Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಯಿ ಎಂಬ ಊರಿನ ಅರಸನು ಬೆಳಿಗ್ಗೆ ಇದನ್ನು ತಿಳಿದು ತ್ವರೆಯಾಗಿ ಜನರೆಲ್ಲರ ಸಹಿತವಾಗಿ ಇಸ್ರಾಯೇಲ್ಯರ ವಿರುದ್ಧ ಯುದ್ಧ ಮಾಡುವುದಕ್ಕೆ ಹೊರಟನು. ಅವನೂ ಅವನ ಜನರೂ ಅರಾಬಾ ಎಂಬ ಕಣಿವೆಯ ಪ್ರದೇಶವು ಕಾಣುವ ಸ್ಥಳಕ್ಕೆ ಬಂದರು. ಪಟ್ಟಣದ ಹಿಂಭಾಗದಲ್ಲಿ ಹೊಂಚಿನೋಡುತ್ತಿರುವುದು ಅವನಿಗೆ ಗೊತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಬೆಳಿಗ್ಗೆ ಆಯಿ ಊರಿನರಸನು ಈ ಸಮಾಚಾರವನ್ನು ತಿಳಿದು ತ್ವರೆಯಾಗಿ ಜನರೆಲ್ಲರ ಸಹಿತ ಇಸ್ರಯೇಲರ ಸಂಗಡ ಯುದ್ಧಮಾಡಲು ಹೊರಟನು. ಅವನೂ ಅವನ ಜನರೂ ಅರಾಬಾ ಎಂಬ ಸ್ಥಳಕ್ಕೆ ಎದುರಾಗಿದ್ದ ಆ ಕಣಿವೆಗೆ ಬಂದರು. ನಗರದ ಹಿಂಭಾಗದಲ್ಲಿ ಹೊಂಚಿ ನೋಡುತ್ತಿರುವವರ ವಿಷಯ ಅವನಿಗೆ ಗೊತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಯಿ ಎಂಬ ಊರಿನ ಅರಸನು ಬೆಳಿಗ್ಗೆ ಇದನ್ನು ತಿಳಿದು ತ್ವರೆಯಿಂದ ಜನರೆಲ್ಲರ ಸಹಿತವಾಗಿ ಇಸ್ರಾಯೇಲ್ಯರ ಸಂಗಡ ಯುದ್ಧಮಾಡುವದಕ್ಕೆ ಹೊರಟನು. ಅವನೂ ಅವನ ಜನರೂ ಅರಾಬಾ ಎಂಬ ತಗ್ಗಾದ ಪ್ರದೇಶವು ಕಾಣುವ ಸ್ಥಳಕ್ಕೆ ಬಂದರು. ಪಟ್ಟಣದ ಹಿಂಭಾಗದಲ್ಲಿ ಹೊಂಚಿನೋಡುತ್ತಿರುವದು ಅವನಿಗೆ ಗೊತ್ತಿದ್ದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ತರುವಾಯ “ಆಯಿ”ಯ ಅರಸನು ಇಸ್ರೇಲರ ಸೈನ್ಯವನ್ನು ನೋಡಿದನು. ಅರಸನು ಮತ್ತು ಅವನ ಜನರು ಇಸ್ರೇಲರ ಸೈನ್ಯದೊಂದಿಗೆ ಯುದ್ಧಮಾಡಿ ಮುಗಿಸುವುದಕ್ಕಾಗಿ ತ್ವರೆಮಾಡಿ ಹೊರಟರು. “ಆಯಿ”ಯ ಅರಸನು ಪಟ್ಟಣದ ಪೂರ್ವಕ್ಕೆ ಹೋದನು. ಆದ್ದರಿಂದ ಅವನು ಪಟ್ಟಣದ ಹಿಂಭಾಗದಲ್ಲಿ ಅಡಗಿದ್ದ ಸೈನಿಕರನ್ನು ನೋಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಯಿ ಎಂಬ ಪಟ್ಟಣದ ಅರಸನು ಇದನ್ನು ಕಂಡಾಗ, ಆ ಪಟ್ಟಣದ ಜನರು ತ್ವರೆಪಟ್ಟು, ಉದಯಕಾಲದಲ್ಲಿ ಎದ್ದು, ನಿಶ್ಚಯಿಸಿದ ವೇಳೆಯಲ್ಲಿ ಆಯಿ ಎಂಬ ಪಟ್ಟಣದ ಅರಸನೂ ಅವನ ಜನರೆಲ್ಲರೂ ಇಸ್ರಾಯೇಲಿಗೆ ಎದುರಾಗಿ ಯುದ್ಧಮಾಡಲು ಬಯಲಿಗೆ ಹೊರಟರು. ಅವನೂ ಅವನ ಜನರೂ ಅರಾಬಾ ಎಂಬ ತಗ್ಗಾದ ಪ್ರದೇಶವು ಕಾಣುವ ಸ್ಥಳಕ್ಕೆ ಬಂದರು. ಆದರೆ ಅವನು ಪಟ್ಟಣದ ಹಿಂದೆ ತನಗೋಸ್ಕರ ಹೊಂಚಿಕೊಂಡಿರುವವರನ್ನು ಅರಿಯದೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:14
15 ತಿಳಿವುಗಳ ಹೋಲಿಕೆ  

ಪ್ರಳಯದ ನೀರು ಬಂದು ಎಲ್ಲರನ್ನು ಕೊಚ್ಚಿಕೊಂಡು ಹೋಗುವ ತನಕ ಅವರು ಏನೂ ತಿಳಿಯದೆ ಇದ್ದರಲ್ಲಾ. ಅದರಂತೆಯೇ ಮನುಷ್ಯಕುಮಾರನು ಬರುವ ಕಾಲದಲ್ಲಿಯೂ ಇರುವುದು.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ.


ಅವನು ನೆನಸದ ದಿನದಲ್ಲಿಯೂ, ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾಗಿ ದಂಡಿಸಿ


ಈ ಮಾತು ರಾಜನ ಬಾಯಿಂದ ಹೊರಡುತ್ತಿರುವಾಗ, “ಅರಸನಾದ ನೆಬೂಕದ್ನೆಚ್ಚರನೇ, ನಿನಗಾದ ದೈವೋಕ್ತಿಯನ್ನು ಕೇಳು;


ಚೋಯನಿನ ಪ್ರಭುಗಳು ಮೂರ್ಖರಾಗಿದ್ದಾರೆ. ನೋಫಿನ ಪ್ರಧಾನರು ಮೋಸ ಹೋಗಿದ್ದಾರೆ. ಐಗುಪ್ತದ ಕುಲಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿದ್ದಾರೆ.


ಚೋಯನಿನ ಪ್ರಭುಗಳು ಕೇವಲ ಬುದ್ಧಿಹೀನರು. ಫರೋಹನ ಮಂತ್ರಿಗಳಲ್ಲಿ ಜ್ಞಾನವುಳ್ಳ ಸಲಹೆಗಾರರ ಆಲೋಚನೆಯೂ ಜ್ಞಾನರಹಿತವಾಗಿರುತ್ತದೆ. ನೀನು ಫರೋಹನಿಗೆ, “ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜನ ವಂಶದವನು? ಎಂದು ಹೇಗೆ ತಾನೆ ಹೇಳಿಕೊಳ್ಳುವಿರಿ.


ಮನುಷ್ಯನೋ ತನ್ನ ಕಾಲ ಗತಿಯನ್ನು ತಿಳಿಯನಷ್ಟೆ. ಮೀನುಗಳು ಕೆಟ್ಟ ಬಲೆಗೂ, ಪಕ್ಷಿಗಳು ಉರುಲಿನಲ್ಲಿ ಸಿಕ್ಕಿಬೀಳುವ ಹಾಗೆ ಮನುಷ್ಯರು ಪ್ರಾಣಿಗಳ ಹಾಗೆ ತಮ್ಮ ಮೇಲೆ ತಟ್ಟನೆ ಬೀಳುವ ಕೇಡಿನ ಕಾಲಕ್ಕೆ ಸಿಕ್ಕಿಕೊಳ್ಳುವರು.


ಆಯಿ ಎಂಬ ಪಟ್ಟಣದವರು ಊರಿನಲ್ಲಿದ್ದ ತಮ್ಮ ಎಲ್ಲಾ ಜನರನ್ನೂ ಕರೆದುಕೊಂಡು ಯೆಹೋಶುವನನ್ನು ಹಿಂದಟ್ಟುತ್ತಾ ಪಟ್ಟಣವನ್ನು ದೂರವಾಗಿ ಓಡತೊಡಗಿದರು.


ನಾನೂ ಮತ್ತು ನನ್ನ ಸಂಗಡ ಇರುವ ಜನರೆಲ್ಲರೂ ಪಟ್ಟಣದ ಸಮೀಪಕ್ಕೆ ಹೋಗುವೆವು. ಅವರು ಮೊದಲಿನಂತೆ ನಮ್ಮೊಡನೆ ಯುದ್ಧಕ್ಕೆ ಬಂದ ಕೂಡಲೆ ನಾವು ಓಡಿ ಹೋಗುವೆವು.


ಯೊರ್ದನ್ ನದಿಯ ಆಚೆ, ಪಾರಾನ್, ತೋಫೆಲ್, ಲಾಬಾನ್, ಹಚೇರೋತ್ ಮತ್ತು ದೀಜಾಹಾಬ್ ಎಂಬ ಸ್ಥಳಗಳ ನಡುವೆ, ಅರಣ್ಯದಲ್ಲಿ ಆರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಸೂಫಿಗೆ ಎದುರಾಗಿ ಮೋಶೆಯು ಇಸ್ರಾಯೇಲರೆಲ್ಲರಿಗೆ ಮಾಡಿದ ಉಪದೇಶ ಮತ್ತು ಉಪನ್ಯಾಸಗಳು.


ಪಟ್ಟಣದ ಉತ್ತರದಲ್ಲಿದ್ದ ಎಲ್ಲಾ ಸೈನ್ಯವನ್ನೂ ಪಟ್ಟಣದ ಪಶ್ಚಿಮದಲ್ಲಿ ಹೊಂಚಿನೋಡುತ್ತಿದ್ದ ಸೈನ್ಯವನ್ನೂ ಕ್ರಮಪಡಿಸಿಕೊಂಡು ಯೆಹೋಶುವನು ಆ ರಾತ್ರಿಯಲ್ಲಿ ಕಣಿವೆಗೆ ಹೋದನು.


ಯೆಹೋಶುವನೂ ಅವನ ಸಂಗಡ ಇದ್ದ ಇಸ್ರಾಯೇಲ್ಯರೆಲ್ಲರೂ ತಾವು ಸೋತವರೋ ಎಂಬಂತೆ ಅರಣ್ಯಮಾರ್ಗವಾಗಿ ಓಡತೊಡಗಿದರು.


ಅಷ್ಟರಲ್ಲಿ ಅಡಗಿಕೊಂಡಿದ್ದವರು ಎದ್ದು ಗಿಬೆಯಕ್ಕೆ ಶೀಘ್ರವಾಗಿ ಹೋಗಿ, ಅದರೊಳಗಿದ್ದವರೆಲ್ಲರನ್ನೂ ಕತ್ತಿಯಿಂದ ಸಂಹರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು