗೋಸ್ಕರ ದೇವರನ್ನು ಪ್ರಾರ್ಥಿಸುತ್ತಾ, ಉಪವಾಸ ಮಾಡುತ್ತಾ, ಒಳಗಿನ ಕೋಣೆಗೆ ಹೋಗಿ ರಾತ್ರಿಯೆಲ್ಲಾ ನೆಲದ ಮೇಲೆಯೇ ಬಿದ್ದುಕೊಂಡಿದ್ದನು.


ತಮ್ಮ ಬಟ್ಟೆಗಳನ್ನು ಹರಿದುಕೊಂಡು, ಗೋಳಾಡಿ, ಅತ್ತು ಸಾಯಂಕಾಲದವರೆಗೆ ಉಪವಾಸ ಮಾಡಿದರು.


ಅದೇ ದಿನ ಒಬ್ಬ ಬೆನ್ಯಾಮೀನನು ರಣರಂಗದಿಂದ ತಪ್ಪಿಸಿಕೊಂಡು ತನ್ನ ಬಟ್ಟೆಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣುಹಾಕಿಕೊಂಡು ಶೀಲೋವಿಗೆ ಬಂದು


ಅವರು ಬೇತೇಲಿಗೆ ಬಂದು ಸಾಯಂಕಾಲದವರೆಗೆ ದೇವರ ಮುಂದೆ ಕುಳಿತು, ಗಟ್ಟಿಯಾಗಿ ಅಳುತ್ತಾ,


ಆಗ ಇಸ್ರಾಯೇಲ್ಯರೆಲ್ಲರೂ, ಎಲ್ಲಾ ಜನರೂ ಬೇತೇಲಿಗೆ ಹೋಗಿ ಅಲ್ಲಿ ಯೆಹೋವನ ಮುಂದೆ ಅಳುತ್ತಾ ಬಿದ್ದು ಸಾಯಂಕಾಲದ ವರೆಗೆ ಉಪವಾಸಮಾಡಿದರು. ಅಲ್ಲಿ ಅವರು ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿದರು.


ಇಸ್ರಾಯೇಲ್ಯರು ಹೋಗಿ ಯೆಹೋವನ ಮುಂದೆ ಅಳುತ್ತಾ, “ನಾವು ತಿರುಗಿ ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಮಾಡಬೇಕೋ?” ಎಂದು ಕೇಳಲು, ಆತನು, “ಹೋಗಿ ಯುದ್ಧಮಾಡಿರಿ” ಅಂದನು.


“ನೀವಿಬ್ಬರೂ ಸಮೂಹದವರಲ್ಲಿ ಇರದೆ ಬೇರೆ ನಿಲ್ಲಬೇಕು. ನಾನು ಒಂದು ಕ್ಷಣಮಾತ್ರದಲ್ಲಿ ಅವರನ್ನು ದಹಿಸಿಬಿಡುತ್ತೇನೆ” ಎಂದು ಹೇಳಿದನು. ಆಗ ಮೋಶೆ ಮತ್ತು ಆರೋನರು ಬೋರಲುಬಿದ್ದರು.


ಅವರು ಬೋರಲುಬಿದ್ದು, “ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ, ಇವರಲ್ಲಿ ದೋಷಿಯಾದವನು ಒಬ್ಬನೇ ಆಗಿರಲಾಗಿ ಸರ್ವಸಮೂಹದವರೆಲ್ಲರ ಮೇಲೆ ಕೋಪಗೊಳ್ಳಬಹುದೋ?” ಎಂದು ಬಿನ್ನೈಸಿದನು.


ಯೆಹೋಶುವನು “ಅಯ್ಯೋ, ಕರ್ತನೇ, ಯೆಹೋವನೇ, ನೀನು ಈ ಜನರನ್ನು ಯೊರ್ದನ್ ಹೊಳೆ ದಾಟಿಸಿದ್ದೇಕೆ? ನಮ್ಮನ್ನು ಅಮೋರಿಯರ ಕೈಗೊಪ್ಪಿಸಿ ನಾಶ ಮಾಡಬೇಕೆಂದಿರುವಿಯಾ? ನಾವು ಇಷ್ಟೇ ಸಾಕೆಂದು ಯೊರ್ದನ್ ನದಿಯ ಆಚೆ ಕಡೆಯಲ್ಲೇ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು.


ಸೌಲನೂ ಅವನ ಮಗನಾದ ಯೋನಾತಾನನೂ, ಯೆಹೋವನ ಪ್ರಜೆಗಳಾದ ಇಸ್ರಾಯೇಲರೂ ಕತ್ತಿಯಿಂದ ಸಂಹೃತರಾದದ್ದಕ್ಕಾಗಿ ದಾವೀದನೂ ಅವನ ಜನರೂ


ಅರಸನು ಧರ್ಮೋಪದೇಶಗ್ರಂಥದ ವಾಕ್ಯಗಳನ್ನು ಕೇಳಿದಾಗ, ಬಟ್ಟೆಗಳನ್ನು ಹರಿದುಕೊಂಡನು.


ಅರಸನು ಧರ್ಮಶಾಸ್ತ್ರದ ವಾಕ್ಯಗಳನ್ನು ಕೇಳಿದಾಗ ಬಟ್ಟೆಗಳನ್ನು ಹರಿದುಕೊಂಡನು.


ಆದಕಾರಣ ನಾನು ಆಡಿದ್ದನ್ನು ತಿರಸ್ಕರಿಸಿ ಧೂಳಿನಲ್ಲಿಯೂ, ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ” ಎಂದನು.


ಆಕೆಯನ್ನು ಕಾಣುತ್ತಲೇ ಅವನು ತನ್ನ ಬಟ್ಟೆಯನ್ನು ಹರಿದುಕೊಂಡು, “ಅಯ್ಯೋ, ನನ್ನ ಮಗಳೇ, ನೀನು ನನ್ನನ್ನು ಕುಗ್ಗಿಸೇಬಿಟ್ಟೆಯಲ್ಲಾ; ನನಗೆ ಮಹಾಸಂಕಟವನ್ನು ಉಂಟುಮಾಡಿದಿ. ನಾನು ಬಾಯ್ದೆರೆದು ಯೆಹೋವನಿಗೆ ಹರಕೆಮಾಡಿದ್ದೇನೆ; ಅದಕ್ಕೆ ಹಿಂದೆಗೆಯಲಾರೆನು” ಎಂದು ಕೂಗಿಕೊಳ್ಳಲು


ಮೂರನೆಯ ದಿನದಲ್ಲಿ ಸೌಲನ ಠಾಣ್ಯದಿಂದ ಒಬ್ಬ ಮನುಷ್ಯನು ದಾವೀದನ ಬಳಿಗೆ ಬಂದು ನೆಲದ ಮಟ್ಟಿಗೆ ಬಾಗಿ ನಮಸ್ಕರಿಸಿದನು. ಅವನು ವಸ್ತ್ರಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದನು.


ತಾಮಾರಳು ತಲೆಯ ಮೇಲೆ ಬೂದಿ ಹಾಕಿಕೊಂಡು ನಿಲುವಂಗಿಯನ್ನು ಹರಿದುಕೊಂಡು ಕೈಗಳನ್ನು ತಲೆಯ ಮೇಲಿಟ್ಟು ಗೋಳಾಡುತ್ತಾ ಹೋದಳು.


ಎಜ್ರನು ದೇವಾಲಯದ ಮುಂದೆ ಅಡ್ಡಬಿದ್ದು ಅಳುತ್ತಾ ವಿಜ್ಞಾಪನೆಯನ್ನೂ, ಪಾಪನಿವೇದನೆಯನ್ನೂ ಮಾಡುತ್ತಿರುವಷ್ಟರಲ್ಲಿ ಇಸ್ರಾಯೇಲರ ಗಂಡಸರು, ಹೆಂಗಸರೂ ಮತ್ತು ಮಕ್ಕಳೂ ಮಹಾಸಮೂಹವಾಗಿ ಅವನ ಬಳಿಗೆ ಕೂಡಿಬಂದರು. ಅಲ್ಲಿನ ಜನರು ಬಹಳವಾಗಿ ದುಃಖಿಸುತ್ತಿದ್ದರು.


ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಇಸ್ರಾಯೇಲರು ಉಪವಾಸವಾಗಿದ್ದು ಗೋಣೀತಟ್ಟನ್ನು ಕಟ್ಟಿಕೊಂಡು ತಮ್ಮ ಮೇಲೆ ಮಣ್ಣುಹಾಕಿಕೊಂಡು ನೆರೆದು ಬಂದರು.


ಯಾವ ಯಾವ ಸಂಸ್ಥಾನಗಳಲ್ಲಿ ಅರಸನ ಆಜ್ಞೆಯೂ ಮತ್ತು ನಿರ್ಣಯವೂ ಪ್ರಕಟವಾದವೋ ಅಲ್ಲೆಲ್ಲಾ ಯೆಹೂದ್ಯರೊಳಗೆ ಮಹಾದುಃಖವೂ, ಉಪವಾಸ, ರೋದನೆ ಮತ್ತು ಪ್ರಲಾಪಗಳೂ ಉಂಟಾದವು. ಅನೇಕರು ಗೋಣಿತಟ್ಟನ್ನು ಹಾಸಿ ಬೂದಿಹಾಕಿಕೊಂಡು ಅದರ ಮೇಲೆ ಕುಳಿತುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು